ಅತ್ಯಾಚಾರ ಆರೋಪ: A1 ಮುನಿರತ್ನ ಬಿಟ್ಟು ಉಳಿದವರ ಪೈಕಿ ಮೂವರಿಗೆ ಜಾಮೀನು ಮಂಜೂರು

ನ್ಯಾಯಮೂರ್ತಿ ಸಂತೋಷ್ ಗಜಾನನ ಭಟ್ ಅವರು, ಆರೋಪಿಗಳಾದ ಲೋಹಿತ್, ಕಿರಣ್ ಮತ್ತು ಮಂಜುನಾಥ್ ಗೆ ಜಾಮೀನು ಮಂಜೂರು ಮಾಡಿದರು.
Muniratna (file pic)
ಮುನಿರತ್ನonline desk
Updated on

ಬೆಂಗಳೂರು: ಲೈಂಗಿಕ ಕಿರುಕುಳ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ A1 ಆರೋಪಿ ಮುನಿರತ್ನ ಹೊರತು ಪಡಿಸಿ ಉಳಿದವರ ಮೂವರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

ಇಂದು ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸಂತೋಷ್ ಗಜಾನನ ಭಟ್ ಅವರು, ಆರೋಪಿಗಳಾದ ಲೋಹಿತ್, ಕಿರಣ್ ಮತ್ತು ಮಂಜುನಾಥ್ ಗೆ ಜಾಮೀನು ಮಂಜೂರು ಮಾಡಿದರು.

Information Technology Act 2000, ಐಪಿಸಿ ಸೆಕ್ಷನ್ 354ಎ, 354ಸಿ, 376, 506, 504, 120(ಬಿ), 149, 384, 406, 308 ಅಡಿಯಲ್ಲಿ ಕೇಸ್‌ ದಾಖಲಾಗಿದೆ. ಮುನಿರತ್ನ ನಾಯ್ಡು (A1), ವಿಜಯ್‌ ಕುಮಾರ್‌ (A2), ಸುಧಾಕರ (A3), ಕಿರಣ್‌ ಕುಮಾರ್‌ (A4), ಲೋಹಿತ್‌ ಗೌಡ (A5), ಮಂಜುನಾಥ (A6), ಲೋಕಿ (A7) ಎಂಬವರ ವಿರುದ್ಧ ಎಫ್‌ಐಆರ್‌ (FIR) ದಾಖಲಾಗಿತ್ತು.

ಕಗ್ಗಲೀಪುರದ ಖಾಸಗಿ ರೆಸಾರ್ಟ್‌ನಲ್ಲಿ ಅತ್ಯಾಚಾರ ನಡೆದಿರುವುದಾಗಿ ಸಂತ್ರಸ್ತ ಮಹಿಳೆ ದೂರು ನೀಡಿದ್ದರು.

Muniratna (file pic)
ಇಬ್ಬರು ಮಾಜಿ ಮುಖ್ಯಮಂತ್ರಿಗಳಿಗೆ ಹನಿಟ್ರ್ಯಾಪ್; ಟಾರ್ಚರ್ ನೀಡಿ ಸಚಿವ ಸ್ಥಾನ ಪಡೆದಿದ್ದ ಮುನಿರತ್ನ: ಸಂತ್ರಸ್ತೆ ಹೇಳಿಕೆ

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com