
ಕೋಲಾರ: ಅನಾರೋಗ್ಯದ ಕಾರಣ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಅಧ್ಯಕ್ಷ ಕೆ.ಮರೀಗೌಡ ರಾಜೀನಾಮ ನೀಡಿದ್ದಾರೆ ಎಂದು ಸಚಿವ ಭೈರತಿ ಸುರೇಶ್ ಹೇಳಿದ್ದಾರೆ.
ಕೋಲಾರದಲ್ಲಿ ಮಾತನಾಡಿದ ಅವರು, ಮುಡಾ ನಿವೇಶನ ಹಗರಣದ ಹಿನ್ನೆಲೆಯಲ್ಲಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಅಧ್ಯಕ್ಷ ಕೆ.ಮರೀಗೌಡ ರಾಜೀನಾಮೆ ನೀಡಿರುವ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದರು, ಮರಿಗೌಡ ರಾಜೀನಾಮೆಗೆ ಯಾವುದೇ ಒತ್ತಡವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಪ್ರತಿಪಕ್ಷಗಳ ಆರೋಪಗಳು ಆಧಾರರಹಿತವಾಗಿವೆ, "ಅವರು (ಪ್ರತಿಪಕ್ಷಗಳು) ಮುಡಾ ವಿಷಯದಲ್ಲಿ ಸಮಸ್ಯೆ ಸೃಷ್ಟಿಸಲು ಬಯಸುತ್ತಿದ್ದಾರೆ ಹೀಗಾಗಿ ಈ ರೀತಿ ಹೇಳಿಕೆ ನೀಡುತ್ತಿದ್ದಾರೆ ಎಂದು ಹೇಳಿದರು.
ಉಪಚುನಾವಣೆ ಕುರಿತು ಮಾತನಾಡಿದ ಸುರೇಶ್, ಅಭ್ಯರ್ಥಿಗಳ ಆಯ್ಕೆಯನ್ನು ಪಕ್ಷದ ಹೈಕಮಾಂಡ್ ನಿರ್ಧರಿಸುತ್ತದೆ. ಚನ್ನಪಟ್ಟಣ ಉಪಚುನಾವಣೆಗೆ ಬಿಜೆಪಿ ಎಂಎಲ್ಸಿ ಸಿ.ಪಿ.ಯೋಗೇಶ್ವರ ಅವರಿಗೆ ಟಿಕೆಟ್ ನೀಡದಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅವರಿಗೆ ಅವಕಾಶ ನೀಡುತ್ತದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು ಅಭ್ಯರ್ಥಿಗಳು ಮತ್ತು ಟಿಕೆಟ್ ಹಂಚಿಕೆ ಸೇರಿದಂತೆ ಎಲ್ಲಾ ನಿರ್ಧಾರಗಳನ್ನು ಪಕ್ಷದ ಹೈಕಮಾಂಡ್ ತೆಗೆದುಕೊಳ್ಳುತ್ತದೆ ಎಂದು ಸುರೇಶ್ ಹೇಳಿದರು.
Advertisement