ನಾಡಿನಾದ್ಯಂತ ಆಯುಧ ಪೂಜೆ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ಬೆಲೆ ದುಬಾರಿಯಾದರೂ ಹೂವು-ಹಣ್ಣು ಖರೀದಿ ಜೋರು

ಶಕ್ತಿ ದೇವತೆಗಳಾದ ಸರಸ್ವತಿ, ಲಕ್ಷ್ಮಿ ಹಾಗೂ ಪಾರ್ವತಿ ದೇವಿಯನ್ನು ಪೂಜೆಸಲಾಗುತ್ತಿದೆ. ಯಂತ್ರಗಳು, ವಾಹನಗಳು ಮತ್ತಿತರ ಸಾಧನಗಳನ್ನು ಹೂಗಳಿಂದ ಅಲಂಕರಿಸಿ ಪೂಜೆ ಸಲ್ಲಿಸುತ್ತಿರುವ ದೃಶ್ಯ ಎಲ್ಲೆಡೆ ಸಾಮಾನ್ಯವಾಗಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ಬೆಂಗಳೂರು: ಮೈಸೂರು ಅರಮನೆ ಸೇರಿದಂತೆ ರಾಜ್ಯಾದ್ಯಂತ ಆಯುಧಪೂಜೆಯ ಸಂಭ್ರಮ ಕಳೆಗಟ್ಟಿದೆ. ಆಯುಧ ಪೂಜೆ ನವರಾತ್ರಿ ಹಬ್ಬದ ಒಂದು ಭಾಗವಾಗಿದ್ದು, ದಸರಾ ಹಬ್ಬದ ಕೊನೆಯ ದಿನ ಶಸಾಸ್ತ್ರ ಹಾಗೂ ಸಾಧನಗಳನ್ನು ಪೂಜೆಸಲಾಗುತ್ತದೆ. ಮನೆ ಹಾಗೂ ಕಚೇರಿಯನ್ನು ಹೂಗಳಿಂದ ಅಲಂಕರಿಸಿ, ಶಸಾಸ್ತ್ರಗಳಿಗೆ ವಿಶೇಷ ಪೂಜೆ ಸಲ್ಲಿಸಲಾಗುತ್ತಿದೆ.

ಶಕ್ತಿ ದೇವತೆಗಳಾದ ಸರಸ್ವತಿ, ಲಕ್ಷ್ಮಿ ಹಾಗೂ ಪಾರ್ವತಿ ದೇವಿಯನ್ನು ಪೂಜೆಸಲಾಗುತ್ತಿದೆ. ಯಂತ್ರಗಳು, ವಾಹನಗಳು ಮತ್ತಿತರ ಸಾಧನಗಳನ್ನು ಹೂಗಳಿಂದ ಅಲಂಕರಿಸಿ ಪೂಜೆ ಸಲ್ಲಿಸುತ್ತಿರುವ ದೃಶ್ಯ ಎಲ್ಲೆಡೆ ಸಾಮಾನ್ಯವಾಗಿದೆ. ಮೈಸೂರಿನ ಅರಮನೆ ಮೈದಾನದೊಳದೆ ರಾಜಮನೆತನದಿಂದ ಆಯಧ ಪೂಜೆಯನ್ನು ಆಚರಿಸಲಾಗುತ್ತಿದೆ.

ಆಯುಧ ಪೂಜೆಗೆ ಐತಿಹಾಸಿಕ ದಂತಕಥೆವಿದೆ. ದುರ್ಗಾ ದೇವಿಯು ಚಾಮುಂಡೇಶ್ವರಿಯ ರೂಪ ತಾಳಿ ಮಹಿಷಾಸುರನನ್ನು ಸಂಹರಿಸಿದ ಸಂದರ್ಭದಲ್ಲಿ ದೇವಿ ಉಪಯೋಗಿಸಿದ ಆಯುಧಗಳನ್ನು ಮತ್ತೆ ಬಳಸದೆ ಬಿಸಾಡಿದಳು. ಆ ಆಯುಧಗಳನ್ನು ನಂತರ ಪೂಜೆಸಲಾಯಿತು. ಹಾಗಾಗಿಯೇ ಆಯುಧ ಪೂಜೆಯನ್ನು ಆಚರಿಸಲಾಗುತ್ತದೆ ಎಂಬ ಕಥೆ ಪುರಾಣಗಳಲ್ಲಿ ಉಲ್ಲೇಖವಾಗಿದೆ.

