ಕೆಆರ್ ಮಾರುಕಟ್ಟೆ (ಸಂಗ್ರಹ ಚಿತ್ರ)
ಕೆಆರ್ ಮಾರುಕಟ್ಟೆ (ಸಂಗ್ರಹ ಚಿತ್ರ)

ದಸರಾ-ದೀಪಾವಳಿ: ಘನತ್ಯಾಜ್ಯ ನಿರ್ವಹಣೆಗೆ BBMP ಮಾರ್ಗಸೂಚಿ ಬಿಡುಗಡೆ

ಬೆಂಗಳೂರಿನ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ದಸರಾ ಹಾಗೂ ದೀಪಾವಳಿ ಹಬ್ಬದ ಪ್ರಯುಕ್ತ ಹೆಚ್ಚುವರಿ ತ್ಯಾಜ್ಯ, ಉತ್ಪತ್ತಿಯಾಗುತ್ತದೆಂದು ಅಂದಾಜಿಸಲಾಗಿದ್ದು, ಹಬ್ಬದ ದಿನಗಳಂದು ಹಾಗೂ ನಂತರ ಘನತ್ಯಾಜ್ಯವನ್ನು ಸಮರ್ಪಕವಾಗಿ ವಿಲೇವಾರಿ ಮಾಡಲು ಮಾರ್ಗಸೂಚಿಗಳನ್ನು ಅನುಸರಿಸಬೇಕೆಂದು ಸೂಚಿಸಲಾಗಿದೆ.
Published on

ಬೆಂಗಳೂರು: ದಸರಾ ಹಾಗೂ ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ನಗರದಲ್ಲಿ ಉತ್ಪತ್ತಿಯಾಗುವ ಹೆಚ್ಚುವರಿ ತ್ಯಾಜ್ಯ ನಿರ್ವಹಣೆಗೆ ಬೆಂಗಳೂರು ಬೃಹತ್ ಮಹಾನಗರ ಪಾಲಿಕೆ ಮಾರ್ಗಸೂಚಿ ಬಿಡುಗಡೆ ಮಾಡಿದೆ.

ರಾಜ್ಯ ರಾಜಧಾನಿ ಬೆಂಗಳೂರಿನ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ದಸರಾ ಹಾಗೂ ದೀಪಾವಳಿ ಹಬ್ಬದ ಪ್ರಯುಕ್ತ ಹೆಚ್ಚುವರಿ ತ್ಯಾಜ್ಯ, ಉತ್ಪತ್ತಿಯಾಗುತ್ತದೆಂದು ಅಂದಾಜಿಸಲಾಗಿದ್ದು, ಹಬ್ಬದ ದಿನಗಳಂದು ಹಾಗೂ ನಂತರ ಘನತ್ಯಾಜ್ಯವನ್ನು ಸಮರ್ಪಕವಾಗಿ ವಿಲೇವಾರಿ ಮಾಡಲು ಈ ಕೆಳಕಂಡಂತೆ ವಿಲೇವಾರಿ ಕ್ರಮಗಳನ್ನು ಅನುಸರಿಸಬೇಕು ಎಂದು ಪಾಲಿಕೆ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಕಟ್ಟುನಿಟ್ಟಾಗಿ ಸೂಚಿಸಿದ್ದಾರೆ.

ಕೆಆರ್ ಮಾರುಕಟ್ಟೆ (ಸಂಗ್ರಹ ಚಿತ್ರ)
ಬೆಂಗಳೂರು: ಸಿಗರೇಟ್ ತುಂಡುಗಳ ಎಸೆಯಲು ಪ್ರತ್ಯೇಕ ಡಬ್ಬ ಒದಗಿಸಲು ಬಿಬಿಎಂಪಿ ಚಿಂತನೆ!
  • ಬಾಳೇಕಂದು, ಮಾವಿನ ಎಲೆ, ಹೂವು ಹಾಗೂ ಇತರೆ ಹಬ್ಬದ ವಸ್ತುಗಳನ್ನು ಮಾರಾಟ ಮಾಡುವ ವ್ಯಾಪಾರಿಗಳಿಗೆ ವಿಶೇಷವಾಗಿ ಮಾರುಕಟ್ಟೆಗಳಲ್ಲಿ ಹಸಿ ಮತ್ತು ಒಣ ತ್ಯಾಜ್ಯವನ್ನು ವಿಂಗಡಿಸಿ ನೀಡಲು ಅರಿವು ಮೂಡಿಸುವುದು.

  • ಹಬ್ಬದ ದಿನಗಳಂದು ಉತ್ಪತ್ತಿಯಾಗುವ ಬಾಳೇಕಂದು, ಮಾವಿನ ಎಲೆ ಹಾಗೂ ಇತರೆ ಹಸಿರು ತ್ಯಾಜ್ಯವನ್ನು ಹಸಿತ್ಯಾಜ್ಯ ಸಂಸ್ಕರಣಾ ಘಟಕಗಳಲ್ಲಿ ಇರುವ ಶೆಡ್ಡರ್ಸ್ ಗಳಿಗೆ ವಿಲೇವಾರಿ ಮಾಡುವುದು.

