ಬೆಳಗಾವಿ: ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಸಂದೇಶ

ಬಾಂಬ್ ಇಟ್ಟು ವಿಮಾನ ನಿಲ್ದಾಣವನ್ನು ಸ್ಫೋಟಿಸುವುದಾಗಿ ವಿಮಾನ ನಿಲ್ದಾಣದ ನಿರ್ದೇಶಕ ತ್ಯಾಗರಾಜ್ ಅವರ ಇ-ಮೇಲ್ ಗೆ ಚೆನ್ನೈಯಿಂದ ಅಪರಿಚಿತರಿಂದ ಬೆದರಿಕೆ ಪತ್ರದ ಮೇಲ್ ಬಂದಿದೆ.
ಬೆಳಗಾವಿ ವಿಮಾನ ನಿಲ್ದಾಣ
ಬೆಳಗಾವಿ ವಿಮಾನ ನಿಲ್ದಾಣ
Updated on

ಬೆಳಗಾವಿ: ಕಳೆದ ಕೆಲವು ದಿನಗಳಿಂದ ಹಲವು ವಿಮಾನಯಾನ ಸಂಸ್ಥೆಗಳಿಗೆ ಬಾಂಬ್ ಬೆದರಿಕೆ ಸಂದೇಶ ಬರುತ್ತಿರುವಂತೆಯೇ ಇಂದು ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಭಾನುವಾರ ಬಾಂಬ್ ಬೆದರಿಕೆ ಬಂದಿದೆ.

ಬಾಂಬ್ ಇಟ್ಟು ವಿಮಾನ ನಿಲ್ದಾಣವನ್ನು ಸ್ಫೋಟಿಸುವುದಾಗಿ ವಿಮಾನ ನಿಲ್ದಾಣದ ನಿರ್ದೇಶಕ ತ್ಯಾಗರಾಜ್ ಅವರ ಇ-ಮೇಲ್ ಗೆ ಚೆನ್ನೈಯಿಂದ ಅಪರಿಚಿತರಿಂದ ಬೆದರಿಕೆ ಪತ್ರದ ಮೇಲ್ ಬಂದಿದೆ. ಇದರಿಂದ ವಿಮಾನ ನಿಲ್ದಾಣದ ಪ್ರದೇಶದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

ಬಾಂಬ್ ಬೆದರಿಕೆ ಇಮೇಲ್ ಚೆನ್ನೈನಿಂದ ಬಂದಿರುವುದು ಬೆಳಕಿಗೆ ಬಂದಿದೆ. ಈ ಮಧ್ಯೆ ಬಾಂಬ್ ಭೀತಿಯ ನಡುವೆ ವಿಮಾನ ನಿಲ್ದಾಣದಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ. ಶ್ವಾನದಳ, ಬಾಂಬ್ ನಿಷ್ಕ್ರೀಯ ದಳದಿಂದ ವಿಮಾನ ನಿಲ್ದಾಣದಲ್ಲಿ ಪರಿಶೀಲನೆ ನಡೆಸಲಾಗಿದೆ. ಈ ಕುರಿತು ಮಾರಿಹಾಳ ಪೊಲೀಸ್ ಠಾಣೆಯಲ್ಲಿ ಬೆದರಿಕೆ ಪತ್ರದ ಬಗ್ಗೆ ಪ್ರಕರಣ ದಾಖಲಾಗಿದೆ.

ಬೆಳಗಾವಿ ವಿಮಾನ ನಿಲ್ದಾಣ
ವಿಮಾನಗಳಿಗೆ ಹುಸಿ ಬಾಂಬ್ ಬೆದರಿಕೆ: ಅಪರಾಧಿಗಳನ್ನು ಶಿಕ್ಷಿಸಲು ಕಾನೂನು ಜಾರಿಗೆ ಕೇಂದ್ರದ ಚಿಂತನೆ

ನಿನ್ನೆ ಚೆನ್ನೈನಿಂದ-ಬೆಳಗಾವಿಗೆ ಬರುವ ವಿಮಾನದಲ್ಲಿ ಬಾಂಬ್ ಇಡಲಾಗಿದೆ ಎಂದು ಬೆಳಗಾವಿ ವಿಮಾನ ನಿಲ್ದಾಣ ಅಥಾರಿಟಿಗೆ ಇ-ಮೇಲ್ ಮೂಲಕ ಸಂದೇಶ ಬಂದಿತ್ತು. ಇದರಿಂದಾಗಿ ಬೆಳಗಾವಿಗೆ ಚನ್ನೈನಿಂದ ಬರುವ ವಿಮಾನ ಸಂಪರ್ಕ ಕಡಿತಗೊಳಿಸಲಾಗಿತ್ತು.

ಈ ಬಗ್ಗೆ ಮಾಳಮಾರುತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಇ ಮೇಲ್ ಎಲ್ಲಿಂದ ಬಂದಿದೆ? ಯಾರು ಕಳುಹಿಸಿದ್ದಾರೆ ಎಂದು ಪೊಲೀಸರು ತನಿಖೆ ಕೈಗೊಂಡಿದ್ದಾರೆ ಎಂದು ಹೇಳಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com