

ದಾವಣಗೆರೆ: ದಾವಣಗೆರೆಯಲ್ಲಿ ಗಣೇಶ ಮೆರವಣಿಗೆ ವೇಳೆ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ 48 ಆರೋಪಿಗಳಿಗೆ ನ್ಯಾಯಾಲಯ ಜಾಮೀನು ನೀಡಿದೆ.
ಸೆಪ್ಟೆಂಬರ್ 19ರಂದು ದಾವಣಗೆರೆಯ ಅರಳಿಮರ ಸರ್ಕಲ್ ಬಳಿ ಗಣೇಶ ಮೂರ್ತಿ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದಿತ್ತು. ಅಜಾದ್ ನಗರ ಮುಖ್ಯ ರಸ್ತೆಯಿಂದ ಮೊದಲು ಕಲ್ಲು ತೂರಿದ್ದು ಇಬ್ಬರು ಪೊಲೀಸರು ಗಾಯಗೊಂಡಿದ್ದರು. ಈ ವೇಳೆ ಪೊಲೀಸರು ಹಲವರನ್ನು ವಶಕ್ಕೆ ಪಡೆದಿದ್ದರು. ಇದೀಗ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದೂ-ಮುಸ್ಲಿಂ ಸೇರಿ 48 ಆರೋಪಿಗಳಿಗೆ ಕೋರ್ಟ್ ಜಾಮೀನು ನೀಡಿದೆ.
ಕಲ್ಲು ತೂರಾಟದ ಬಳಿಕ ಗಲಭೆಗೆ ಸಂಬಂಧ ಪ್ರಚೋದನಕಾರಿ ಹೇಳಿಕೆ ನೀಡಿದ್ದ ಹಿಂದೂ ಜಾಗರಣಾ ವೇದಿಕೆಯ ಸಂಚಾಲಕ ಸತೀಶ್ ಪೂಜಾರಿಗೆ ಜಾಮೀನು ಸಿಕ್ಕಿದ್ದು ಅದ್ಧೂರಿ ಸ್ವಾಗತ ದೊರೆತಿದೆ. ಸತೀಶ್ ಪೂಜಾರಿ ಮನೆಯ ಸುತ್ತಮುತ್ತ ನೆರೆದಿದ್ದ ಹಿಂದೂ ಯುವಕರು ಜೈಕಾರ ಹಾಕಿ ಬರ ಮಾಡಿಕೊಂಡರು.
Advertisement