ದಾಖಲೆಗಳ ಸಂಗ್ರಹಕ್ಕೆ ಇಡಿ ಮುಡಾಗೆ ಹೋಗಿರಬಹುದು: ಡಿಸಿಎಂ ಡಿ.ಕೆ ಶಿವಕುಮಾರ್

ಮುಡಾ ಪ್ರಕರಣದಲ್ಲಿ ಹಣಕಾಸು ವ್ಯವಹಾರ ಇಲ್ಲವಾದರೂ ಅಧಿಕಾರಿಗಳು ಮಾಹಿತಿ ಸಂಗ್ರಹಿಸುತ್ತಿರಬಹುದು. ಅದನ್ನು ದಾಳಿ ಎಂದು ಹೇಗೆ ಹೇಳುತ್ತೀರಿ? ಅವರು ದಾಖಲೆ ಕೇಳಬಹುದು, ಇವರು ಕೊಡಬಹುದು. ದಾಖಲೆ ಪರಿಶೀಲನೆ ಮಾಡಬಹುದು.
Deputy Chief Minister DK Shivakumar
ಡಿಸಿಎಂ ಡಿಕೆ.ಶಿವಕುಮಾರ್
Updated on

ಬೆಂಗಳೂರು: ದಾಖಲೆ ಸಂಗ್ರಹಕ್ಕೆಂದು ಜಾರಿ ನಿರ್ದೇಶನಾಲಯ ಮುಡಾಗೆ ಹೋಗಿರಬಹುದು. ಅದನ್ನು ದಾಳಿ ಎಂದು ಹೇಗೆ ಹೇಳುತ್ತೀರಿ ಎಂದು ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ಶುಕ್ರವಾರ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಡಾ ಪ್ರಕರಣದಲ್ಲಿ ಹಣಕಾಸು ವ್ಯವಹಾರ ಇಲ್ಲವಾದರೂ ಅಧಿಕಾರಿಗಳು ಮಾಹಿತಿ ಸಂಗ್ರಹಿಸುತ್ತಿರಬಹುದು. ಅದನ್ನು ದಾಳಿ ಎಂದು ಹೇಗೆ ಹೇಳುತ್ತೀರಿ? ಅವರು ದಾಖಲೆ ಕೇಳಬಹುದು, ಇವರು ಕೊಡಬಹುದು. ದಾಖಲೆ ಪರಿಶೀಲನೆ ಮಾಡಬಹುದು. ಇ.ಡಿ.ಯವರು ಅದಕ್ಕಿಂತ ಹೆಚ್ಚಾಗಿ ಇನ್ನೇನು ಮಾಡಲು ಸಾಧ್ಯ? ದಾಖಲೆಗಳನ್ನು ಹೊಸದಾಗಿ ತಿದ್ದಲು ಸಾಧ್ಯವೇ? ಪ್ರಕರಣದ ಎಲ್ಲ ದಾಖಲೆಗಳು ಸಾರ್ವಜನಿಕವಾಗಿವೆ ಎಂದು ಹೇಳಿದರು.

Deputy Chief Minister DK Shivakumar
ಮುಡಾ ಕಚೇರಿ ಮೇಲೆ ಇಡಿ ದಾಳಿ: ಪ್ರತಿಪಕ್ಷಗಳ ಸ್ವಾಗತ, ಲೋಕಾಯುಕ್ತದಿಂದ ನ್ಯಾಯಯುತ ತನಿಖೆ ಸಾಧ್ಯವಿಲ್ಲ- ಕುಮಾರಸ್ವಾಮಿ

ನಾವು ಕಾನೂನು ರೀತಿಯ ಹೋರಾಟ ಮಾಡುತ್ತೇವೆ. ವಾಸ್ತವಾಂಶ ಜನರ ಮುಂದಿಡುತ್ತೇವೆ. ನನಗೆ ಬಂದ ಮಾಹಿತಿ ಪ್ರಕಾರ ಇ.ಡಿ.ಯವರು ದಾಖಲೆಗಳನ್ನು ಕೇಳಿದ್ದರು, ಇವರು ದಾಖಲೆ ಕೊಟ್ಟಿದ್ದಾರೋ ಇಲ್ಲವೋ ಗೊತ್ತಿಲ್ಲ. ದಾಖಲೆ ನೀಡುವುದು ತಡವಾಗಿರಬಹುದು. ಇದಕ್ಕಾಗಿ ಇ.ಡಿ.ಯವರೇ ಕಚೇರಿಗೆ ಹೋಗಿರಬಹುದು ಎಂದು ತಿಳಿಸಿದ್ದಾರೆ.

ಈ ನಡುವೆ ಶಿವಕುಮಾರ್ ಸಹೋದರ ಹಾಗೂ ಕಾಂಗ್ರೆಸ್ ಮಾಜಿ ಸಂಸದ ಡಿಕೆ ಸುರೇಶ್ ಅವರು, ಮುಡಾ ಪ್ರಕರಣ ಮತ್ತು ಇಡಿ ದಾಳಿಯನ್ನು ರಾಜಕೀಯ ಪ್ರೇರಿತ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com