ಕಾಂಗ್ರೆಸ್ ಭ್ರಷ್ಟರೆಲ್ಲರೂ ಸತೀಶ್ ಸೈಲ್ ಹಾದಿ ಹಿಡಿಯಬೇಕಾದ ಸ್ಥಿತಿ ಬರಲಿದೆ: ವಿಜಯೇಂದ್ರ

ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ತಪ್ಪಿತಸ್ಥರೆಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನೀಡಿರುವ ತೀರ್ಪು ಈ ನೆಲದ ಕಾನೂನು ಅದೆಷ್ಟು ಗಟ್ಟಿಯಾಗಿದೆ ಎನ್ನುವುದನ್ನು ನಿರೂಪಿಸಿದೆ.
BJP state president vijayendra
ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ
Updated on

ಬೆಂಗಳೂರು: ಅಕ್ರಮವಾಗಿ ಅದಿರು ಸಾಗಾಟ ಮಾಡಿದ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ತಪ್ಪಿತಸ್ಥ ಎಂದು ಜನಪ್ರತಿನಿಧಿಗಳ ವಿಶೇಷ ಕೋರ್ಟ್ ತೀರ್ಪಿತ್ತ ಬೆನ್ನಲ್ಲೇ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ‘ಕೈ’ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಸಾಮಾಜಿಕ ಮಾಧ್ಯಮ ಎಕ್ಸ್​​ ನಲ್ಲಿ ಬರೆದಕೊಂಡಿರುವ ಅವರು, ಸತೀಶ್ ಸೈಲ್ ವಿರುದ್ಧದ ತೀರ್ಪು ಕಾಂಗ್ರೆಸ್ ಸರ್ಕಾರದ ಭ್ರಷ್ಟರೆಲ್ಲರೂ ಅವರ ಹಾದಿಯನ್ನು ಹಿಂಬಾಲಿಸಬೇಕಾದ ಸ್ಥಿತಿ ಎದುರಾಗಲಿದೆ ಎಂಬುದರ ಸ್ಪಷ್ಟ ಸೂಚನೆಯಾಗಿದೆ ಎಂದಿದ್ದಾರೆ. ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ತಪ್ಪಿತಸ್ಥರೆಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನೀಡಿರುವ ತೀರ್ಪು ಈ ನೆಲದ ಕಾನೂನು ಅದೆಷ್ಟು ಗಟ್ಟಿಯಾಗಿದೆ ಎನ್ನುವುದನ್ನು ನಿರೂಪಿಸಿದೆ. ಈ ತೀರ್ಪು ಮುಡಾ, ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಗಳಂತಹ ಲೂಟಿಕೋರತನ ಹಾಗೂ ಭ್ರಷ್ಟತೆಯ ಆರೋಪ ಎದುರಿಸುತ್ತಿರುವವರ ಮುಖಕ್ಕೆ ಹಿಡಿದ ಕನ್ನಡಿಯಾಗಿದೆ.

ಅಕ್ರಮ ಅದಿರು ಸಾಗಣೆ ಮಾಡಿ ರಾಜ್ಯದ ಬೊಕ್ಕಸಕ್ಕೆ ₹200 ಕೋಟಿಗೂ ಹೆಚ್ಚಿನ ನಷ್ಟ ಉಂಟು ಮಾಡಿದ ಆರು ಕ್ರಿಮಿನಲ್ ಆರೋಪಗಳಲ್ಲಿ ದೋಷಿಯಾಗಿ ಜೈಲು ಸೇರಿರುವ ಸತೀಶ್ ಸೈಲ್ ಅವರ ವಿರುದ್ಧ ಬಂದಿರುವ ತೀರ್ಪು ಬ್ರಹ್ಮಾಂಡ ಭ್ರಷ್ಟಾಚಾರದಲ್ಲಿ ಆರೋಪಿತರಾಗಿರುವ ಕಾಂಗ್ರೆಸ್ ಸರ್ಕಾರದ ಭ್ರಷ್ಟರೆಲ್ಲರೂ ಸತೀಶ್ ಸೈಲ್ ರವರ ಹಾದಿಯನ್ನು ಹಿಂಬಾಲಿಸಬೇಕಾದ ಸ್ಥಿತಿ ಎದುರಾಗಲಿದೆ ಎಂಬುದರ ಸ್ಪಷ್ಟ ಸೂಚನೆಯಾಗಿದೆ. ಮುಡಾ ಹಗರಣದ ಕುರಿತು ರಾಜ್ಯಪಾಲರು ನೀಡಿದ ಪ್ರಾಸಿಕ್ಯೂಷನ್ ಅನುಮತಿಯನ್ನು ಎತ್ತಿ ಹಿಡಿದಿರುವ ಉಚ್ಛ ನ್ಯಾಯಾಲಯದ ಸುದೀರ್ಘ ತೀರ್ಪಿನಲ್ಲಿ ಹಗರಣದ ಕುರಿತಾದ ಉಲ್ಲೇಖಗಳು ಸ್ಪಷ್ಟವಾಗಿ ನಮೂದಾಗಿವೆ. ಈ ನಿಟ್ಟಿನಲ್ಲಿ ಇಡಿ ಹಾಗೂ ಲೋಕಾಯುಕ್ತದಲ್ಲಿ ತನಿಖೆಯೂ ಸಾಗಿದೆ, ಹೀಗಾಗಿಯೂ ಭಂಡತನ ಮೆರೆದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಾಸಕ ಸತೀಶ್ ಸೈಲ್ ವಿರುದ್ಧದ ತೀರ್ಪಿನಿಂದಾದರೂ ಎಚ್ಚೆತ್ತುಕೊಂಡು ನೈತಿಕತೆ ಮೆರೆದರೆ ಭವಿಷ್ಯತ್ತಿನಲ್ಲಿ ಅವರು ಕಿಂಚಿತ್ತಾದರೂ ಗೌರವ ಉಳಿಸಿಕೊಳ್ಳಬಹುದು, ಇಲ್ಲದಿದ್ದರೆ ನ್ಯಾಯಾಲಯವೇ ಅವರಿಗೆ ಹಾದಿ ತೋರುವ ಪರಿಸ್ಥಿತಿ ಉದ್ಭವಿಸುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂಬುದು ಸತೀಶ್ ಸೈಲ್ ಪ್ರಕರಣದ ತೀರ್ಪು ತಿಳಿಸಿಕೊಟ್ಟಿದೆ ಎಂದ ಟಾಂಗ್ ನೀಡಿದ್ದಾರೆ.

BJP state president vijayendra
ಬೇಲೇಕೇರಿ ಅದಿರು ನಾಪತ್ತೆ ಪ್ರಕರಣ: ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ದೋಷಿ!

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com