ಜೆ.ಪಿ ನಡ್ಡಾ ಭೇಟಿಯಾದ ಸಚಿವ ದಿನೇಶ್ ಗುಂಡೂರಾವ್: ರಾಜ್ಯದಲ್ಲಿ ಆರೋಗ್ಯ ಸೇವೆ ಹೆಚ್ಚಿಸುವಂತೆ ಮನವಿ

ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗಳ ಅಧಿಕಾರಿಗಳೊಂದಿಗೆ ಕೇಂದ್ರ ಆರೋಗ್ಯ ಸಚಿವ ಜೆಪಿ.ನಡ್ಡಾ ಅವರನ್ನು ನವದೆಹಲಿಯಲ್ಲಿ ಭೇಟಿ ಮಾಡಿದ ದಿನೇಶ್ ಗುಂಡೂರಾವ್ ಅವರು, ರಾಜ್ಯದ ವಿವಿಧ ಆರೋಗ್ಯ ಯೋಜನೆಗಳ ಕುರಿತು ಚರ್ಚೆ ನಡೆಸಿದರು.
ಜೆಪಿ.ನಡ್ಡಾ ಭೇಟಿಯಾದ ಸಚಿವ ದಿನೇಶ್ ಗುಂಡೂರಾವ್
ಜೆಪಿ.ನಡ್ಡಾ ಭೇಟಿಯಾದ ಸಚಿವ ದಿನೇಶ್ ಗುಂಡೂರಾವ್
Updated on

ಬೆಂಗಳೂರು: ಕೇಂದ್ರ ಆರೋಗ್ಯ ಸಚಿವ ಜೆಪಿ ನಡ್ಡಾ ಅವರನ್ನು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಬುಧವಾರ ಭೇಟಿ ಮಾಡಿದ್ದು, ಕರ್ನಾಟಕದಲ್ಲಿ ಆರೋಗ್ಯ ಸೇವೆ ಹೆಚ್ಚಿಸುವಂತೆ ಮನವಿ ಮಾಡಿದರು.

ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗಳ ಅಧಿಕಾರಿಗಳೊಂದಿಗೆ ಕೇಂದ್ರ ಆರೋಗ್ಯ ಸಚಿವ ಜೆಪಿ.ನಡ್ಡಾ ಅವರನ್ನು ನವದೆಹಲಿಯಲ್ಲಿ ಭೇಟಿ ಮಾಡಿದ ದಿನೇಶ್ ಗುಂಡೂರಾವ್ ಅವರು, ರಾಜ್ಯದ ವಿವಿಧ ಆರೋಗ್ಯ ಯೋಜನೆಗಳ ಕುರಿತು ಚರ್ಚೆ ನಡೆಸಿದರು.

ಪ್ರಸ್ತುತ ರಾಜ್ಯದಲ್ಲಿ 1 ಕೋಟಿ 15 ಲಕ್ಷ ಬಿಪಿಎಲ್ ಕಾರ್ಡುದಾರರಿದ್ದಾರೆ, ಬಿಪಿಎಲ್ ಹೊಂದಿದ ಎಲ್ಲರಿಗು ರಾಜ್ಯ ಸರ್ಕಾರ ಆಯುಷ್ಮಾನ್ ವಿಮೆಯಡಿ ಆರೋಗ್ಯ ಸೇವೆ ಒದಗಿಸುತ್ತಿದೆ. ಆದರೆ, ಕೇಂದ್ರ ಸರ್ಕಾರ ಯೋಜನೆಯಡಿ ರಾಜ್ಯದ 69 ಲಕ್ಷ ಫಲಾನುಭವಿಗಳನ್ನ ಮಾತ್ರ ಪರಿಗಣಿಸಿದೆ. ಉಳಿದ ಫಲಾನುಭವಿಗಳಿಗೆ ರಾಜ್ಯ ಸರ್ಕಾರವೇ ಅನುದಾನ ಭರಿಸುತ್ತಿದ್ದು, ಕೇಂದ್ರ ಸರ್ಕಾರ ಫಲಾನುಭವಿಗಳ ಸಂಖ್ಯೆ ಹೆಚ್ಚಿಸಿಕೊಡಬೇಕು ಎಂದು ಮನವಿ ಮಾಡಿದರು.

