ಬೆಂಗಳೂರಿನಲ್ಲಿ ಭಾರೀ ಮಳೆ: ಕೇಂದ್ರೀಯ ವಿಹಾರ್ ಅಪಾರ್ಟ್‌ಮೆಂಟ್‌ ಜಲಾವೃತ; ತ್ವರಿತ ಕ್ರಮಕ್ಕೆ BBMP ಸೂಚನೆ

ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಗೆ ಕೇಂದ್ರೀಯ ವಿಹಾರ್ ಅಪಾರ್ಟ್‌ಮೆಂಟ್‌ಗಳು ಜಲಾವೃತಗೊಂಡಿದ್ದು, ನಿವಾಸಿಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ.
Following heavy rains over the last two days, Kendriya Vihar Apartments have once again been flooded.
ಭಾರೀ ಮಳೆಗೆ ಕೇಂದ್ರೀಯ ವಿಹಾರ್ ಅಪಾರ್ಟ್‌ಮೆಂಟ್‌ಗಳು ಮತ್ತೊಮ್ಮೆ ಜಲಾವೃತಗೊಂಡಿವೆ.
Updated on

ಬೆಂಗಳೂರು: ಮೂರು ವರ್ಷಗಳ ಹಿಂದೆ ಮಹಾಮಳೆಗೆ ಜಲಾವೃತಗೊಂಡು ನಲುಗಿದ್ದ ಯಲಹಂಕದ ಕೇಂದ್ರೀಯ ವಿಹಾರ ಅಪಾರ್ಟ್‌ಮೆಂಟ್‌ ನಿವಾಸಿಗಳು ಮತ್ತೊಮ್ಮೆ ಅದೇ ಪರಿಸ್ಥಿತಿಗೆ ಸಿಲುಕಿದ್ದಾರೆ.

ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಗೆ ಕೇಂದ್ರೀಯ ವಿಹಾರ್ ಅಪಾರ್ಟ್‌ಮೆಂಟ್‌ಗಳು ಜಲಾವೃತಗೊಂಡಿದ್ದು, ನಿವಾಸಿಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ.

ಇದರ ಬೆನ್ನಲ್ಲೇ ಕೇಂದ್ರೀಯ ವಿಹಾರ್ ಅಪಾರ್‌ಮೆಂಟ್‌ಗೆ ಭೇಟಿ ನೀಡಿದ ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ ಅವರು, ಕೂಡಲೇ ಅಗತ್ಯ ಕ್ರಮಗಳನ್ನು ಕೈಗೊಂಡು ಸಮಸ್ಯೆ ಬಗೆಹರಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸುಮಾರು 3 ಅಡಿಗಳಷ್ಟು ನೀರು ನಿಂತಿದ್ದು, ಸಮಸ್ಯೆ ಪರಿಹರಿಸಲು ತಕ್ಷಣ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಸದ್ಯ ಇರುವ ನೀರುಗಾಲುವೆಯ ಪಕ್ಕ ಖಾಸಗಿ ಜಾಗದಲ್ಲಿ ಇಟಾಚಿ ಮೂಲಕ ಕಚ್ಚಾ ಡ್ರೈನ್ ಮಾಡಲಾಗುತ್ತಿದ್ದು, ಕೂಡಲೆ ಕೆಲಸ ಮುಗಿಸಿ ಕಚ್ಚಾ ಡ್ರೈನ್ ಮೂಲಕ ನೀರು ಹರಿದು ಹೊಗುವಂತೆ ಮಾಡಲಾಗುತ್ತಿದೆ. 2 ಅಗ್ನಿ ಶಾಮಕ ವಾಹನಗಳಿಂದ ಪಂಪ್ ಮೂಲಕ ನೀರನ್ನು ಹೊರ ಹಾಕಲಾಗುತ್ತಿದೆ. ನಿನ್ನೆ ಸಂಜೆ ಸಹಾಯ ಕೇಂದ್ರ(Help Desk) ತೆಗಯಲಾಗಿದ್ದು, ನಿವಾಸಿಗಳಿಗಳಿಗೆ ಕುಡಿಯುವ ನೀರು, ಹಾಲು, ಬ್ರೆಡ್, ಬಿಸ್ಕೆಟ್ ಇನ್ನಿತರೆ ಅಗತ್ಯ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ನಿವಾಸಿಗಳ ಸಂಚಾರಕ್ಕೆ ಅನುಕೂಲವಾಗುವಂತೆ ಎರಡು ಟ್ರ್ಯಾಕ್ಟರ್ ವ್ಯವಸ್ಥೆ ಮಾಡಲಾಗಿದೆ. ಯಲಹಂಕ ಕೆರೆಗೆ ಎರಡು ಕೋಡಿಗಳಿದ್ದು, ಉತ್ತರ, ದಕ್ಷಿಣದಲ್ಲಿ ಕೋಡಿಗಳು ಬರಲಿದೆ. ಕೇಂದ್ರೀಯ ವಿಹಾರ್ ಅಪಾರ್ಟ್ಮೆಂಟ್ ಕಡೆಗೆ ಉತ್ತರ ಕೋಡಿ ಬರಲಿದ್ದು, ಅಲ್ಲಿ ನೀರಿನ ಹರಿವನ್ನು ಕಡಿಮೆ ಮಾಡಬೇಕಿದೆ. ಈ ಸಂಬಂಧ ದಕ್ಷಿಣದ ಕೋಡಿಯಲ್ಲಿ ನೀರಿನ‌ ಹರಿವಿನ ಮಟ್ಟ ಹೆಚ್ಚಸಿದಾಗ ಉತ್ತರದ ಕೋಡಿಯಲ್ಲಿ ನೀರಿನ ಹರಿವಿನ ಮಟ್ಟ ಕಡಿಮೆಯಾಗಲಿದೆ. ಆದ್ದರಿಂದ ಕೂಡಲೇ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದೇನೆ.

