ಬೆಂಗಳೂರು: ಬೆಂಗಳೂರಿನಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತ ಪ್ರಕರಣದಲ್ಲಿ ಮತ್ತೊಬ್ಬ ಕಾರ್ಮಿಕ ಸಾವನ್ನಪ್ಪಿದ್ದು, ಒಟ್ಟು ಮೃತರ ಸಂಖ್ಯೆ ಐದಕ್ಕೆ ಏರಿಕೆಯಾಗಿದೆ.
ಹೆಣ್ಣೂರು ಸಮೀಪದ ಬಾಬುಸಾಬ್ಪಾಳ್ಯದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದುಬಿದ್ದಿದ್ದು, ಇದುವರೆಗೂ ಹಲವು ಮಂದಿಯನ್ನು ರಕ್ಷಿಸಲಾಗಿದೆ. ಅವಶೇಷಗಳಡಿ ಸಿಲುಕಿದ್ದ ಕಾರ್ಮಿಕನನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಟ್ಟಡದ ಅವಶೇಷಗಳಡಿ ಮತ್ತೊಬ್ಬ ಕಾರ್ಮಿಕನ ಶವ ಪತ್ತೆಯಾಗಿದೆ ಒಟ್ಟು ಐವರ ಶವ ಪತ್ತೆಯಾಗಿದೆ. ಅವಶೇಷಗಳಡಿ ಸಿಲುಕಿರುವವರನ್ನು ರಕ್ಷಿಸಲು ಎನ್ ಡಿ ಆರ್ ಎಫ್ ಮತ್ತು ಎಸ್ ಡಿ ಆರ್ ಎಫ್ ತಂಡಗಳು ಸತತ 17 ಗಂಟೆಯಿಂದ ರಕ್ಷಣಾ ಕಾರ್ಯಾಚರಣೆ ಮುಂದುವರಿಸಿವೆ. ಅವೈಜ್ಞಾನಿಕವಾಗಿ ಕಟ್ಟಡ ನಿರ್ಮಿಸಿದ ಹಿನ್ನೆಲೆ ಕಟ್ಟಡ ಮಾಲೀಕ ಸೇರಿ ಹಲವರ ವಿರುದ್ಧ ಹೆಣ್ಣೂರು ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ. ನಾಲ್ಕು ಅಂತಸ್ತಿನ ಕಟ್ಟಡಕ್ಕೆ ಅನುಮತಿ ಪಡೆದು 7 ಅಂತಸ್ತಿನ ಕಟ್ಟಡ ನಿರ್ಮಿಸಲಾಗುತ್ತಿತ್ತು.
ಸುಮಾರು 15 ಕಾರ್ಮಿಕರು ಈ ಬಿಲ್ಡಿಂಗ್ ನಿರ್ಮಾಣದಲ್ಲಿ ತೊಡಗಿದ್ದರು. ಬಹುತೇಕ ಕಟ್ಟಡ ನಿರ್ಮಾಣ ಮಾಡಿ, ಪೇಟಿಂಗ್ ಕೆಲಸಗಳು ನಡೆಯುತ್ತಿದ್ದವು ಎಂದು ವರದಿಯಾಗಿದೆ. ಕಟ್ಟಡ ದಲ್ಲಿ ಸುಮಾರು ಹದಿನೈದು ಜನ ಕಾರ್ಮಿಕರಿದ್ದರುಎಂದು ತಿಳಿದು ಬಂದಿದೆ.
Advertisement