
ಬೆಂಗಳೂರು: ದಂಪತಿ ತಮ್ಮ ಇಬ್ಬರು ಮಕ್ಕಳನ್ನು ಸಾಯಿಸಿ ತಾವು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಯಲಹಂಕದ ಬಳಿಯ ಸಿಂಗನಾಯಕನಹಳ್ಳಿ ಗ್ರಾಮದ ಯಡಿಯೂರಪ್ಪ ನಗರದಲ್ಲಿ ನಡೆದಿದೆ.
ಮೃತಪಟ್ಟವರನ್ನು ಅವಿನಾಶ್ (38ವ), ಅವರ ಪತ್ನಿ ಮಮತಾ (30ವ), ಪುತ್ರಿ ಅಧಿರಾ (5ವ) ಹಾಗೂ ಪುತ್ರ ಅಣ್ಣಯ್ಯ (3ವ) ಎಂದು ಗುರುತಿಸಲಾಗಿದೆ.
ಗುಲ್ಬರ್ಗ ಮೂಲದ ಅವಿನಾಶ್ ಕ್ಯಾಬ್ ಚಾಲಕರಾಗಿ ಕೆಲಸ ಮಾಡುತ್ತಿದ್ದರು. ನರಸಪ್ಪ ಎಂಬುವವರ ಮನೆಯಲ್ಲಿ ಬಾಡಿಗೆಗೆ ವಾಸವಿದ್ದರು. ಅವಿನಾಶ ಸಹೋದರ ಉದಯ್ ಪೊಲೀಸರಿಗೆ ದೂರು ನೀಡಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ರಾಜಾನುಕುಂಟೆ ಠಾಣೆ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ.
Advertisement