MUDA Case: 800 ಪುಟಗಳ ದಾಖಲೆ, ಹಾರ್ಡ್ ಡಿಸ್ಕ್ ED ವಶಕ್ಕೆ!

ಇಡಿ ಅಧಿಕಾರಿಗಳು ಸಾಫ್ಟ್ ಮತ್ತು ಹಾರ್ಡ್ ಕಾಪಿಗಳನ್ನು ತೆಗೆದುಕೊಂಡು ಫೋಟೋಕಾಪಿ ಪಡೆದರು. ವಶಪಡಿಸಿಕೊಂಡ ದಾಖಲೆಗಳನ್ನು ಪ್ಯಾಕ್ ಮಾಡಿ ಪೊಲೀಸ್ ಭದ್ರತೆಯಲ್ಲಿ ಸ್ಥಳಾಂತರಿಸಿದರು.
ED takes away 800 pages of papers, hard disk
ಮೈಸೂರಿನ ಮುಡಾ ಕಚೇರಿ ಮೇಲೆ ಇಡಿ ದಾಳಿ
Updated on

ಮೈಸೂರು: ಮೈಸೂರಿನ ಮುಡಾ ಕಚೇರಿ ಮೇಲೆ ಶುಕ್ರವಾರ ದಿಢೀರ್ ದಾಳಿ ನಡೆಸಿದ್ದ ಜಾರಿನಿರ್ದೇಶನಾಲಯದ ಅಧಿಕಾರಿಗಳು ಸತತ 2 ದಿನಗಳ ಕಾಲ ಪರಿಶೀಲನೆ ನಡೆಸಿ, 800 ಪುಟಗಳ ಪೇಪರ್‌ಗಳು, ಹಾರ್ಡ್ ಡಿಸ್ಕ್ ಅನ್ನು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ.

ಸುಮಾರು 8 ಅಧಿಕಾರಿಗಳ ಜಾರಿನಿರ್ದೇಶನಾಲಯ ತಂಡ ಮೈಸೂರಿನ ಮುಡಾ ಪರಿಶೀಲನೆ ನಡೆಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಬಿಎಂ ಒಳಗೊಂಡ ಮುಡಾ ನಿವೇಶನ ಹಂಚಿಕೆ ಹಗರಣದ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ (ಮುಡಾ) 800 ಪುಟಗಳ ದಾಖಲೆಗಳು ಮತ್ತು ಹಾರ್ಡ್ ಡಿಸ್ಕ್ ಅನ್ನು ವಶಪಡಿಸಿಕೊಂಡಿದ್ದಾರೆ.

ಭಾನುವಾರ ಬೆಳಗಿನ ಜಾವ 2.30ರವರೆಗೆ ಅಧಿಕಾರಿಗಳು ಶೋಧ ನಡೆಸಿ 50:50 ಅನುಪಾತದಡಿ ಹಂಚಿಕೆ ಮಾಡಿರುವ ನಿವೇಶನಗಳಿಗೆ ಸಂಬಂಧಿಸಿದ ದಾಖಲೆಗಳನ್ನು ಕೇಳಿದ್ದಾರೆ ಎನ್ನಲಾಗಿದೆ. ಮುಡಾ ಆಯುಕ್ತ ಎಎನ್ ರಘುನಂದನ್ ಮತ್ತು ಇತರ ಅಧಿಕಾರಿಗಳು ಪಾರ್ವತಿ ಒಡೆತನದ ಕೆಸರೆಯಲ್ಲಿ 3 ಎಕರೆ 18 ಗುಂಟಾ ಜಮೀನು ಮತ್ತು ವಿಜಯನಗರದಲ್ಲಿ ಅವರಿಗೆ ಮಂಜೂರು ಮಾಡಿದ 24 ನಿವೇಶನಗಳಿಗೆ ಸಂಬಂಧಿಸಿದ ಎಲ್ಲಾ ಪತ್ರಗಳನ್ನು ಒದಗಿಸಿದ್ದಾರೆ ಎನ್ನಲಾಗಿದೆ. ಈ ವೇಳೆ ಇಡಿ ಅಧಿಕಾರಿಗಳು ಸಾಫ್ಟ್ ಮತ್ತು ಹಾರ್ಡ್ ಕಾಪಿಗಳನ್ನು ತೆಗೆದುಕೊಂಡು ಫೋಟೋಕಾಪಿ ಪಡೆದರು. ವಶಪಡಿಸಿಕೊಂಡ ದಾಖಲೆಗಳನ್ನು ಪ್ಯಾಕ್ ಮಾಡಿ ಪೊಲೀಸ್ ಭದ್ರತೆಯಲ್ಲಿ ಸ್ಥಳಾಂತರಿಸಿದರು.

