ರಾಜ್ಯದಲ್ಲಿ 200 ಕೋಟಿ ರೂ ವೆಚ್ಚದಲ್ಲಿ 100 ನೂತನ ಪೊಲೀಸ್ ಠಾಣೆಗಳ ಸ್ಥಾಪನೆ: ಸಿಎಂ ಸಿದ್ದರಾಮಯ್ಯ

ಪೊಲೀಸ್ ಸಂಸ್ಮರಣಾ ದಿನದ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ಕರ್ತವ್ಯದ ವೇಳೆ ಹುತಾತ್ಮರಾದ ಕರ್ನಾಟಕದಲ್ಲಿ 12 ಮಂದಿ ಸೇರಿದಂತೆ ದೇಶದಲ್ಲಿ 216 ಪೊಲೀಸರಿಗೆ ಶ್ರದ್ಧಾಂಜಲಿ ಸಲ್ಲಿಸಿದ ಮುಖ್ಯಮಂತ್ರಿ, ಪೊಲೀಸರಿಗೆ ಮನೆ ನೀಡುವುದು ಸರ್ಕಾರದ ಕರ್ತವ್ಯ. 2025 ರ ವೇಳೆಗೆ 10,000 ವಸತಿ ಕ್ವಾರ್ಟಸ್ ನಿರ್ಮಿಸುತ್ತೇವೆ ಎಂದರು.
ಸಿಎಂ ಸಿದ್ದರಾಮಯ್ಯ
ಸಿಎಂ ಸಿದ್ದರಾಮಯ್ಯCM Siddaramaiah
Updated on

ಬೆಂಗಳೂರು: ರಾಜ್ಯದಲ್ಲಿ 100 ಹೊಸ ಪೊಲೀಸ್ ಠಾಣೆಗಳನ್ನು ಸ್ಥಾಪಿಸಲಾಗುವುದು ಮತ್ತು 2025 ರ ವೇಳೆಗೆ 10,000 ಪೊಲೀಸ್ ಕ್ವಾರ್ಟರ್ಸ್‌ಗಳನ್ನು ನಿರ್ಮಿಸಲಾಗುವುದು ಎಂದು ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ಘೋಷಿಸಿದ್ದಾರೆ.

ಪೊಲೀಸ್ ಸಂಸ್ಮರಣಾ ದಿನದ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ಕರ್ತವ್ಯದ ವೇಳೆ ಹುತಾತ್ಮರಾದ ಕರ್ನಾಟಕದಲ್ಲಿ 12 ಮಂದಿ ಸೇರಿದಂತೆ ದೇಶದಲ್ಲಿ 216 ಪೊಲೀಸರಿಗೆ ಶ್ರದ್ಧಾಂಜಲಿ ಸಲ್ಲಿಸಿದ ಮುಖ್ಯಮಂತ್ರಿ, ಪೊಲೀಸರಿಗೆ ಮನೆ ನೀಡುವುದು ಸರ್ಕಾರದ ಕರ್ತವ್ಯ. 2025 ರ ವೇಳೆಗೆ 10,000 ವಸತಿ ಕ್ವಾರ್ಟಸ್ ನಿರ್ಮಿಸುತ್ತೇವೆ, ಇದಕ್ಕಾಗಿ 2,000 ಕೋಟಿ ರೂ. ಮೀಸಲಿಡಲಾಗಿದೆ ಎಂದರು.

100 ಹೊಸ ಪೊಲೀಸ್ ಠಾಣೆಗಳನ್ನು ನಿರ್ಮಿಸಲಾಗುವುದು, ಇದಕ್ಕಾಗಿ 200 ಕೋಟಿ ರೂ. ಮಂಜೂರು ಮಾಡಲಾಗಿದೆ. ಏಳು ಹೊಸ ಪಬ್ಲಿಕ್ ಶಾಲೆಗಳನ್ನು ತೆರೆಯಲಾಗುವುದು, ಮುಂಬರುವ ವರ್ಷಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಅಂತಹ ಶಾಲೆಗಳನ್ನು ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಭರವಸೆ ನೀಡಿದರು.

ಸಮಾಜದಲ್ಲಿ ಶಾಂತಿ ಕಾಪಾಡಲು ಕಾನೂನು ಮತ್ತು ಸುವ್ಯವಸ್ಥೆಯ ಮಹತ್ವವನ್ನು ಒತ್ತಿ ಹೇಳಿದ ಸಿದ್ದರಾಮಯ್ಯ, ಶಾಂತಿಯುತ ಸಮಾಜವು ಹೂಡಿಕೆಯನ್ನು ಆಕರ್ಷಿಸುತ್ತದೆ, ಹೆಚ್ಚಿನ ಉದ್ಯೋಗಾವಕಾಶಗಳನ್ನು ಸೃಷ್ಟಿಸುತ್ತದೆ, ತಲಾ ಆದಾಯವನ್ನು ಹೆಚ್ಚಿಸುತ್ತದೆ ಮತ್ತು ಆರ್ಥಿಕತೆಯನ್ನು ಸುಧಾರಿಸುತ್ತದೆ ಎಂದು ಹೇಳಿದರು.

ಸಿಎಂ ಸಿದ್ದರಾಮಯ್ಯ
ಶೀಘ್ರದಲ್ಲೇ 7,200 ಕೋಟಿ ರೂ. ವೆಚ್ಚದ ಕಾವೇರಿ 6ನೇ ಹಂತದ ಯೋಜನೆ ಅನುಷ್ಠಾನ: ಸಿಎಂ ಸಿದ್ದರಾಮಯ್ಯ

ಕಾನೂನುಬಾಹಿರ ಚಟುವಟಿಕೆಗಳನ್ನು ತಡೆಗಟ್ಟಲು ಮತ್ತು ಅಪಘಾತಗಳ ಸಂದರ್ಭದಲ್ಲಿ ತ್ವರಿತ ಪ್ರತಿಕ್ರಿಯೆಗಾಗಿ, 200 ವಾಹನಗಳು ಹೆದ್ದಾರಿಗಳಲ್ಲಿ ಗಸ್ತು ತಿರುಗುತ್ತಿವೆ ಮತ್ತು ಸಾರ್ವಜನಿಕ ಸ್ಥಳಗಳ ನಿಗಾವಣೆಗಾಗಿ 6,000 ಸಿಸಿಟಿವಿ ಕ್ಯಾಮೆರಾಗಳನ್ನು ಬಳಸಲಾಗುತ್ತದೆ. ಈ ಸಂದರ್ಭದಲ್ಲಿ ಪೊಲೀಸರಿಗೆ ಕರ್ತವ್ಯ ನಿರ್ವಹಿಸಲು ರಾಜ್ಯ ಸರ್ಕಾರ ಎಲ್ಲ ಸೌಲಭ್ಯಗಳನ್ನು ಒದಗಿಸಲಿದೆ ಎಂದು ಸಿಎಂ ಭರವಸೆ ನೀಡಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com