ಪರಿಶಿಷ್ಟರ ಮೀಸಲಾತಿ: ಕೇಂದ್ರಕ್ಕೆ ಪತ್ರ ಬರೆಯುವಂತೆ ಸಿಎಂ ಸಿದ್ದರಾಮಯ್ಯಗೆ ಶಾಸಕರ ಒತ್ತಾಯ

ಒಳ ಮೀಸಲಾತಿ ಜಾರಿಗೊಳಿಸಲು ರಾಜ್ಯಗಳಿಗೆ ಅಧಿಕಾರವಿದೆ ಎಂದು ಸುಪ್ರೀಂ ಕೋರ್ಟ್ ಆಗಸ್ಟ್ 1 ರಂದು ಹೊರಡಿಸಿದ್ದ ಆದೇಶದಲ್ಲಿ ಹೇಳಿತ್ತು. ಆದರೆ ಅದು ಪರಿಶೀಲಿಸಬಹುದಾದ ಪ್ರಾಯೋಗಿಕ ಡೇಟಾವನ್ನು ಆಧರಿಸಿರಬೇಕು ಎಂದು ಸಲಹೆ ನೀಡಿತ್ತು.
ಒಳ ಮೀಸಲಾತಿ ವಿರೋಧಿಸಿ ಬಂಜಾರ ಸಮುದಾಯದ ಪ್ರತಿಭಟನೆ
ಒಳ ಮೀಸಲಾತಿ ವಿರೋಧಿಸಿ ಬಂಜಾರ ಸಮುದಾಯದ ಪ್ರತಿಭಟನೆ
Updated on

ತುಮಕೂರು: ಗೃಹ ಸಚಿವ ಡಾ.ಜಿ.ಪರಮೇಶ್ವರ್ ನೇತೃತ್ವದಲ್ಲಿ ಸೋಮವಾರ ನಡೆದ ಪರಿಶಿಷ್ಟ ಜಾತಿ (ಎಸ್‌ಸಿ) ಶಾಸಕರ ಸಭೆಯಲ್ಲಿ ಜಾತಿ ಗಣತಿಗೆ ಯಾವ ದತ್ತಾಂಶವನ್ನು ಗಣನೆಗೆ ತೆಗೆದುಕೊಳ್ಳಬೇಕು ಎಂಬುದರ ಬಗ್ಗೆ ಮಧ್ಯಪ್ರವೇಶಿಸುವಂತೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸೂಚಿಸಲು ನಿರ್ಧರಿಸಲಾಯಿತು. ಪರಿಶಿಷ್ಟ ಜಾತಿಯ ಒಳ ಮೀಸಲಾತಿ ಅನುಷ್ಠಾನಗೊಳಿಸುವಾಗ ಜಾತಿ ಗಣತಿಯ ದತ್ತಾಂಶವನ್ನು ಗಣನೆಗೆ ತೆಗೆದುಕೊಳ್ಳಬೇಕು.

ಒಳ ಮೀಸಲಾತಿ ಜಾರಿಗೊಳಿಸಲು ರಾಜ್ಯಗಳಿಗೆ ಅಧಿಕಾರವಿದೆ ಎಂದು ಸುಪ್ರೀಂ ಕೋರ್ಟ್ ಆಗಸ್ಟ್ 1 ರಂದು ಹೊರಡಿಸಿದ್ದ ಆದೇಶದಲ್ಲಿ ಹೇಳಿತ್ತು. ಆದರೆ ಅದು ಪರಿಶೀಲಿಸಬಹುದಾದ ಪ್ರಾಯೋಗಿಕ ಡೇಟಾವನ್ನು ಆಧರಿಸಿರಬೇಕು ಎಂದು ಸಲಹೆ ನೀಡಿತ್ತು.

