Bus Accident
ಅಪಘಾತಕ್ಕೀಡಾದ ಬಸ್

ರಾಮನಗರ: ಮದುವೆ ಬಸ್ ಪಲ್ಟಿ, 20ಕ್ಕೂ ಹೆಚ್ಚು ಮಂದಿಗೆ ಗಾಯ

ಮಾಜಿ ಸಂಸದ ಡಿ.ಕೆ. ಸುರೇಶ್ ಆಸ್ಪತ್ರೆಗೆ ಭೇಟಿ ನೀಡಿ, ಗಾಯಾಳುಗಳ ಆರೋಗ್ಯ ವಿಚಾರಿಸಿದರು. ಅವರ ಜೊತೆಗಿರುತ್ತೇನೆ ಎಂದು ಆತ್ಮಸ್ಥೈರ್ಯ ತುಂಬಿದರು.
Published on

ರಾಮನಗರ: ಮದುವೆಗೆ ಜನರನ್ನು ಕರೆದೊಯ್ಯುತ್ತಿದ್ದ ಬಸ್ಸೊಂದು ಪಲ್ಟಿಯಾದ ಪರಿಣಾಮ 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಕನಕಪುರ ತಾಲ್ಲೂಕಿನ ಸಂಗಮ ಬಳಿಯ ಮಡಿವಾಳ ಬಳಿ ಭಾನುವಾರ ನಡೆದಿದೆ. ಗಾಯಾಳುಗಳನ್ನು ಕನಪುರದ ಐಪಿಪಿ ಆಸ್ಪತ್ರೆಗೆ ದಾಖಲಾಗಿಸಲಾಗಿದೆ. ಕೆಲವನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಸ್ಥಳಾಂತರಿಸಲಾಗಿದೆ.

ತಗಡೇಗೌಡನದೊಡ್ಡಿ ಗ್ರಾಮದ ಜೋಡಿಯ ಮದುವೆ ಸಮಾರಂಭವನ್ನು ಸಂಗಮ ಬಳಿ ಇರುವ ಮಡಿವಾಳದಲ್ಲಿ ಆಯೋಜಿಸಲಾಗಿತ್ತು. ಎರಡು ಖಾಸಗಿ ಬಸ್ಸಿನಲ್ಲಿ ಜನರು ತೆರಳುತ್ತಿದ್ದರು. ಈ ಪೈಕಿ ಒಂದು ಬಸ್ ಸಂಗಮದ ಬಳಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಾಜಿ ಸಂಸದ ಡಿ.ಕೆ. ಸುರೇಶ್ ಆಸ್ಪತ್ರೆಗೆ ಭೇಟಿ ನೀಡಿ, ಗಾಯಾಳುಗಳ ಆರೋಗ್ಯ ವಿಚಾರಿಸಿದರು. ಅವರ ಜೊತೆಗಿರುತ್ತೇನೆ ಎಂದು ಆತ್ಮಸ್ಥೈರ್ಯ ತುಂಬಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com