ಪಾಲಿಕೆಯಿಂದ 20ಕ್ಕೂ ಹೆಚ್ಚು ಅಧಿಕಾರಿಗಳು ಮತ್ತು ಸಿಬ್ಬಂದಿ ನಿಯೋಜಿಸಲಾಗಿದ್ದು, ಸಮಸ್ಯೆ ಬಗೆಹರಿಸಲು ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದ್ದಾರೆಂದು ಹೇಳಿದರು.

Following heavy rains over the last two days, Kendriya Vihar Apartments have once again been flooded.
ಸತತ ಮಳೆಗೆ ಸಿಲಿಕಾನ್ ಸಿಟಿ ತತ್ತರ: ಸರಾಸರಿಗಿಂತ ಶೇ.228ರಷ್ಟು ಹೆಚ್ಚು ಮಳೆ: ಮಲೆನಾಡಿನಂತಾದ ಉದ್ಯಾನ ನಗರಿ

ಇದೇ ವೇಳೆ ಗಿರಿನಾಥ್ ಅವರು ರಮಣ ಶ್ರೀ ಲೇಔಟ್ ಮತ್ತು ಕ್ಯಾಲಿಫೋರ್ನಿಯಾ ಲೇಔಟ್‌ಗೆ ಭೇಟಿ ನೀಡಿದ್ದು, ನಿಂತಿರುವ ನೀರುನ್ನು ಕೂಡಲೆ ತೆರವುಗೊಳಿಸಲು ಸೂಚನೆ ನೀಡಿದರು.

ಲೇಔಟ್ ಗೆ ಬರುತ್ತಿರುವ ನೀರನ್ನು ತಡೆಯುವ ಸಲುವಾಗಿ ಹಿಂದೆಯೇ ಡೈವರ್ಷನ್ ಚಾನಲ್ ಮಾಡಲಾಗಿದ್ದು, ನೀರಿನ ಮಟ್ಟವನ್ನು ಸಾಕಷ್ಟು ತಡೆಯಲಾಗಿದೆ. ಆದರೆ, ಈ ಕ್ರಮಗಳ ಹೊರತಾಗಿಯೂ, ಮಳೆನೀರು ಇನ್ನೂ ಬಡಾವಣೆಗೆ ಪ್ರವೇಶಿಸಿದ್ದು, ನೀರನ್ನು ಪಂಪ್ ಮೂಲಕ ತೆರವುಗೊಳಿಸಲಾಗುತ್ತಿದೆ ಎಂದು ಹೇಳಿದರು.

Tushar Girinath
ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ ಭೇಟಿ

ನಗರದಲ್ಲಿ ಮಳೆಯಾಗುತ್ತಿರುವ ಹಿನ್ನೆಲೆ ಮುಖ್ಯ ಆಯುಕ್ತರು ಬೆಳಗ್ಗೆ ವರ್ಚುವಲ್ ಮೂಲಕ ಸಭೆ ನಡೆಸಿ, ಆಯಾ ವಲಯ ವ್ಯಾಪ್ತಿಯಲ್ಲಿ ಸಮಸ್ಯೆಯಾಗಿರುವ ಸ್ಥಳಗಳಿಗೆ ಖುದ್ದು ಭೇಟಿ ನೀಡಿ ಪರಿಶೀಲಿಸಬೇಕು. ಸ್ಥಳದಲ್ಲಾಗಿರುವ ಸಮಸ್ಯೆ ಬಗ್ಗೆ ಅವಲೋಕಿಸಿ ಆ ಸ್ಥಳದಲ್ಲಿ ಶಾಶ್ವತ ಪರಿಹಾರ ಹುಡುಕಿ, ಇರುವ ಸಮಸ್ಯೆಯನ್ನು ಬಗೆಹರಿಸಲು ಸೂಕ್ತ ಕ್ರಮ ಕೈಗೊಳ್ಳಲು ಎಲ್ಲಾ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಎಲ್ಲಾ ವಲಯಗಳ ನಿಯಂತ್ರಣ ಕೊಠಡಿಗಳು ಸಕ್ರಿಯವಾಗಿ ಕಾರ್ಯನಿರ್ವಹಿಸಬೇಕು. ನಾಗರಿಕರಿಂದ ಬರುವ ದೂರುಗಳಿಗೆ ಕೂಡಲೇ ಸ್ಪಂದನೆ ನೀಡಬೇಕೆಂದು ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ವಲಯ ಆಯುಕ್ತ ಕರೀಗೌಡ, ವಲಯ ಜಂಟಿ ಆಯುಕ್ತ ಮೊಹ್ಮದ್ ನಯೀಮ್ ಮೊಮಿಮ್, ಮುಖ್ಯ ಎಂಜಿನಿಯರ್ ರಂಗನಾಥ್, ಕಾರ್ಯಪಾಲಕ ಎಂಜಿನಿಯರ್ ಸುಧಾಕರ್ ರೆಡ್ಡಿ ಸೇರಿದಂತೆ ಸಂಬಂಧಿಸಿದ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com