ಆಯುಧ ಪೂಜೆಯ ಹಿಂದೆ ಪೌರಾಣಿಕ ಮಹತ್ವವಿದೆ. ದ್ವಾಪರ ಯುಗದಲ್ಲಿ ಪಾಂಡವರು ಹದಿಮೂರು ವರ್ಷಗಳ ವನವಾಸ ಮುಗಿಸಿ ಒಂದು ವರ್ಷ ಅಜ್ಞಾತವಾಸ ಮುಗಿಸಿದ ದಿನವೇ ವಿಜಯದಶಮಿ, ಅಜ್ಞಾತವಾಸದ ಸಮಯದಲ್ಲಿ ಬನ್ನಿಗಿಡದಲ್ಲಿ ಬಚ್ಚಿಟ್ಟಿದ್ದ ತಮ್ಮ ಶಸ್ತ್ರಾಸ್ತ್ರಗಳನೆಲ್ಲ ತೆಗೆದು ಶತ್ರುಗಳ ವಿರುದ್ಧ ಪಾಂಡವರು ವಿಜಯವನ್ನು ಸಾಧಿಸುತ್ತಾರೆ. ನವರಾತ್ರಿ ಹಬ್ಬ ಮುಗಿಸಿ ದಶಮಿಯಂದು ಸಾಧಿಸಿದ ವಿಜಯದ ಕುರುಹಾಗಿ ಆಯುಧ ಪೂಜೆಯನ್ನು ಆಚರಿಸಲಾಗುತ್ತದೆ.

ನಗರದ ಪ್ರಮುಧ ದೇವಾಲಯಗಳಲ್ಲಿ ವಿಶೇಷ ಪೂಜೆಗಳು ನಡೆಯುತ್ತಿದ್ದು, ಜನರು ಕೂಡ ಮನೆ ಹಾಗೂ ದೇವಾಲಯಗಳಿಗೆ ಭೇಟಿ ನೀಡಿ ದೇವರಿಗೆ ಹಾಗೂ ವಾಹನಗಳಿಗೆ ವಿಶೇಷ ಪೂಜೆ ಸಲ್ಲಿಸುತ್ತಿದ್ದಾರೆ.

ಈ ನಡುವೆ ಹಬ್ಬದ ಪ್ರಯುಕ್ತ ಹೂವು, ಹಣ್ಣು, ಕುಂಬಳಕಾಯಿ, ಲಿಂಬೆಹಣ್ಣು, ತೆಂಗಿನಕಾಯಿ ಸೇರಿದಂತೆ ಹಬ್ಬಕ್ಕೆ ಅಗತ್ಯವಿರುವ ವಸ್ತುಗಳ ಬೆಲೆ ಗಗನಕ್ಕೇರಿದ್ದು, ಬೆಲೆ ಏರಿಕೆಯಾಗಿದ್ದರೂ ಖರೀದಿ ಮಾತ್ರ ಜೋರಾಗಿಯೇ ಇದೆ.

ಸಂಗ್ರಹ ಚಿತ್ರ
ಮಹಾನವಮಿ ಅಂಗವಾಗಿ ಮೈಸೂರು ಅರಮನೆಯಲ್ಲಿ ಆಯುಧ ಪೂಜೆ

ಮೈಸೂರಿನಲ್ಲಿ ದಸರಾ ಸಂಭ್ರಮ

ಇನ್ನು ಮೈಸೂರು ದಸರಾದ ಪ್ರಮುಖ ಆಕರ್ಷಣೆಯಾದ ಜಂಬೂಸವಾರಿ ಶನಿವಾರ ನಡೆಯಲಿದ್ದು, ಇದರೊಂದಿಗೆ ಕಳೆದ 9 ದಿನಗಳ ಸಂಪ್ರದಾಯಿಕ ನಾಡಹಬ್ಬಕ್ಕೆ ತೆರೆ ಬೀಳಲಿದೆ.

ದಸರೆಯ ಆರಂಭದ ದಿನದಿಂದಲೂ ಖಾಸಗಿ ದರ್ಬಾರ್ ನಡೆಸುತ್ತಿರುವ ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅ.11ರಂದು ಆಯುಧಪೂಜೆ, 12ರಂದು ವಿಜಯದಶಮಿ ಮೆರವಣಿಗೆ ನಡೆಸುವರು ಇದಾದ ನಂತರವೇ ಸರ್ಕಾರಿ ದಸರಾ ಮೆರವಣಿಗೆ ಆರಂಭವಾಗಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com