ದಸರಾ ಎಫೆಕ್ಟ್: ನಗರದಲ್ಲಿ 1,400 ಟನ್ ಹೆಚ್ಚು ಕಸ ಉತ್ಪತ್ತಿ, ಹಬ್ಬ ಮುಗಿದರೂ ಕರಗದ ತ್ಯಾಜ್ಯ ರಾಶಿ

ಅಕ್ಟೋಬರ್ 12 ರಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ನಗರದ ಎಲ್ಲಾ ಎಂಟು ವಲಯಗಳಿಂದ 6,306 ಮೆಟ್ರಿಕ್ ಟನ್ (ಎಂಟಿ) ತ್ಯಾಜ್ಯವನ್ನು ಸಂಗ್ರಹಿಸಿದೆ.
BBMP workers clear waste generated during the Dasara festival at a market
ಮಾರುಕಟ್ಟೆಯಲ್ಲಿ ಬಿದ್ದಿರುವ ಕಸದ ರಾಶಿಯನ್ನು ತೆರವುಗೊಳಿಸುತ್ತಿರುವ ಬಿಬಿಎಂಪಿ ಸಿಬ್ಬಂದಿ.
Updated on

ಬೆಂಗಳೂರು: ದಸರಾ ಹಬ್ಬದ ಹಿನ್ನೆಲೆಯಲ್ಲಿ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ತ್ಯಾಜ್ಯದ ಪ್ರಮಾಣ ಭಾರೀ ಪ್ರಮಾಣದಲ್ಲಿ ಹೆಚ್ಚಳವಾಗಿದ್ದು, ಕಳೆದ ಶುಕ್ರವಾರದಿಂದ ಭಾನುವಾರದವರೆಗೆ 1400 ಟನ್ ತ್ಯಾಜ್ಯ ಏರಿಕೆಯಾಗಿದೆ.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಅಕ್ಟೋಬರ್ 12 ರಂದು ಎಂಟು ವಲಯಗಳಿಂದ 6,306 ಮೆಟ್ರಿಕ್ ಟನ್ (ಎಂಟಿ) ತ್ಯಾಜ್ಯವನ್ನು ಸಂಗ್ರಹಿಸಿದೆ. ಸಾಮಾನ್ಯವಾಗಿ ಈ ವಲಯಗಳಲ್ಲಿ ಪ್ರತಿನಿತ್ಯ ಸುಮಾರು 4,900 ಮೆಟ್ರಿಕ್ ಟನ್ ಸಂಗ್ರಹವಾಗುತ್ತಿತ್ತು.

ಬೆಂಗಳೂರು ಸಾಲಿಡ್ ವೇಸ್ಟ್ ಮ್ಯಾನೇಜ್‌ಮೆಂಟ್ ಲಿಮಿಟೆಡ್‌ನ ಅಧಿಕಾರಿಗಳು ಮಾತನಾಡಿ, ದಸರಾ ಹಬ್ಬದ ಸಂದರ್ಭದಲ್ಲಿ ಆಯುಧ ಪೂಜೆಗಾಗಿ ಎಲ್ಲಾ ಮಾರುಕಟ್ಟೆಗಳಲ್ಲಿ ಮತ್ತು ರಸ್ತೆಬದಿಗಳಲ್ಲಿ ಬಾಳೆ ಎಲೆಗಳು, ಕುಂಬಳಕಾಯಿ ಹಾಗೂ ಹೂವುಗಳನ್ನು ಮಾರಾಟ ಮಾಡಲಾಗುತ್ತಿತ್ತು. ಮಾರಾಟವಾಗದ ವಸ್ತುಗಳನ್ನು ಮಾರಾಟಗಾರರು ಸ್ಥಳದಲ್ಲಿಯೇ ಬಿಟ್ಟು ಹೋಗಿದ್ದಾರೆ. ಇದರಿಂದ ತ್ಯಾಜ್ಯ ಹೆಚ್ಚಾಗಿದೆ ಎಂದು ಹೇಳಿದ್ದಾರೆ.

BBMP workers clear waste generated during the Dasara festival at a market
ಕಸ, ಕೊಳಕು,ದುರ್ನಾತ: ಬೆಂಗಳೂರಿನ ಕೆ.ಆರ್. ಮಾರ್ಕೆಟ್ ದುಸ್ಥಿತಿ ಕೇಳುವವರಿಲ್ಲ, ವ್ಯಾಪಾರಿಗಳ ಸ್ಥಿತಿ ಶೋಚನೀಯ!

