ಬೆಂಗಳೂರಿನಲ್ಲಿ ಭಾರಿ ಮಳೆ: ವಿಪತ್ತು ನಿರ್ವಹಣೆ ಸಿಬ್ಬಂದಿ ನಿಯೋಜನೆ, ಪರಿಸ್ಥಿತಿ ಎದುರಿಸಲು ಸರ್ಕಾರ ಸನ್ನದ್ಧ- ಡಿಕೆ ಶಿವಕುಮಾರ್

ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಬುಧವಾರವೂ ಜನಜೀವನ ಅಸ್ತವ್ಯಸ್ತಗೊಂಡಿದ್ದು, ಬೆಂಗಳೂರು ನಗರ ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
DK Shivakumar
ಡಿಕೆ ಶಿವಕುಮಾರ್
Updated on

ಬೆಂಗಳೂರು: ಬೆಂಗಳೂರಿನಲ್ಲಿ ಭಾರಿ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ವಿಪತ್ತು ನಿರ್ವಹಣಾ ಪಡೆ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಕಳೆದ 24 ಗಂಟೆಗಳಲ್ಲಿ ಬುಧವಾರ ಬೆಳಿಗ್ಗೆ 8.30 ರವರೆಗೆ ರಾಜಧಾನಿಯಲ್ಲಿ 66.1 ಮಿಮೀ ಮಳೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಬುಧವಾರವೂ ಜನಜೀವನ ಅಸ್ತವ್ಯಸ್ತಗೊಂಡಿದ್ದು, ಬೆಂಗಳೂರು ನಗರ ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಆದರೆ ಅನೇಕ ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಮತ್ತು ಖಾಸಗಿ ಕಂಪನಿಗಳು ತಮ್ಮ ಉದ್ಯೋಗಿಗಳಿಗೆ ಮನೆಯಿಂದಲೇ ಕೆಲಸ ಮಾಡಲು ಅನುಮತಿ ನೀಡಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಮತ್ತು ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪಡೆಗಳಿಂದ ಸುಮಾರು 60 ಸಿಬ್ಬಂದಿಯನ್ನು ನಗರದಲ್ಲಿ ನಿಯೋಜಿಸಲಾಗಿದೆ ಎಂದುಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ಇನ್ನೂ 40 ಸಿಬ್ಬಂದಿಯನ್ನು ಯಾವುದೇ ಅಗತ್ಯಕ್ಕೆ ತಕ್ಕಂತೆ ನಿಯೋಜಿಸಲು ಸ್ಟ್ಯಾಂಡ್ ಬೈನಲ್ಲಿ ಇರಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ನಗರದಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಅಧಿಕಾರಿಗಳಿಗೆ ಸಲಹೆ ನೀಡಿರುವ ಬೆಂಗಳೂರು ಅಭಿವೃದ್ಧಿ ಸಚಿವರು ಆಗಿರುವ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಪರಿಸ್ಥಿತಿಯನ್ನು ಎದುರಿಸಲು ಸರ್ಕಾರ ಸನ್ನದ್ಧವಾಗಿದೆ ಎಂದು ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪರಿಸ್ಥಿತಿಯನ್ನು ನಿಭಾಯಿಸುವ ಮತ್ತು ಮಳೆಯಿಂದ ಉಂಟಾಗಿರುವ ಸಮಸ್ಯೆ ಸರಿಪಡಿಸುವ ಶಕ್ತಿ ಸರ್ಕಾರಕ್ಕಿದೆ. ಮಳೆಯ ಹಿನ್ನೆಲೆಯಲ್ಲಿ ಅಗತ್ಯ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುವಂತೆ ನಾಗರಿಕರಲ್ಲಿ ಮನವಿ ಮಾಡಿದರು.

