ಬೆಂಗಳೂರು ಕಟ್ಟಡ ಕುಸಿತ ಪ್ರಕರಣ: ಪೊಲೀಸರಿಂದ ಮಾಲೀಕ ಹಾಗೂ ಗುತ್ತಿಗೆದಾರನ ಬಂಧನ

ಕಟ್ಟಡ ಮಾಲೀಕ ಭುವನ್​ ರೆಡ್ಡಿ ನಾಲ್ಕು ಮಹಡಿ ನಿರ್ಮಾಣಕ್ಕೆ ಅನುಮತಿ ಪಡೆದು, ಆರು ಮಹಡಿಯ ಕಟ್ಟಡ ಕಟ್ಟಿಸುತ್ತಿದ್ದ. ಇದರಿಂದ ಕಟ್ಟಡ ಕುಸಿದು ಬಿದ್ದಿದೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ.
Building collapsed in bengaluru
ಬೆಂಗಳೂರು ಕಟ್ಟಡ ಕುಸಿತ
Updated on

ಬೆಂಗಳೂರು: ನಗರದ ಬಾಬುಸಾಬ್​ಪಾಳ್ಯದಲ್ಲಿ ಕಟ್ಟಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಣ್ಣೂರು ಠಾಣೆ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಕಟ್ಟಡದ ಮಾಲೀಕ ಭುವನ್ ರೆಡ್ಡಿ, ಗುತ್ತಿಗೆದಾರ ಮುನಿಯಪ್ಪ ಎಂಬುವರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.

ಕಟ್ಟಡ ಮಾಲೀಕ ಭುವನ್​ ರೆಡ್ಡಿ ನಾಲ್ಕು ಮಹಡಿ ನಿರ್ಮಾಣಕ್ಕೆ ಅನುಮತಿ ಪಡೆದು, ಆರು ಮಹಡಿಯ ಕಟ್ಟಡ ಕಟ್ಟಿಸುತ್ತಿದ್ದ. ಇದರಿಂದ ಕಟ್ಟಡ ಕುಸಿದು ಬಿದ್ದಿದೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ. ಅಗ್ನಿಶಾಮಕ ಸಿಬ್ಬಂದಿ ಕಟ್ಟಡದ ಅವಶೇಷಗಳಡಿ ಸಿಲುಕಿದ್ದ ಮತ್ತೋರ್ವ ಕಾರ್ಮಿನ ಶವ ಹೊರಗೆ ತೆಗೆದಿದ್ದಾರೆ. ಈ ಮೂಲಕ ಸಾವಿನ ಸಂಖ್ಯೆ ಆರಕ್ಕೆ ಏರಿಕೆಯಾಗಿದೆ. ಬಿಹಾರ ಮೂಲದವಾರದ ಕಾರ್ಮಿಕ ಮೊಹಮ್ಮದ್ ಸಾಹಿಲ್​​, ತಿರುಪಾಲಿ, ಅರ್ಮಾನ್​​, ಶಂಕರ್​​, ಸತ್ಯರಾಜ್​, ಸೋಲೋ ಪಾಸ್ವಾನ್ ಮೃತರು. ಇದುವರೆಗೂ 13 ಜನ ಕಾರ್ಮಿಕರನ್ನು ರಕ್ಷಣೆ ಮಾಡಲಾಗಿದೆ.

NDRF, SDRF ಮತ್ತು ಅಗ್ನಿಶಾಮಕ ಸಿಬ್ಬಂದಿ‌ಯಿಂದ ಕಾರ್ಯಾಚರಣೆ ಮುಂದುವರೆದಿದೆ. ಆರು ಅಂತಸ್ತಿನ ಕಟ್ಟಡ ನಿರ್ಮಾಣ ಕಾರ್ಯ ಕಳೆದ ಎಂಟು ತಿಂಗಳಿಂದ ನಡೆಯುತ್ತಿದೆ. ಆದರೆ, ಇದೀಗ ಏಕಾಏಕಿ ಕುಸಿದುಬಿದ್ದಿದೆ. ಈ ಘಟನೆ ಸಂಭವಿಸುತ್ತಿದ್ದಂತೆಯೇ ಕಟ್ಟಡ ಮಾಲೀಕ ಸಂಪರ್ಕಕ್ಕೆ ಸಿಗದೇ ನಾಪತ್ತೆಯಾಗಿದ್ದರು. ಇದೀಗ ಹೆಣ್ಣೂರು ಪೊಲೀಸರು ಮಾಲೀಕನನ್ನು ಪತ್ತೆ ಹಚ್ಚಿ, ಬಂಧಿಸಿದ್ದಾರೆ. ಕಳಪೆ ಕಾಮಗಾರಿಯಿಂದಲೇ ಕಟ್ಟಡ ಬುಡಮೇಲಾಗಿ ಉರುಳಿ ಬಿದ್ದಿರುವ ಶಂಕೆ ವ್ಯಕ್ತವಾಗಿದೆ.

Building collapsed in bengaluru
ಬೆಂಗಳೂರು: ನಿರ್ಮಾಣ ಹಂತದ ಕಟ್ಟಡ ಕುಸಿತ ಪ್ರಕರಣ; ಮತ್ತೊಬ್ಬ ಕಾರ್ಮಿಕನ ಶವಪತ್ತೆ; ಮೃತರ ಸಂಖ್ಯೆ ಐದಕ್ಕೆ ಏರಿಕೆ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com