ನಿಖಿಲ್ ಕುಮಾರಸ್ವಾಮಿ ಆಸ್ತಿ ವಿವರ ಬಹಿರಂಗ: NDA ಅಭ್ಯರ್ಥಿ ಶತಕೋಟಿ ಒಡೆಯ!

ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಪುತ್ರ ನಿಖಿಲ್‌ ಕುಮಾರಸ್ವಾಮಿ ಒಟ್ಟು 113 ಕೋಟಿ ಆಸ್ತಿ ಒಡೆಯರಾಗಿದ್ದಾರೆ. ನಿಖಿಲ್ ಬಳಿ ಒಟ್ಟು 78.15 ಕೋಟಿ ಮೌಲ್ಯದ ಚರಾಸ್ತಿ ಇದ್ದು, 29.34 ಕೋಟಿ ಮೌಲ್ಯದ ಸ್ಥಿರಾಸ್ತಿಯನ್ನು ಹೊಂದಿದ್ದಾರೆ.
ನಿಖಿಲ್ ಕುಮಾರಸ್ವಾಮಿ
ನಿಖಿಲ್ ಕುಮಾರಸ್ವಾಮಿ
Updated on

ಬೆಂಗಳೂರು: ಚನ್ನಪಟ್ಟಣ ಉಪಚುನಾವಣೆ ಕಾವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಎನ್ ಡಿಎ ಅಭ್ಯರ್ಥಿಯಾಗಿ ಘೋಷಣೆಯಾದ ಬೆನ್ನಲ್ಲೇ ಇಂದು ನಿಖಿಲ್‌ ಕುಮಾರಸ್ವಾಮಿ ಉಮೇದುವಾರಿಕೆ ಸಲ್ಲಿಸಿದರು. ಅಲ್ಲದೆ ಇದೀಗ ಅವರ ಒಟ್ಟು ಆಸ್ತಿ ಎಷ್ಟೆಂಬುದು ಬಹಿರಂಗಗೊಂಡಿದೆ.

ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಪುತ್ರ ನಿಖಿಲ್‌ ಕುಮಾರಸ್ವಾಮಿ ಒಟ್ಟು 113 ಕೋಟಿ ಆಸ್ತಿ ಒಡೆಯರಾಗಿದ್ದಾರೆ. ನಿಖಿಲ್ ಬಳಿ ಒಟ್ಟು 78.15 ಕೋಟಿ ಮೌಲ್ಯದ ಚರಾಸ್ತಿ ಇದ್ದು, 29.34 ಕೋಟಿ ಮೌಲ್ಯದ ಸ್ಥಿರಾಸ್ತಿಯನ್ನು ಹೊಂದಿದ್ದಾರೆ. ಇನ್ನು ಪತ್ನಿ ರೇವತಿ ನಿಖಿಲ್ ಹೆಸರಲ್ಲಿ 5.49 ಕೋಟಿ ಮೌಲ್ಯದ ಚರಾಸ್ತಿ, 43 ಲಕ್ಷ ಮೌಲ್ಯದ ಸ್ಥಿರಾಸ್ತಿ ಹೊಂದಿದ್ದಾರೆ.

ನಿಖಿಲ್‌‌ ಕುಮಾರಸ್ವಾಮಿ ಮಗ ಆವ್ಯಾನ್ ದೇವ್ ಹೆಸರಲ್ಲಿ 11 ಲಕ್ಷ ಮೌಲ್ಯದಷ್ಟು ಹಣ ಹೊಂದಿದ್ದಾರೆ ಎಂದು ಘೋಷಣೆ ಮಾಡಿದ್ದಾರೆ. ಇಷ್ಟೇ ಅಲ್ಲದೇ ನಿಖಿಲ್‌ ಕುಮಾರಸ್ವಾಮಿ ಹೆಸರಲ್ಲಿ 1.488 ಕೆಜಿ ಚಿನ್ನ, 16 ಕೆಜಿ ಬೆಳ್ಳಿ ಹೊಂದಿದ್ದಾರೆ. ನಿಖಿಲ್‌‌ ಪತ್ನಿ ರೇವತಿ ಹೆಸರಲ್ಲಿ 1.411 ಕೆಜಿ ಚಿನ್ನ, 33.05 ಕೆಜಿ ಬೆಳ್ಳಿ, 13 ಕ್ಯಾರೆಟ್ ಡೈಮಂಡ್ ಹೊಂದಿದ್ದಾರೆ.

ನಿಖಿಲ್ ಕುಮಾರಸ್ವಾಮಿ
ಉಪ ಚುನಾವಣೆ: ಚನ್ನಪಟ್ಟಣದಲ್ಲಿ ನಿಖಿಲ್ ಕುಮಾರಸ್ವಾಮಿ, ಸಂಡೂರಿನಲ್ಲಿ ಬಂಗಾರು ಹನುಮಂತು NDA ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ

ನಿಖಿಲ್ ಹೆಸರಲ್ಲಿ ಒಂದು ಇನ್ನೋವ ಐ ಕ್ರಾಸ್ ಕಾರು, ಒಂದು ರೇಂಜ್ ರೋವರ್ ಹಾಗೂ ಎರಡು ಕ್ಯಾರಾವ್ಯಾನ್, ಒಂದು ಇನ್ನೋವಾ ಕ್ರಿಸ್ಟ ಕಾರು ಇದೆ. ನಿಖಿಲ್ ಹೆಸರಲ್ಲಿ ಒಟ್ಟು 70. 44 ಕೋಟಿ ಸಾಲ ಇದೆ. ಪತ್ನಿ ರೇವತಿ ಹೆಸರಲ್ಲಿ 4 ಕೋಟಿ 96 ಲಕ್ಷ ಸಾಲ ಇದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com