ಬೆಂಗಳೂರು: ಚನ್ನಪಟ್ಟಣ ವಿಧಾನಸಭೆ ಉಪಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಸಮನ್ವಯ ಸಭೆ ರದ್ದುಗೊಂಡಿದೆ ಎಂಬ ಮಾಹಿತಿ ಲಭ್ಯವಾಗಿದೆ. ಖಾಸಗಿ ಹೊಟೆಲ್ ನಲ್ಲಿ ಸಮನ್ವಯ ಸಭೆ ನಿಗದಿಯಾಗಿತ್ತು.
ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರ ತಾಯಿ ಚನ್ನಮ್ಮ ಅವರಿಗೆ ಆರೋಗ್ಯ ಸರಿ ಇಲ್ಲದ ಕಾರಣ, ಹೆಚ್ ಡಿ ಕುಮಾರಸ್ವಾಮಿ ತಾಯಿಯ ಆರೋಗ್ಯ ವಿಚಾರಿಸಲು ತೆರಳಿದ ಹಿನ್ನೆಲೆಯಲ್ಲಿ ಸಭೆ ರದ್ದುಗೊಂಡಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗುವ ಸಾಧ್ಯತೆ ಇದ್ದ ಸಿಪಿ ಯೋಗೇಶ್ವರ್, ಬಿಜೆಪಿ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ ಕಾಂಗ್ರೆಸ್ ಸೇರ್ಪಡೆಯಾದ ಹಿನ್ನೆಲೆಯಲ್ಲಿ ಚನ್ನಪಟ್ಟಣಕ್ಕೆ ಎನ್ ಡಿಎ ಅಭ್ಯರ್ಥಿಯನ್ನು ಅಂತಿಮಗೊಳಿಸುವ ವಿಷಯ ಕಗ್ಗಂಟಾಗಿದೆ.
ಅಭ್ಯರ್ಥಿಯ ಆಯ್ಕೆ ಅಂತಿಮಗೊಳಿಸಲು ಚರ್ಚೆ ನಡೆಸುವುದಕ್ಕಾಗಿ ಬಿಜೆಪಿ-ಜೆಡಿಎಸ್ ಮುಖಂಡರ ಸಮನ್ವಯ ಸಭೆ ಇಂದು ನಿಗದಿಯಾಗಿತ್ತು.
Advertisement