ಜೆಪಿ.ನಡ್ಡಾ ಭೇಟಿಯಾದ ಸಚಿವ ದಿನೇಶ್ ಗುಂಡೂರಾವ್
ಬಿಜೆಪಿ ಮಾಧ್ಯಮ ಘಟಕದ ವಿರುದ್ಧ ಮಹಿಳಾ ಆಯೋಗಕ್ಕೆ ದಿನೇಶ್ ಗುಂಡೂರಾವ್ ಪತ್ನಿ ದೂರು!

ಭೇಟಿಯ ವೇಳೆ ರಾಜ್ಯ ಆರೋಗ್ಯ ಇಲಾಖೆಯು ಕೈಗೊಂಡಿರುವ ಆರೋಗ್ಯ ಕಾರ್ಯಕ್ರಮಗಳ ಕುರಿತು ಮಾಹಿತಿ ನೀಡಿರುವ ಸಚಿವರು, ಹಠಾತ್ ಹೃದಯಾಘಾತ ತಡೆಯಲು ಹೃದಯ ಜ್ಯೋತಿ ಯೋಜನೆ, ಡಯಾಲಿಸಿಸ್ ಯಂತ್ರಗಳಲ್ಲಿ ಏಕ ಬಳಕೆಯ ಡಯಲೈಸರ್ ಗಳ ಬಳಕೆ, ಆರು ವರ್ಷದೊಳಗಿನ ಮಕ್ಕಳಿಗೆ ಉಚಿತ ಕಾಕ್ಲಿಯರ್ ಇಂಪ್ಲಾಂಟ್‌ಗಳು, 10 ಬೆಡ್ ಗಳ ಟೆಲಿ-ಐಸಿಯು ಸ್ಥಾಪನೆ ಮತ್ತು ಶಾಲಾ ಹೆಣ್ಣು ಮಕ್ಕಳಿಗೆ ಸ್ಯಾನಿಟರಿ ಪ್ಯಾಡ್‌ ಮತ್ತು ಮುಟ್ಟಿನ ಕಪ್‌ಗಳ ವಿತರಣೆ ಕುರಿತಾಗಿ ವಿವರಿಸಿದರು.

ಕಳೆದ ಎರಡು ವರ್ಷಗಳಿಂದ ಕ್ಷಯರೋಗದ ಔಷಧಿಗಳ ಅಸಮರ್ಪಕ ಪೂರೈಕೆಯನ್ನು ಎದುರಿಸುತ್ತಿದ್ದು, ವಿಶೇಷವಾಗಿ 4 FDC ಔಷಧಿಗಳ ಪೂರೈಕೆಯನ್ನು ವ್ಯವಸ್ಥಿತಗೊಳಿಸಲು ಮನವಿರಾಷ್ಟ್ರೀಯ ಆರೋಗ್ಯ ಮಿಷನ್ (NHM) ಮತ್ತು PM-ABHIM ಕಾರ್ಯಕ್ರಮಗಳ ಅಡಿಯಲ್ಲಿ ಅನುದಾನ ಮರುಹಂಚಿಕೆ ಮಾಡುವಂತೆ, ಗ್ರಾಮೀಣ ಭಾಗದಲ್ಲಿ ವೈದ್ಯರ ಕರ್ತವ್ಯ ನಿರ್ವಹಣೆಯನ್ನು ಪ್ರೋತ್ಸಾಹಿಸಲು NHM ಅಡಿಯಲ್ಲಿ ವೈದ್ಯರು ಮತ್ತು ಸ್ಟಾಫ್ ನರ್ಸ್‌ಗಳ ವೇತನವನ್ನು ಹೆಚ್ಚಿಸುವ ಪ್ರಸ್ತಾವನೆಗೆ ತ್ವರಿತವಾದ ಅನುಮತಿ ನೀಡುವಂತೆ, ರಾಜ್ಯ ಆಹಾರ ಸುರಕ್ಷತಾ ಆಯುಕ್ತರು ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರಕ್ಕೆ (ಎಫ್‌ಎಸ್‌ಎಸ್‌ಎಐ) ಸಲ್ಲಿಸಿದ ವಾರ್ಷಿಕ ಕ್ರಿಯಾ ಯೋಜನೆಗೆ ತ್ವರಿತ ಅನುಮೋದನೆ ನೀಡುವಂತೆ ಹಾಗೂ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯದ (MoRTH) ಸಹಯೋಗದೊಂದಿಗೆ ರಸ್ತೆ ಅಪಘಾತ ಸಂತ್ರಸ್ತ ಯೋಜನೆಯ ತ್ವರಿತ ಆರಂಭ ಮಾಡುವಂತೆ ಮನವಿ. ಮನವಿ ಮಾಡಿದರು.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com