ಇಂದು ಕೆಲವು ಟ್ರಾಫಿಕ್ ಸಮಸ್ಯೆಗಳಿರಬಹುದು. ಸಂಜೆ ವೇಳೆಗೆ ಪೊಲೀಸರು, ಬಿಬಿಎಂಪಿ, ಅಗ್ನಿಶಾಮಕ ಇಲಾಖೆ ಮತ್ತಿತರ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳೊಂದಿಗೆ ಪರಿಸ್ಥಿತಿಯನ್ನು ಪರಿಶೀಲಿಸುವುದಾಗಿ ಹೇಳಿದರು.

ಮಂಗಳವಾರದಿಂದ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ರಾಜ್ಯದ ರಾಜಧಾನಿ ಬೆಂಗಳೂರು ಸೇರಿದಂತೆ ಕರ್ನಾಟಕದ ಮಧ್ಯ ಮತ್ತು ದಕ್ಷಿಣ ಭಾಗಗಳಲ್ಲಿ ಜನಜೀವನ ಅಸ್ತವ್ಯಸ್ತವಾಗಿದೆ. ಹಲವಾರು ಪ್ರದೇಶಗಳು ಜಲಾವೃತವಾಗಿದ್ದು, ವಾಹನ ಸವಾರರು ತೀವ್ರ ತೊಂದರೆಪಡುವಂತಾಗಿದೆ. ಮಳೆ ಪರಿಸ್ಥಿತಿ ಬಗ್ಗೆ ಸರ್ಕಾರವನ್ನು ಟೀಕಿಸಿದ ವಿಪಕ್ಷಗಳ ವಿರುದ್ಧ ಕಿಡಿಕಾರಿದ ಶಿವಕುಮಾರ್, ನೀವು ನಿಮ್ಮ ರಾಜ್ಯದ ಹೆಮ್ಮೆಯನ್ನು ಹಾಳು ಮಾಡುತ್ತಿದ್ದೀರಿ. ಯಾರಾದರೂ ಪ್ರಕೃತಿಗೆ ಸಲಹೆ ನೀಡಬಹುದೇ ಎಂದು ಪ್ರಶ್ನಿಸಿದ ಅವರು"ಮಳೆಯಾಗಲಿ ಎಂದರು.

DK Shivakumar
ಬೆಂಗಳೂರಿನಲ್ಲಿ ಭಾರೀ ಮಳೆ: ನೀರು ತುಂಬಿದ ರಸ್ತೆಗಳಲ್ಲಿ ಸಂಚಾರ ಅಸ್ತವ್ಯಸ್ತ, ಸವಾರರು ಹೈರಾಣ

ಚಂಡಮಾರುತವಿದ್ದು, ಹೆಚ್ಚಿನ ಮಳೆ ಬಂದರೂ ಪರಿಸ್ಥಿತಿಯನ್ನು ನಿಭಾಯಿಸುತ್ತೇವೆ, ಯಾವುದೇ ಸಮಸ್ಯೆಗಳಿಲ್ಲ. ಪರಿಸ್ಥಿತಿಯನ್ನು ನಿಭಾಯಿಸುವ ಶಕ್ತಿ ಸರ್ಕಾರ ಮತ್ತು ನಾಗರಿಕರಿಗೆ ಇದೆ ಎಂದು ಡಿಕೆ ಶಿವಕುಮಾರ್ ಹೇಳಿದರು. ಮಳೆ ಸಂಬಂಧಿತ ಸಮಸ್ಯೆಗಳ ಕುರಿತು ಮಾಹಿತಿ ನೀಡಲು ಬಿಬಿಎಂಪಿ ಎಂಟು ವಲಯಗಳಲ್ಲಿ 24 ಗಂಟೆಯೂ ಕಾರ್ಯನಿರ್ವಹಿಸುವ ವಿಶೇಷ ನಿಯಂತ್ರಣ ಕೊಠಡಿ ಸ್ಥಾಪಿಸಿದೆ. ಸಹಾಯವಾಣಿ ಸಂಖ್ಯೆ (1533) ಪ್ರಾರಂಭಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

X
Open in App

Advertisement

X
Kannada Prabha
www.kannadaprabha.com