ಸಭೆಯಲ್ಲಿ ಈ ವಿಷಯದ ಬಗ್ಗೆ ಚರ್ಚಿಸಲಾಗಿದ್ದು, ಕೇಂದ್ರದಿಂದ ಸ್ಪಷ್ಟತೆ ಪಡೆಯದೆ ಎಸ್‌ಸಿ ಕೋಟಾದ ವರ್ಗೀಕರಣವನ್ನು ಜಾರಿಗೊಳಿಸುವುದು ಪ್ರತಿಕೂಲವಾಗಬಹುದು. ಏಕೆಂದರೆ ಯಾರಾದರೂ ನ್ಯಾಯಾಲಯಕ್ಕೆ ಹೋಗಿ ಆದೇಶಕ್ಕೆ ತಡೆ ನೀಡಬಹುದು. ಹೀಗಾಗಿ 2011ರ ಜನಗಣತಿ ವರದಿಯನ್ನು ಪರಿಗಣಿಸಬೇಕೇ ಅಥವಾ ಜಾತಿ ಗಣತಿ ಎಂದು ಕರೆಯಲಾಗುವ ಸಾಮಾಜಿಕ-ಆರ್ಥಿಕ ಶೈಕ್ಷಣಿಕ ಸಮೀಕ್ಷೆಯನ್ನು ಪರಿಗಣಿಸಬಹುದೇ ಎಂಬುದರ ಬಗ್ಗೆ ಕೇಂದ್ರಕ್ಕೆ ಪತ್ರ ಬರೆಯಬೇಕು ಎಂದು ನಿರ್ಧರಿಸಲಾಗಿದೆ.

ಒಳ ಮೀಸಲಾತಿ ಕುರಿತ ನ್ಯಾಯಮೂರ್ತಿ ಎ.ಜೆ.ಸದಾಶಿವ ಆಯೋಗದ ವರದಿಯು ತನ್ನದೇ ಆದ ನ್ಯೂನತೆಗಳನ್ನು ಹೊಂದಿದೆ. ಏಕೆಂದರೆ ಇದರಲ್ಲಿ ಆರು ಲಕ್ಷಕ್ಕೂ ಹೆಚ್ಚು ಎಸ್‌ಸಿ ಜನರು ತಮ್ಮ ಉಪಜಾತಿಗಳನ್ನು ಉಲ್ಲೇಖಿಸಿಲ್ಲ. ಹಿಂದಿನ ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ ಅದನ್ನು ತಿರಸ್ಕರಿಸಿತ್ತು. ಆಗಿನ ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ನೇತೃತ್ವದ ಸಂಪುಟ ಉಪಸಮಿತಿ ವರದಿ ನೀಡಿದ್ದು, ಅದರ ಆಧಾರದ ಮೇಲೆ ಕೋಟಾ ವರ್ಗೀಕರಣ ಮಾಡಲು ಸಂಪುಟ ನಿರ್ಧರಿಸಿದೆ.ಆದರೆ ಅದೂ ವಾಸ್ತವಿಕವಲ್ಲ ಎಂದು ಕಾಂಗ್ರೆಸ್ ಮುಖಂಡರು ಸಭೆಯಲ್ಲಿ ಹೇಳಿದ್ದಾರೆ.

ಒಳ ಮೀಸಲಾತಿ ವಿರೋಧಿಸಿ ಬಂಜಾರ ಸಮುದಾಯದ ಪ್ರತಿಭಟನೆ
ಒಳ ಮೀಸಲಾತಿ: ಪರಿಶಿಷ್ಟ ಜಾತಿ ಸಮುದಾಯಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಜಾರಿಗೊಳಿಸಲು ಎಚ್ ಡಿಕೆ ಒತ್ತಾಯ 

ಅಕ್ಟೋಬರ್ 28 ರಂದು ಸಿದ್ದರಾಮಯ್ಯ ಸಂಪುಟ ಸಭೆ ಕರೆಯುವ ಮೊದಲು, ಪರಿಶಿಷ್ಟ ಜಾತಿಯ ಶಾಸಕರು ಮತ್ತೊಂದು ಸುತ್ತಿನ ಮಾತುಕತೆ ನಡೆಸುವ ಸಾಧ್ಯತೆಯಿದೆ. ಎಲ್ಲಾ 23 ಎಸ್ ಸಿ ಶಾಸಕರು ಸೋಮವಾರದ ಸಭೆಯಲ್ಲಿ ಭಾಗವಹಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com