ಬೆಂಗಳೂರು ನಿರ್ಮಾಣ ಹಂತದ ಕಟ್ಟಡ ಕುಸಿತ: ಸಾವಿನ ಸಂಖ್ಯೆ 8ಕ್ಕೆ ಏರಿಕೆ; ಮಾಲೀಕ, ಕಂಟ್ರಾಕ್ಟರ್ ಬಂಧನ!

ಈ ಕಟ್ಟಡಕ್ಕೆ 4 ಅಂತಸ್ತಿಗೆ ಮಾತ್ರ ಅಧಿಕಾರಿಗಳು ಪರವಾನಗಿ ನೀಡಿದ್ದರು. ಆದರೆ ಗುತ್ತಿಗೆದಾರ ಮುನಿಯಪ್ಪ ಏಳು ಮಹಡಿಗಳನ್ನು ನಿರ್ಮಾಣ ಮಾಡಿದ್ದ ಎಂದು ಅಧಿಕಾರಿ ತಿಳಿಸಿದರು.
Bengaluru building collapse
ಬೆಂಗಳೂರು ನಿರ್ಮಾಣ ಹಂತದ ಕಟ್ಟಡ ಕುಸಿತ
Updated on

ಬೆಂಗಳೂರು: ಬೆಂಗಳೂರಿನ ಬಾಬುಸಾಪಾಳ್ಯದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತಪಟ್ಟವರ ಸಂಖ್ಯೆ 8ಕ್ಕೆ ಏರಿಕೆಯಾಗಿದ್ದು, ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ವೇಳೆ ಮತ್ತೆ 8 ಮೃತದೇಹಗಳು ಪತ್ತೆಯಾಗಿವೆ.

ಇಂದಿನ ಕಾರ್ಯಾಚರಣೆಯಲ್ಲಿ ಮತ್ತೆ 7 ಮೃತದೇಹಗಳನ್ನು ರಕ್ಷಣಾ ಸಿಬ್ಬಂದಿ ಹೊರತೆಗೆದಿದ್ದು, ಆ ಮೂಲಕ ಸಾವಿನ ಸಂಖ್ಯೆ 8ಕ್ಕೆ ಏರಿಕೆಯಾಗಿದೆ. ಮೃತ ತ್ರಿಪಾಲ್‌ನ ಮೃತದೇಹವನ್ನು ಅವಶೇಷಗಳಿಂದ ಸಿಬ್ಬಂದಿಗಳು ಹೊರತೆಗೆದಿದ್ದಾರೆ.

ಪೊಲೀಸರ ಪ್ರಕಾರ, ಮೃತರಲ್ಲಿ ಐವರನ್ನು ಹರ್ಮನ್ (26), ತ್ರಿಪಾಲ್ (35), ಮೊಹಮ್ಮದ್ ಸಾಹಿಲ್ (19), ಸತ್ಯರಾಜು (25) ಮತ್ತು ಶಂಕರ್ ಎಂದು ಗುರುತಿಸಲಾಗಿದೆ. ಒಟ್ಟು 13 ಜನರನ್ನು ರಕ್ಷಿಸಲಾಗಿದ್ದು, ಆರು ಮಂದಿ ಬೆಂಗಳೂರು ಉತ್ತರ ಮತ್ತು ಹೊಸ್ಮಾಟ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮಂಗಳವಾರ ಮಧ್ಯಾಹ್ನ 3:40ರ ಸುಮಾರಿಗೆ ನಗರದಲ್ಲಿ ಸುರಿದ ಭಾರೀ ಮಳೆಯ ನಡುವೆಯೇ ಈ ಕಟ್ಟಡ ಕುಸಿತ ಸಂಭವಿಸಿತ್ತು. ದುರಂತ ನಡೆದ ಸಂದರ್ಭದಲ್ಲಿ ಬಿಹಾರ, ಆಂಧ್ರಪ್ರದೇಶದ ಚಿತ್ತೂರು ಮತ್ತು ಕರ್ನಾಟಕದ ಯಾದಗಿರಿಯ ಒಟ್ಟು 21 ಕಾರ್ಮಿಕರು ಇದ್ದರು ಎನ್ನಲಾಗಿದೆ. ಅವಶೇಷಗಳಡಿಯಲ್ಲಿ ಸಿಕ್ಕಿಬಿದ್ದಿರುವ ಕಾರ್ಮಿಕರನ್ನು ರಕ್ಷಿಸಲು ಎನ್‌ಡಿಆರ್‌ಎಫ್, ಎಸ್‌ಡಿಆರ್‌ಎಫ್, ಪೊಲೀಸ್ ಮತ್ತು ಅಗ್ನಿಶಾಮಕ ತುರ್ತು ಸೇವಾ ಸಿಬ್ಬಂದಿಗಳು ನಿರಂತರ ಕಾರ್ಯಾಚರಣೆ ನಡೆಸಿದ್ದಾರೆ.