ನಗರದಲ್ಲಿ ಪ್ರತಿದಿನ ಸುಮಾರು 4,900 ಮೆ.ಟನ್ ತ್ಯಾಜ್ಯ ಉತ್ಪತ್ತಿಯಾಗುತ್ತಿದೆ. ಆದರೆ, ಈ ಬಾರಿಯ ದಸರಾ ಉತ್ಸವದಲ್ಲಿ ಅಕ್ಟೋಬರ್ 12 ರಂದು 6,306 ಮೆಟ್ರಿಕ್ ಟನ್ ತ್ಯಾಜ್ಯ ಸಂಗ್ರಹಿಸಲಾಗಿದೆ, ಅಕ್ಟೋಬರ್ 13 ರಂದು 5,561 ಮೆಟ್ರಿಕ್ ಟನ್ ಮತ್ತು ಅಕ್ಟೋಬರ್ 14 ರಂದು 5,866 ಮೆಟ್ರಿಕ್ ಟನ್ ತ್ಯಾಜ್ಯ ಸಂಗ್ರಹ ಮಾಡಲಾಗಿದೆ. ಹಸಿ ತ್ಯಾಜ್ಯವನ್ನು ಸಂಸ್ಕರಣಾ ಘಟಕಗಳಲ್ಲಿ ಮತ್ತು ಮಿಶ್ರ ತ್ಯಾಜ್ಯವನ್ನು ಲ್ಯಾಂಡ್‌ಫಿಲ್‌ನಲ್ಲಿ ವಿಲೇವಾರಿ ಮಾಡಲಾಗಿದೆ ಎಂದು ಬಿಎಸ್‌ಡಬ್ಲ್ಯುಎಂಎಲ್‌ನ ಎಂಜಿನಿಯರ್ ತಿಳಿಸಿದ್ದಾರೆ.

ಕಳೆದ ಎರಡು ದಿನಗಳಲ್ಲಿ (ಶನಿವಾರ ಮತ್ತು ಭಾನುವಾರ) ಕೆ.ಆರ್.ಮಾರುಕಟ್ಟೆ, ಗಾಂಧಿಬಜಾರ್, ದೇವಸಂದ್ರ, ಕೆ.ಆರ್.ಪುರ, ಮಲ್ಲೇಶ್ವರಂ, ಮಡಿವಾಳ ಮತ್ತು ರಸೆಲ್ ಮಾರುಕಟ್ಟೆ, ಪಾಲಿಕೆ ಬಜಾರ್ ಸೇರಿದಂತೆ ಪ್ರಮುಖ 12 ಮಾರುಕಟ್ಟೆಗಳಿಂದ 414 ಮೆ.ಟನ್ ತ್ಯಾಜ್ಯ ವಿಲೇವಾರಿ ಮಾಡಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಮಾರುಕಟ್ಟೆ ಹಾಗೂ ರಸ್ತೆಬದಿಗಳಲ್ಲಿ ತ್ಯಾಜ್ಯ ಹೆಚ್ಚಾದ ಕಾರಣ ಆಯಾ ವಲಯಗಳಲ್ಲಿ ಆರೋಗ್ಯಾಧಿಕಾರಿಗಳು, ಹಿರಿಯ ಎಂಜಿನಿಯರ್‌ಗಳು ಮತ್ತು ಘನತ್ಯಾಜ್ಯ ಇಲಾಖೆಯ ಮಾರ್ಷಲ್‌ಗಳನ್ನು ನಿಯೋಜಿಸಲಾಗಿತ್ತು. ಕಸ ಸಂಗ್ರಹಿಸಲು ಹೆಚ್ಚುವರಿ ಮಣ್ಣು ತೆಗೆಯುವ ಯಂತ್ರ, ಆಟೋ ಟಿಪ್ಪರ್‌ಗಳು ಮತ್ತು ಕಾಂಪ್ಯಾಕ್ಟರ್‌ಗಳನ್ನು ಬಳಕೆ ಮಾಡಲಾಗಿದೆ ಎಂದು ತಿಳಿಸಿದರು

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com