ವಿಜಯದಶಮಿಯಂದೇ ಜಿಟಿಜಿಟಿ ಮಳೆ: ಬೆಂಗಳೂರು, ರಾಜ್ಯದ ಹಲವೆಡೆ ಮುಂದಿನ 7 ದಿನ ವರ್ಷಧಾರೆ ಸಾಧ್ಯತೆ, ಅಲರ್ಟ್ ಘೋಷಣೆ!

ವಾಯುಭಾರ ಕುಸಿತದ ಹಿನ್ನಲೆಯಲ್ಲಿ ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಮುಂದಿನ ಮೂರು ದಿನಗಳವರೆಗೆ ಹಲವು ಕಡೆ ಮಳೆ ಸಾಧ್ಯತೆಯಿದೆ.
ವಿಜಯದಶಮಿಯಂದೇ ಜಿಟಿಜಿಟಿ ಮಳೆ: ಬೆಂಗಳೂರು, ರಾಜ್ಯದ ಹಲವೆಡೆ ಮುಂದಿನ 7 ದಿನ ವರ್ಷಧಾರೆ ಸಾಧ್ಯತೆ, ಅಲರ್ಟ್ ಘೋಷಣೆ!
Updated on

ಬೆಂಗಳೂರು: ಬೆಂಗಳೂರಿನ ಹಲವೆಡೆ ಇಂದು ಮಧ್ಯಾಹ್ನ ಜಿಟಿಜಿಟಿ ಮಳೆಯಾಗಿದ್ದು ಅಕ್ಟೋಬರ್ 17ರವರೆಗೆ ಬೆಂಗಳೂರು ಹಾಗೂ ಮುಂದಿನ 7 ದಿನಗಳ ಕಾಲ ರಾಜ್ಯದ ಹಲವೆಡೆ ಮಳೆಯಾಗುವ ಸಾಧ್ಯತೆ ಇದೆ ಎಂದ ಹವಾಮಾನ ಇಲಾಖೆ ಹೇಳಿದೆ.

ವಿಜಯದಶಮಿಯಂದೆ ಬೆಂಗಳೂರಿನಲ್ಲಿ ಮಳೆಯ ಸಿಂಚನವಾಗಿದ್ದು ಇಂದು ಮಧ್ಯಾಹ್ನದಿಂದಲೇ ನಗರದ ರಿಚ್​ಮಂಡ್​​ ವೃತ್ತ, ಶಾಂತಿನಗರ, ಆಡುಗೋಡಿ, ಕೆಆರ್ ಮಾರ್ಕೆಟ್, ಕಾರ್ಪೊರೇಷನ್​ ಸರ್ಕಲ್​, ಮೆಜೆಸ್ಟಿಕ್​ ಸೇರಿದಂತೆ ಹಲವೆಡೆ ಜಿಟಿಜಿಟಿ ಮಳೆಯಾಗಿದೆ. ಪೂರ್ವ ಅರಬ್ಬೀ ಸಮುದ್ರ ತೀರದಲ್ಲಿ ತೀವ್ರವಾಗಿ ವಾಯುಭಾರ ಕುಸಿತವಾಗಿದ್ದು ಮುಂದಿನ 7 ದಿನಗಳ ಕಾಲ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಮಳೆಯಾಗಲಿದೆ. ಇನ್ನು ಹಾವೇರಿ, ಇಲಕಲ್ ಮತ್ತು ಶಿವಮೊಗ್ಗದಲ್ಲಿ ಹೆಚ್ಚು ಮಳೆಯಾಗಿದೆ.

ವಾಯುಭಾರ ಕುಸಿತದ ಹಿನ್ನಲೆಯಲ್ಲಿ ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಮುಂದಿನ ಮೂರುದಿನಗಳವರೆಗೆ ಹಲವು ಕಡೆ ಮಳೆ ಸಾಧ್ಯತೆಯಿದೆ. ಇನ್ನು ಅಕ್ಟೋಬರ್16 ರಿಂದ 18ರವರೆಗೆ ಕರಾವಳಿಯಲ್ಲಿ ವ್ಯಾಪಕ ಮಳೆಯಾಗುವ ಸಂಭವವಿದೆ. ಬೆಳಗಾವಿ, ಧಾರವಾಡ, ಹಾವೇರಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಹಾಗೂ ತುಮಕೂರು ಜಿಲ್ಲೆಗಳ ಕೆಲವೆಡೆ ಭಾರಿ ಮಳೆಯಾಗಬಹುದು.

ವಿಜಯದಶಮಿಯಂದೇ ಜಿಟಿಜಿಟಿ ಮಳೆ: ಬೆಂಗಳೂರು, ರಾಜ್ಯದ ಹಲವೆಡೆ ಮುಂದಿನ 7 ದಿನ ವರ್ಷಧಾರೆ ಸಾಧ್ಯತೆ, ಅಲರ್ಟ್ ಘೋಷಣೆ!
ಪಾವೂರು ಉಳಿಯ ದ್ವೀಪದ 2 ಕಿಮೀ ವ್ಯಾಪ್ತಿಯಲ್ಲಿ ಮರಳುಗಾರಿಕೆಗೆ ನಿಷೇಧ

ಬೆಂಗಳೂರು, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ಮೈಸೂರು ಕೊಡಗು ಹಾಗೂ ಹಾಸನ ಜಿಲ್ಲೆಯ ಕೆಲವು ಕಡೆ ಭಾರಿ ಮಳೆ ಸಾಧ್ಯತೆಯಿದ್ದು, ಈ ಜಿಲ್ಲೆಗಳಿಗೆ ಅಕ್ಟೋಬರ್ 16, 17ರಂದು ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com