ಇಬ್ಬರ ಬಂಧನ

ಇನ್ನು ಕಟ್ಟಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರ ಪೈಕಿ ಕಟ್ಟಡದ ಮಾಲೀಕ ಮತ್ತು ಕಟ್ಟಡ ನಿರ್ಮಾಣದ ಉಸ್ತುವಾರಿ ಕಂಟ್ರಾಕ್ಟರ್ ಸೇರಿದ್ದಾರೆ ಎನ್ನಲಾಗಿದೆ. ಬಿಎನ್‌ಎಸ್, ಬಿಬಿಎಂಪಿ ಆರ್‌ಇಆರ್‌ಎ ಆ್ಯಕ್ಟ್ ಅಡಿಯಲ್ಲಿ ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದ್ದು, ಕಾರ್ಮಿಕ ಮೊಹಮ್ಮದ್ ಹರ್ಷದ್ ನೀಡಿರೋ ದೂರಿನ ಮೇಲೆ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.

ಬಂಧಿತರನ್ನು ಕಟ್ಟಡದ ಮಾಲೀಕ ಭುವನ್ ರೆಡ್ಡಿ ಹಾಗೂ ಕಾಂಟ್ರಾಕ್ಟರ್ ಮುನಿಯಪ್ಪ ಎಂದು ಗುರುತಿಸಲಾಗಿದೆ. ಈ ನಿರ್ಮಾಣ ಹಂತದ ಕಟ್ಟಡ ಭುವನ್ ರೆಡ್ಡಿ ಹೆಸರಿನಲ್ಲಿದ್ದು, ಈತ ಪ್ರಕರಣದ ಮೊದಲನೇ ಆರೋಪಿ ಮುನಿರಾಜ ರೆಡ್ಡಿಯ ಮಗ ಎನ್ನಲಾಗಿದೆ.

ಆರೋಪಿಗಳ ವಿರುದ್ಧ ಬಿಎನ್‌ಎಸ್ (BNS), ಬಿಬಿಎಂಪಿ(BBMP) ಆರ್‌ಇಆರ್‌ಎ (RERA) ಆ್ಯಕ್ಟ್ ಹಾಗೂ ರೇರಾ ಕಾಯ್ದೆಯಡಿ ಎಫ್‌ಐಆರ್ ದಾಖಲಿಸಲಾಗಿದೆ. ಬಿಎನ್ ಎಸ್ 105, 125(A) 125(B), 270,3(5) ಬಿಬಿಎಂಪಿ ಆ್ಯಕ್ಟ್ 326, 327,328 RERA (u/s3) ಅಡ್ಡಿಯಲ್ಲಿ ಇಬ್ಬರೂ ಆರೋಪಿಗಳನ್ನು ಬಂಧಿಸಿದ್ದಾರೆ.

Bengaluru building collapse
ಅಕ್ರಮ ಕಟ್ಟಡ ನಿರ್ಮಾಣದ ವಿರುದ್ಧ ಕಠಿಣ ಕ್ರಮ: ಡಿಸಿಎಂ ಡಿ.ಕೆ ಶಿವಕುಮಾರ್

4 ಅಂತಸ್ತಿಗೆ ಮಾತ್ರ ಪರವಾನಗಿ

ಇನ್ನು ಈ ಕಟ್ಟಡಕ್ಕೆ 4 ಅಂತಸ್ತಿಗೆ ಮಾತ್ರ ಅಧಿಕಾರಿಗಳು ಪರವಾನಗಿ ನೀಡಿದ್ದರು. ಆದರೆ ಗುತ್ತಿಗೆದಾರ ಮುನಿಯಪ್ಪ ಏಳು ಮಹಡಿಗಳನ್ನು ನಿರ್ಮಾಣ ಮಾಡಿದ್ದ ಎಂದು ಅಧಿಕಾರಿ ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com