ಕರ್ನಾಟಕದ ಬೀಚ್ ಗಳಲ್ಲಿ ಟೆಂಟ್, ಮದ್ಯಪಾನ-ಪಾರ್ಟಿಗೆ ಅವಕಾಶ: ಶೀಘ್ರದಲ್ಲೇ ತೀರ್ಮಾನ

ಗೋವಾ ಮಾದರಿಯಲ್ಲಿ ಪ್ರವಾಸಿಗರನ್ನು ಆಕರ್ಷಿಸಲು ನಾವು ಬೀಚ್‌ಗಳಲ್ಲಿ ಕೆಲವು ಬದಲಾವಣೆಗಳನ್ನು ಮಾಡಬೇಕಾಗಿದೆ, ಬೀಚ್​ ಗಳಲ್ಲಿ ಮದ್ಯ ಬಳಕೆಯ ಮೇಲೆ ಇರುವ ನಿರ್ಬಂಧಗಳನ್ನು ಸಡಿಲಿಸುವ ಅಗತ್ಯವಿದೆ ಎಂದರು.
Image of Kapu beach in Udupi district used for representative purposes
ಉಡುಪಿ ಜಿಲ್ಲೆಯ ಕಾಪು ಬೀಚ್‌ನ ಚಿತ್ರ (ಪ್ರಾತಿನಿಧಿಕ ಉದ್ದೇಶಗಳಿಗಾಗಿ ಬಳಸಲಾಗಿದೆ)Photo | Wikimedia Commons
Updated on

ಮಂಗಳೂರು: ರಾಜ್ಯದಲ್ಲಿ ಪ್ರವಾಸೋದ್ಯಮವನ್ನು ಉತ್ತೇಜಿಸಲು ಗೋವಾದ ಮಾದರಿಯಲ್ಲಿ ರಾಜ್ಯದ ಬೀಚ್‌ಗಳಲ್ಲಿ ಟೆಂಟ್ ಹಾಕುವುದು ಮತ್ತು ಮದ್ಯ ಮಾರಾಟ, ಮದ್ಯಪಾನಕ್ಕೆ ಅನುಮತಿ ನೀಡುವ ಪ್ರಸ್ತಾವನೆಯನ್ನು ಪರಿಶೀಲಿಸಲಾಗುತ್ತಿದೆ ಎಂದು ಪ್ರವಾಸೋದ್ಯಮ ಇಲಾಖೆ ತಿಳಿಸಿದೆ.

ಮಂಗಳೂರಿನಲ್ಲಿ ನಡೆದ ‘ಕನೆಕ್ಟ್ 2024’ನಲ್ಲಿ ಮಾತನಾಡಿದ ಪ್ರವಾಸೋದ್ಯಮ ಇಲಾಖೆಯ ನಿರ್ದೇಶಕ ರಾಜೇಂದ್ರ ಕೆವಿ, ಗೋವಾ ಮಾದರಿಯಲ್ಲಿ ಪ್ರವಾಸಿಗರನ್ನು ಆಕರ್ಷಿಸಲು ನಾವು ಬೀಚ್‌ಗಳಲ್ಲಿ ಕೆಲವು ಬದಲಾವಣೆಗಳನ್ನು ಮಾಡಬೇಕಾಗಿದೆ, ಬೀಚ್​ ಗಳಲ್ಲಿ ಮದ್ಯ ಬಳಕೆಯ ಮೇಲೆ ಇರುವ ನಿರ್ಬಂಧಗಳನ್ನು ಸಡಿಲಿಸುವ ಅಗತ್ಯವಿದೆ ಎಂದರು. ಬೀಚ್​ ಗಳಲ್ಲಿ ಸುರಕ್ಷತೆಯನ್ನು ಹೆಚ್ಚಿಸಲು, ಜನರು ರಾತ್ರಿಯಲ್ಲಿ ಹೆಚ್ಚು ಸಮಯ ಕಳೆಯುವಂತೆ ಮಾಡಲು ಕಡಲತೀರಗಳಲ್ಲಿ ಹೆಚ್ಚಿನ ಲೈಟ್​ ಗಳನ್ನು ಅಳವಡಿಸಲು ಇಲಾಖೆ ಚಿಂತನೆ ನಡೆಸಿದೆ. ರಾಜ್ಯದಲ್ಲಿ ಟೆಂಟ್ ಪ್ರವಾಸೋದ್ಯಮವನ್ನು ಉತ್ತೇಜಿಸಲು ಕಡಲತೀರಗಳ ಬಳಿ ಸರ್ಕಾರಿ ಮತ್ತು ಖಾಸಗಿ ಜಮೀನುಗಳನ್ನು ಹುಡುಕುವಂತೆ ಜಿಲ್ಲಾ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಅವರು ಹೇಳಿದರು.