ED takes away 800 pages of papers, hard disk
ಮುಡಾ ಕಚೇರಿ ಮೇಲೆ ED ದಾಳಿ; ಟಿಕೆಟ್ ಕೊಡಿಸುವುದಾಗಿ ವಂಚನೆ- ಕೇಂದ್ರ ಸಚಿವ ಜೋಶಿ ಸಹೋದರನ ವಿರುದ್ಧ ಕೇಸ್!

41 ಗಂಟೆಗಳ ನಡೆದ ಈ ದಾಳಿ ಮತ್ತು ಶೋಧ ಕಾರ್ಯಾಚರಣೆ ವೇಳೆ ಮುಡಾ ಕಚೇರಿಯಲ್ಲಿ ಸ್ಥಳೀಯ ಪೊಲೀಸರೊಂದಿಗೆ ಸುಮಾರು 20 ಶಸ್ತ್ರಸಜ್ಜಿತ ಸಿಆರ್‌ಪಿಎಫ್ ಸಿಬ್ಬಂದಿ ಹಗಲು-ರಾತ್ರಿ ಭದ್ರತಾ ಮೇಲುಸ್ತುವಾರಿ ನೋಡಿಕೊಂಡಿದ್ದರು. ತನಿಖೆ ವೇಳೆ ಇಡಿ ಅಧಿಕಾರಿಗಳಿಗೆ ಮುಡಾ ಅಧಿಕಾರಿಗಳು ಸಂಪೂರ್ಣ ಸಹಕಾರ ನೀಡಿದ್ದಾರೆ ಎಂದು ರಘುನಂದನ್ ಸುದ್ದಿಗಾರರಿಗೆ ತಿಳಿಸಿದರು. ಸೋಮವಾರದಿಂದ ಮುಡಾ ತನ್ನ ಸಾಮಾನ್ಯ ಕಾರ್ಯಾಚರಣೆಯನ್ನು ಪುನರಾರಂಭಿಸಲಿದೆ ಎಂದು ಅವರು ಹೇಳಿದರು.

ಇದೇ ವೇಳೆ ಮುಡಾ ನಿವೇಶನ ಹಗರಣದ ತನಿಖೆ ನಡೆಸುತ್ತಿರುವ ಲೋಕಾಯುಕ್ತ ಪೊಲೀಸರು ಮೈಸೂರಿನಲ್ಲಿ ಸೇವೆ ಸಲ್ಲಿಸಿದ್ದ ಹಾಗೂ ಕೆಸರೆಯಲ್ಲಿನ ಜಮೀನನ್ನು ಡಿನೋಟಿಫೈ ಮಾಡಿದ್ದ ಮಾಜಿ ಜಿಲ್ಲಾಧಿಕಾರಿ ಹಾಗೂ ರಾಯಚೂರು ಸಂಸದ ಕುಮಾರ್ ನಾಯ್ಕ್ ಅವರನ್ನು ವಿಚಾರಣೆಗೆ ಒಳಪಡಿಸಿದ್ದಾರೆ.

ಕೆಸರೆಯಲ್ಲಿ ಸರ್ವೆ ನಂಬರ್ 464ರಲ್ಲಿನ ಕೃಷಿ ಭೂಮಿಯ ಪರಿವರ್ತನೆಗೆ ಮಂಜೂರಾತಿ ನೀಡುವ ಕುರಿತು ಲೋಕಾಯುಕ್ತ ಪೊಲೀಸರು ಅವರಿಗೆ ಸರಣಿ ಪ್ರಶ್ನೆಗಳನ್ನು ಮುಂದಿಟ್ಟರು. ಅವರು ಸ್ಥಳಕ್ಕೆ ಭೇಟಿ ನೀಡಿದ ವಿವರಗಳನ್ನು ಕೇಳಿದರು ಮತ್ತು ಆರೋಪಿ ನಂ. 4 ದೇವರಾಜ್ ಅವರು ಸಲ್ಲಿಸಿದ ದಾಖಲೆಗಳನ್ನು ಮತ್ತು ಸಾಕ್ಷಿಯ ಸಹಿ ನಾಪತ್ತೆಯಾದ ಬಗ್ಗೆ ಅವರು ಹೋಗಿದ್ದಾರೆಯೇ ಎಂದು ನಾಯಕ್ ಅವರನ್ನು ಕೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com