  • ದಸರಾ ಹಾಗೂ ದೀಪಾವಳಿ ಹಬ್ಬದ ಪ್ರಯುಕ್ತ ಉತ್ಪತ್ತಿಯಾಗುವ ಹೆಚ್ಚುವರಿ ತ್ಯಾಜ್ಯವನ್ನು ಅಂದಾಜಿಸಿ. ಸದರಿ ತ್ಯಾಜ್ಯವನ್ನು ಸಂಪೂರ್ಣವಾಗಿ ಸಂಗ್ರಹಿಸಿ, ವಿಲೇವಾರಿ ಮಾಡಲು ಅಗತ್ಯ ಕ್ರಮ ಪಹಿಸುವುದು.

  • ಬ್ಲಾಕ್‌ಸ್ಪಾಟ್‌(ಕಸ ಸುರಿಯುವ ಸ್ಥಳ)ಗಳಲ್ಲಿ ತ್ಯಾಜ್ಯ ಶೇಖರಣೆಗೊಂಡು ಸಾರ್ವಜನಿಕರಿಗೆ ತೊಂದರೆಯಾಗದಂತೆ ವಿಶೇಷ ಗಮನ ಹರಿಸುವುದು ಹಾಗೂ ಮಾರುಕಟ್ಟೆಗಳು ಮತ್ತು ಇತರೆ ಸಾರ್ವಜನಿಕ ಸ್ಥಳಗಳಲ್ಲಿ ನಿರ್ಮಾಣವಾಗುವ ಬ್ಲಾಕ್ ಸ್ಪಾಟ್‌ ಗಳನ್ನು ಸಂಪೂರ್ಣವಾಗಿ ಸ್ವಚ್ಛಗೊಳಿಸಲು ಕ್ರಮವಹಿಸುವುದು.

  • ಮಾರುಕಟ್ಟೆಗಳು ಹಾಗೂ ಇತರೆ ಸಾರ್ವಜನಿಕ ಸ್ಥಳಗಳಲ್ಲಿ ಹಬ್ಬದ ಸಾಮಾನುಗಳನ್ನು ಮಾರಾಟ ಮಾಡುವ ವ್ಯಾಪಾರಿಗಳು ಏಕ ಬಳಕೆ ಪ್ಲಾಸ್ಟಿಕ್‌ಗಳನ್ನು ಬಳಸದಂತೆ ನಿಗಾವಹಿಸಲು ವಾರ್ಡ್‌ಗಳಲ್ಲಿ ಘನತ್ಯಾಜ್ಯ ಆರೋಗ್ಯ ಅಧಿಕಾರಿಗಳ ಮತ್ತು ಮಾರ್ಷಲ್‌ಗಳು ತಂಡಗಳನ್ನು ರಚಿಸಿಕೊಂಡು ದಿನಂಪ್ರತಿ ಪರಿವೀಕ್ಷಣೆ ಕೈಗೊಂಡು ಪ್ಲಾಸ್ಟಿಕ್ ಮಾರಾಟ / ಬಳಕೆದಾರರಿಗೆ ನಿಯಮಾನುಸಾರ ದಂಡ ವಿಧಿಸಿ ಪ್ಲಾಸ್ಟಿಕ್‌ನ್ನು ವಶಪಡಿಸಿಕೊಂಡು ಮರುಬಳಕೆಯಾಗದಂತೆ ಅಗತ್ಯ ಕ್ರಮವಹಿಸುವುದು.

  • ಹಬ್ಬದ ಪ್ರಯುಕ್ತ ಮಾರುಕಟ್ಟೆಗಳು ಹಾಗೂ ಇತರೆ ಪ್ರದೇಶಗಳಲ್ಲಿ ಬಾಳೇಕಂದು, ಮಾವಿನ ಎಲೆ, ಹೂವು ಮತ್ತು ಇತರೆ ಹಸಿ ತ್ಯಾಜ್ಯವನ್ನು ಆದ್ಯತೆ ಮೇರೆಗೆ ವಾರ್ಡ್‌ಗಳಲ್ಲಿಯೇ ಹಸಿ/ತೋಟಗಾರಿಕೆ ತ್ಯಾಜ್ಯ ಸಂಸ್ಕರಣಾ ಸೌಲಭ್ಯಗಳನ್ನು ಕಲ್ಪಿಸಿಕೊಂಡು ವಿಲೇವಾರಿ ಮಾಡುವುದು ಅಥವಾ ವಾರ್ಡ್‌ಗಳಲ್ಲಿ ವಿಕೇಂದ್ರೀಕೃತ ಹಸಿ ತ್ಯಾಜ್ಯ ಸಂಸ್ಕರಣಾ ಘಟಕಗಳಿದ್ದಲ್ಲಿ ಅಲ್ಲಿಗೆ ವಿಲೇವಾರಿ ಮಾಡುವುದು.

ಮೇಲಿನ ನಿರ್ದೇಶನಗಳನ್ನು ಕಟ್ಟುನಿಟಾಗಿ ಪಾಲಿಸಿ ದಸರಾ ಹಾಗೂ ದೀಪಾವಳಿ ಹಬ್ಬದ ದಿನಗಳಂದು ಸಾರ್ವಜನಿಕರಿಗೆ ತೊಂದರೆ ಆಗದಂತೆ ಎಚ್ಚರ ವಹಿಸಬೇಕು ಎಂದು ಆಯುಕ್ತರು ಸೂಚಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Advertisement

X
Kannada Prabha
www.kannadaprabha.com