
ಬೆಂಗಳೂರು: ಬೆಂಗಳೂರಿನಲ್ಲಿ ಸುರಿಯುತ್ತಿರುವ ಭಾರಿ ಮಳೆಯ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಬೆಂಗಳೂರು ನಗರ ವ್ಯಾಪ್ತಿಯ ಎಲ್ಲ ಎಲ್ಲ ಸರ್ಕಾರಿ, ಖಾಸಗಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಬೆಂಗಳೂರು ನಗರ ಆಯುಕ್ತರು ಬೆಂಗಳೂರಿನ ಎಲ್ಲ ಸರ್ಕಾರಿ ಮತ್ತು ಖಾಸಗಿ ಶಾಲೆಗಳಿಗೆ, ಅಂಗನವಾಡಿಗಳಿಗೆ ರಜೆ ಘೋಷಣೆ ಮಾಡಿ ಆದೇಶ ಹೊರಡಿಸಿದ್ದಾರೆ. ಇಂದು ಒಂದು ದಿನದ ಮಟ್ಟಿಗೆ ಈ ಆದೇಶ ಅನ್ವಯವಾಗಲಿದ್ದು, ಭಾರಿ ಮಳೆ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮವಾಗಿ ಈ ನಿರ್ಧಾರ ಪ್ರಕಟಿಸಲಾಗಿದೆ.
ಅಂಗನವಾಡಿ, ಎಲ್ಕೆಜಿ, ಯುಕೆಜಿ, ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಸರ್ಕಾರಿ, ಖಾಸಗಿ ಪ್ರಾಥಮಿಕ, ಪ್ರೌಢಶಾಲೆ, ಅನುದಾನಿತ ಶಾಲೆ, ಅನುದಾನ ರಹಿತ ಶಾಲೆ ಸೇರಿ ನಗರದ ಎಲ್ಲ ಶಾಲೆಗಳಿಗೆ ರಜೆ ಘೋಷಿಸಿ ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್ ಆದೇಶ ಹೊರಡಿಸಿದ್ದಾರೆ.
ಶನಿವಾರ-ಭಾನುವಾರ ಹೆಚ್ಟುವರಿ ತರಗತಿ
ಮುಂಜಾಗ್ರತಾ ಕ್ರಮವಾಗಿ ರಜೆಯನ್ನು ನೀಡಿದ್ದರಿಂದ ಕಲಿಕಾ ಸಮಯ ಕೊರತೆ ನೀಗಿಸಲು ಶನಿವಾರ ಮಧ್ಯಾಹ್ನ ಅಥವಾ ಭಾನುವಾರ ಹೆಚ್ಚುವರಿ ತರಗತಿ ನಡೆಸಲು ಸೂಚನೆ ನೀಡಲಾಗಿದೆ. ವಿದ್ಯಾರ್ಥಿಗಳ ಪೋಷಕರು, ಕಾಲೇಜು ಮುಖ್ಯಸ್ಥರು, ವಿದ್ಯಾರ್ಥಿಗಳು ನೀರು ಇರುವ ತಗ್ಗು ಪ್ರದೇಶಗಳಿಗೆ ಹೋಗದಂತೆ ಜಾಗ್ರತೆ ವಹಿಸಬೇಕು. ವಿದ್ಯಾರ್ಥಿಗಳು ಕಾಲೇಜುಗಳಿಗೆ ಹೋಗುವ ವಾಹನಗಳ ಸುರಕ್ಷತೆಯನ್ನು ನೋಡಿಕೊಳ್ಳಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.
Advertisement