ಚಾಮರಾಜನಗರ: ಭಾರೀ ಮಳೆಗೆ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ವೇಳೆ ರಸ್ತೆ ಬದಿಯಲ್ಲಿ ಜೋತುಕೊಂಡಿದ್ದ ವಿದ್ಯುತ್ ತಂತಿ ತಗುಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ.
ಮೃತಪಟ್ಟವರನ್ನು ತಾಲೂಕಿನ ಅಯ್ಯನಪುರ ಗ್ರಾಮದ ನಿವಾಸಿಗಳಾದ ನಾಗೇಂದ್ರ (48 ವ) ಮತ್ತು ಮಲ್ಲೇಶ್ (40 ವ) ಎಂದು ಗುರುತಿಸಲಾಗಿದೆ.
ನಿನ್ನೆ ರಾತ್ರಿ ದ್ವಿಚಕ್ರ ವಾಹನದಲ್ಲಿ ಅಯ್ಯನಪುರ-ಹಿತ್ತಲಗುಡ್ಡೆ ರಸ್ತೆಯಲ್ಲಿ ತೆರಳುತ್ತಿದ್ದಾಗ, ವಿದ್ಯುತ್ ಕಂಬದ ಕೆಳಭಾಗದಲ್ಲಿ ಜೋತುಕೊಂಡಿದ್ದ ತಂತಿ ತಗುಲಿ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟಿರುತ್ತಾರೆ.
ಸ್ಥಳಕ್ಕೆ ಪೂರ್ವ ಪೊಲೀಸ್ ಠಾಣೆ ಪೊಲೀಸರು ಭೇಟಿ ನೀಡಿದ್ದು, ಈವರೆಗೆ ಯಾವುದೇ ಪ್ರಕರಣ ದಾಖಲಾಗಿರುವುದಿಲ್ಲ. ಆದರೇ ಚೆಸ್ಕಾಂ ವತಿಯಿಂದ ಸೂಕ್ತ ಪರಿಹಾರ ನೀಡುವಂತೆ ಆಗ್ರಹಿಸಿ ಮೃತರ ಸಂಬಂಧಿಕರು ಪ್ರತಿಭಟನೆ ನಡೆಸುವ ಸಾಧ್ಯತೆ ಇದೆ ಎಂದು ಸ್ಥಳೀಯರೊಬ್ಬರು ಮಾಹಿತಿ ನೀಡಿದರು.
Advertisement