ಕರ್ನಾಟಕ ಸರ್ಕಾರ ವಜಾಗೊಳಿಸಲು ರಾಷ್ಟ್ರಪತಿಗಳಿಗೆ ಬಿಜೆಪಿ ಮನವಿ: ಬಿ ವೈ ವಿಜಯೇಂದ್ರ

ಬಂಟ್ವಾಳದಲ್ಲಿ ಪಕ್ಷದ ಕಾರ್ಯಕ್ರಮದ ನಂತರ ಸುದ್ದಿಗಾರರೊಂದಿಗೆ ಅ.15 ರಂದು ಮಾತನಾಡಿರುವ ವಿಜಯೇಂದ್ರ, ಸಿದ್ದರಾಮಯ್ಯ ಸರ್ಕಾರ ಅವ್ಯಾಹತವಾಗಿ ಭ್ರಷ್ಟಾಚಾರದಲ್ಲಿ ತೊಡಗಿದೆ ಎಂದು ಆರೋಪಿಸಿದ್ದಾರೆ.
BY Vijayendra
ಬಿ ವೈ ವಿಜಯೇಂದ್ರonline desk
Updated on

ಬಂಟ್ವಾಳ: ಅಧಿಕಾರಕ್ಕೆ ಬಂದಲ್ಲಿ ಭ್ರಷ್ಟಾಚಾರ ಮುಕ್ತ ಆಡಳಿತ ನೀಡುವುದಾಗಿ ಕಾಂಗ್ರೆಸ್ ಭರವಸೆ ನೀಡಿತ್ತು. ಆದರೆ ಅಧಿಕಾರಕ್ಕೆ ಬಂದ ಒಂದೂವರೆ ವರ್ಷದಲ್ಲಿ ರಾಜ್ಯ ಸರ್ಕಾರದ ಬಗ್ಗೆ ಜನತೆ ಭ್ರಮನಿರಸನಗೊಂಡಿದ್ದಾರೆ. ರಾಜ್ಯದಲ್ಲಿರುವ ಹಿಂದೂ ವಿರೋಧಿ ಸರ್ಕಾರವನ್ನು ವಜಾಗೊಳಿಸುವುದಕ್ಕಾಗಿ ಬಿಜೆಪಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಮನವಿ ಮಾಡಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹೇಳಿದ್ದಾರೆ.

ಬಂಟ್ವಾಳದಲ್ಲಿ ಪಕ್ಷದ ಕಾರ್ಯಕ್ರಮದ ನಂತರ ಸುದ್ದಿಗಾರರೊಂದಿಗೆ ಅ.15 ರಂದು ಮಾತನಾಡಿರುವ ವಿಜಯೇಂದ್ರ, ಸಿದ್ದರಾಮಯ್ಯ ಸರ್ಕಾರ ಅವ್ಯಾಹತವಾಗಿ ಭ್ರಷ್ಟಾಚಾರದಲ್ಲಿ ತೊಡಗಿದೆ. ದಲಿತರ ಅಭಿವೃದ್ಧಿಗಾಗಿ ಮೀಸಲಿಡಲಾಗಿದ್ದ ಹಣವನ್ನು ದುರುಪಯೋಗಪಡಿಸಿಕೊಂಡು ಅಹಿಂದ ಸಮುದಾಯಕ್ಕೆ ಅನ್ಯಾಯ ಮಾಡಿದೆ ಎಂದು ವಿಜಯೇಂದ್ರ ಆರೋಪಿಸಿದ್ದಾರೆ.

ವಾಲ್ಮೀಕಿ ನಿಗಮದಲ್ಲಿ 87 ಕೋಟಿ ಹಗರಣ ನಡೆದಿರುವುದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಒಪ್ಪಿಕೊಂಡಿದ್ದಾರೆ. ಮುಡಾ ಹಗರಣದಲ್ಲಿ ತಮ್ಮ ಪಾತ್ರವನ್ನು ನಿರಾಕರಿಸುತ್ತಲೇ ಬಂದಿರುವ ಸಿದ್ದರಾಮಯ್ಯ ಈಗ ನಿವೇಶನಗಳನ್ನು ವಾಪಸ್ ಕೊಡಿಸುವ ಮೂಲಕ ತಮ್ಮ ತಪ್ಪನ್ನು ಒಪ್ಪಿಕೊಂಡಿದ್ದಾರೆ,’’ ಎಂದು ಟೀಕಿಸಿದ ವಿಜಯೇಂದ್ರ, ರಾಜ್ಯ ಸರಕಾರ ಅಭಿವೃದ್ಧಿ ಕಾಮಗಾರಿಗಳಿಗೆ ಹಣ ಬಿಡುಗಡೆ ಮಾಡಿಲ್ಲ ಎಂದು ಆಡಳಿತ ಪಕ್ಷದ ಶಾಸಕ ರಾಜು ಕಾಗೆ ಅವರೇ ಹೇಳಿದ್ದಾರೆ. ಹಣದ ಕೊರತೆಯ ಬಗ್ಗೆ ಸಾರ್ವಜನಿಕವಾಗಿ ಹೇಳಿಕೆ ನೀಡಿದ್ದಾರೆಂದು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ಹುಬ್ಬಳ್ಳಿಯಲ್ಲಿ ನಡೆದ ಗಲಭೆಯಲ್ಲಿ ಭಾಗಿಯಾದವರ ಮೇಲಿನ ಆರೋಪಗಳನ್ನು ಹಿಂಪಡೆದಿರುವುದನ್ನು ವಿಜಯೇಂದ್ರ ಖಂಡಿಸಿದರು. ''ಪೊಲೀಸ್ ಠಾಣೆಗೆ ಬೆಂಕಿ ಹಚ್ಚಿದವರನ್ನು, ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದವರನ್ನು ರಾಜ್ಯ ಸರಕಾರ ಆರೋಪ ಕೈಬಿಡುವ ಮೂಲಕ ರಕ್ಷಣೆ ಮಾಡುತ್ತಿದೆ, ಎನ್‌ಐಎ ಪ್ರಕರಣದ ತನಿಖೆ ನಡೆಸಿದ್ದು, ಇಂತಹ ಗಲಭೆಕೋರರ ವಿರುದ್ಧ ಆರೋಪ ವಾಪಸ್ ಪಡೆದಿದ್ದು ತಪ್ಪು, ಇದನ್ನು ವಿರೋಧಿಸಿ ಅಕ್ಟೋಬರ್ 25ರಂದು ಹುಬ್ಬಳ್ಳಿಯಲ್ಲಿ ಬೃಹತ್ ಪ್ರತಿಭಟನೆ ನಡೆಸುತ್ತೇವೆ ಎಂದು ತಿಳಿಸಿದ್ದಾರೆ.

BY Vijayendra
ಸಿಎಂ ರಾಜೀನಾಮೆ ನೀಡುವುದು ನಿಶ್ಚಿತ: BJP ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ

ಏತನ್ಮಧ್ಯೆ, ಈ ಹಿಂದೆ ಪಕ್ಷದ ಹಿರಿಯ ನಾಯಕ ಕೋಟಾ ಶ್ರೀನಿವಾಸ ಪೂಜಾರಿ ಪ್ರತಿನಿಧಿಸುತ್ತಿದ್ದ ಮುಂಬರುವ ಉಪಚುನಾವಣೆ ಕ್ಷೇತ್ರದಲ್ಲಿ ತಮ್ಮ ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು ಗೆಲ್ಲುವ ವಿಶ್ವಾಸವನ್ನು ವಿಜಯೇಂದ್ರ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com