ತಡರಾತ್ರಿಯವರೆಗೂ ಬೀಚ್‌ಗಳಿಗೆ ಭೇಟಿ ನೀಡಲು ಪ್ರವಾಸಿಗರಿಗೆ ಅವಕಾಶ ನೀಡುವಂತೆ ಮನವಿ ಮಾಡಿದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಮಂಗಳೂರು ನಗರದಲ್ಲಿರುವ ರೆಸ್ಟೋರೆಂಟ್‌ಗಳು ಮತ್ತು ಇತರ ಪರವಾನಗಿ ಪಡೆದ ವ್ಯಾಪಾರ ಸಂಸ್ಥೆಗಳ ವ್ಯವಹಾರದ ಸಮಯವನ್ನು ರಾತ್ರಿ 1 ಗಂಟೆಯ ವರೆಗೆ ವಿಸ್ತರಿಸಲಾಗಿದೆ. ಹೀಗಾಗಿ ನಗರ ವ್ಯಾಪ್ತಿಯ ಬೀಚ್‌ಗಳಲ್ಲಿ ತಡರಾತ್ರಿ ವರೆಗೆ ಇರಲು ಅವಕಾಶ ಒದಗಿಸಬೇಕಾಗಿದೆ ಎಂದರು. ಪ್ರವಾಸೋದ್ಯಮ ಯೋಜನೆಗಳಿಗೆ ಸಿಆರ್‌ಝಡ್ ಮತ್ತು ಇತರ ಅನುಮತಿಗಳನ್ನು ಶೀಘ್ರವಾಗಿ ಮಾಡಲ ಪ್ರವಾಸೋದ್ಯಮ ಇಲಾಖೆ ಶೀಘ್ರದಲ್ಲೇ ಸೌಲಭ್ಯ ಕೇಂದ್ರವನ್ನು ತೆರೆಯಲಿದೆ ಎಂದು ಅವರು ಮಾಹಿತಿ ನೀಡಿದ್ದಾರೆ. ಹೊಸ ಪ್ರವಾಸೋದ್ಯಮ ನೀತಿಯು ಕರಾವಳಿ ಪ್ರವಾಸೋದ್ಯಮಕ್ಕೆ ಪ್ರತ್ಯೇಕ ಮಾರ್ಗಸೂಚಿಯನ್ನು ಹೊಂದಿರಲಿದೆ ಎಂದು ಅವರು ತಿಳಿಸಿದ್ದಾರೆ. ಪ್ರವಾಸೋದ್ಯಮ ಅಭಿವೃದ್ಧಿ ಪ್ರಯತ್ನಗಳ ಭಾಗವಾಗಿ ಬಟಪಾಡಿ ಬೀಚ್‌ನಿಂದ ಸಸಿಹಿತ್ಲು ಬೀಚ್‌ವರೆಗಿನ ಕರಾವಳಿ ಪ್ರದೇಶವನ್ನು ಅಭಿವೃದ್ದಿಗೆ ನಕ್ಷೆ ಸಿದ್ದಪಡಿಸಲು ದಕ್ಷಿಣ ಕನ್ನಡ ಜಿಲ್ಲಾಡಳಿತಕ್ಕೆ ನಿರ್ದೇಶನ ನೀಡಿದರು.

Image of Kapu beach in Udupi district used for representative purposes
ಮಂಗಳೂರು: ರೈಲು ಹಳಿ ಮೇಲೆ ಕಲ್ಲು ಬಿದ್ದು ಆತಂಕ ಸೃಷ್ಟಿ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com