
ಮೈಸೂರು: ಮೈಸೂರಿನಲ್ಲಿ ವಿಶ್ವವಿಖ್ಯಾತ ಜಂಬೂ ಸವಾರಿಗೆ ಚಾಲನೆ ದೊರೆತಿದೆ.
ನಾಡದೇವತೆ ಚಾಮುಂಡೇಶ್ವರಿಗೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ರಿಂದ ಪುಷ್ಪಾರ್ಚನೆ ಮಾಡುವ ಮೂಲಕ ಜಂಬೂಸವಾರಿಗೆ ಚಾಲನೆ ದೊರೆತಿದ್ದು, ಕೋಟ್ಯಾಂತರ ಭಕ್ತರು ಚಿನ್ನದ ಅಂಬಾರಿಯಲ್ಲಿ ಪ್ರತಿಷ್ಠಾಪಿಸಲಾದ ನಾಡದೇವಿ ಚಾಮುಂಡೇಶ್ವರಿಯನ್ನು ಕಣ್ತುಂಬಿಕೊಂಡರು.
ಅಭಿಮನ್ಯು ಆನೆ ನಾಡ ಅಧಿದೇವತೆ ಚಾಮುಂಡೇಶ್ವರಿಯನ್ನು ಹೊತ್ತು ಹೆಜ್ಜೆ ಹಾಕಿದೆ. ಅರಮನೆಯಿಂದ ಬನ್ನಿಮಂಟಪದವರೆಗೆ ಜಂಬೂಸವಾರಿ ಮೆರವಣಿಗೆ ನಡೆಯಲಿದೆ. ಜಂಬೂಸವಾರಿ ಪೂರ್ಣಗೊಂಡ ನಂತರ ಬನ್ನಿಮಂಟಪದ ಮೈದಾನದಲ್ಲಿ ದಸರಾ ಪಂಜಿನ ಕವಾಯತು ನಡೆಯಲಿದೆ.
ನಿಗದಿತ ಸಮಯಕ್ಕಿಂತ ತಡವಾಗಿ ಜಂಬೂಸವಾರಿಗೆ ಪುಷ್ಪಾರ್ಚನೆ ನೆರವೇರಿತು. 4.40 ರಿಂದ 5 ಗಂಟೆಯ ಒಳಗೆ ಸಲ್ಲುವ ಮೀನ ಲಗ್ನದಲ್ಲಿ ಉಪ್ಪಾರ್ಚನೆ ಆಗಬೇಕಿತ್ತು. ಆದರೆ 9 ನಿಮಿಷಗಳು ತಡವಾಗಿದೆ.
Advertisement