

ಬೆಂಗಳೂರು: ಭಾರೀ ಮಳೆ ಹಿನ್ನೆಲೆಯಲ್ಲಿ ಬೆಂಗಳೂರಿನ ಶಾಲಾ ಕಾಲೇಜುಗಳ ಕುರಿತು ಮಹತ್ವದ ಆದೇಶ ಹೊರಡಿಸಲಾಗಿದ್ದು, ಬೆಂಗಳೂರಿನ ಶಾಲೆಗಳಿಗೆ ರಜೆ ಘೋಷಿಸುವ ಕುರಿತು ಡಿಸಿ ಜಗದೀಶ್ ಅವರು ಮಾಹಿತಿ ನೀಡಿದ್ದಾರೆ.
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಪರಿಣಾಮ ಕರ್ನಾಟಕದ ಒಳನಾಡಿನಲ್ಲಿ ಮಳೆ ಆರಂಭವಾಗಿದೆ. ಬೆಂಗಳೂರಿನಲ್ಲಿ 2 ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ವರುಣನ ಆರ್ಭಟ ಇನ್ನೂ ಮೂರು ದಿನ ರಾಜ್ಯದಲ್ಲಿ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಈ ಹಿನ್ನೆಲೆಯಲ್ಲಿ ನಾಳೆ ಅಂದರೆ ಅಕ್ಟೋಬರ್ 16ರಂದು ಬೆಂಗಳೂರಿನ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ನೀಡಿ ಜಿಲ್ಲಾಧಿಕಾರಿ ಜಗದೀಶ್ ಸೂಚಿಸಿದ್ದಾರೆ.
ಸರ್ಕಾರಿ ಪ್ರಾಥಮಿಕ ಶಾಲೆಗಳಿಗೆ ಅಕ್ಟೋಬರ್ 20 ರವರೆಗೆ ದಸರಾ ರಜೆ ಇದೆ. ಆದ್ರೆ ಖಾಸಗಿ ಶಾಲೆಗಳು ಶಾಲೆ ಆರಂಭ ಮಾಡಿವೆ. ಸೋಮುವಾರದಿಂದಲೆ ಖಾಸಗಿ ಶಾಲೆಗಳು ಪುನರಾರಂಭವಾಗಿವೆ.
ಹೀಗಾಗಿ ಮಕ್ಕಳಿಗೆ ಶಾಲೆಗೆ ಬರಲು ಕಷ್ಟ ಎದುರಾಗಿದೆ. ಇದರಿಂದ ರಾಜಧಾನಿಯ ಶಾಲೆಗಳಿಗೆ ರಜೆ ನೀಡಲು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್ ಸೂಚನೆ ನೀಡಿದ್ದಾರೆ.
ಹವಾಮಾನ ಇಲಾಖೆ ನೀಡಿದ ಭಾರೀ ಮಳೆಯ ಎಚ್ಚರಿಕೆಯ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಜಿಲ್ಲಾಧಿಕಾರಿಗಳು ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ನಾಳೆ ರಜೆ ಘೋಷಿಸಲಾಗಿದೆ.
ಕೃಪಾ ಸಂಘಟನೆ ವ್ಯಾಪ್ತಿಯ ಶಾಲೆಗಳಿಗೆ ರಜೆ ಘೋಷಣೆ
ಮಳೆ ಹಿನ್ನೆಲೆ ನಗರದ ಖಾಸಗಿ ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಅಕ್ಟೋಬರ್ 16ರಂದು ಕೃಪಾ ಸಂಘಟನೆ ವ್ಯಾಪ್ತಿಯ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಹವಾಮಾನ ಇಲಾಖೆ ಮುನ್ಸೂಚನೆ ಎಚ್ಚೆತ್ತ ಕೃಪಾ ಖಾಸಗಿ ಸಂಘಟನೆ ಅಕ್ಟೋಬರ್ 16ರಂದು ಬೆಂಗಳೂರು ನಗರ, ಗ್ರಾಮಾಂತರ ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಣೆ ಮಾಡಿದೆ. ಈ ಕುರಿತು ಕೃಪಾ ಖಾಸಗಿ ಶಾಲಾ ಕಾಲೇಜು ಸಂಘಟನೆ ಅಧ್ಯಕ್ಷ ಲೋಕೇಶ್ ತಾಳಿಕಟ್ಟೆ ಮಾಹಿತಿ ನೀಡಿದ್ದಾರೆ.