ಕೊಪ್ಪಳ: ಮರಕುಂಬಿ ದಲಿತರ ಮೇಲೆ ದೌರ್ಜನ್ಯ ಪ್ರಕರಣ; 98 ಜನರಿಗೆ ಜೀವಾವಧಿ ಶಿಕ್ಷೆ

98 ಆರೋಪಿಗಳಿಗೆ ಏಕಕಾಲಕ್ಕೆ ಜೀವಾವಧಿ ಶಿಕ್ಷೆ ವಿಧಿಸಲಾಗಿರುವುದರಿಂದ ಈ ತೀರ್ಪು ಅಪರೂಪದ ಪ್ರಕರಣವಾಗಿದೆ. ಹಲವು ಸಂತ್ರಸ್ತರ ಕುಟುಂಬ ಸದಸ್ಯರು ಕಳೆದ ಹತ್ತು ವರ್ಷಗಳಿಂದ ಈ ತೀರ್ಪಿಗಾಗಿ ಕಾಯುತ್ತಿದ್ದರು.
Representational image
ಸಾಂದರ್ಭಿಕ ಚಿತ್ರ
Updated on

ಕೊಪ್ಪಳ: ಕೊಪ್ಪಳ ಜಿಲ್ಲೆಯ ಗಂಗಾವತಿಯ ಮರುಕುಂಬಿ ದಲಿತ ದೌರ್ಜನ್ಯ ಪ್ರಕರಣದ 98 ಆರೋಪಿಗಳಿಗೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಗುರುವಾರ ಜೀವಾವಧಿ ಶಿಕ್ಷೆ ವಿಧಿಸಿದೆ. ಎಸ್‌ಸಿ ಮತ್ತು ಎಸ್‌ಟಿ ಸಮುದಾಯಕ್ಕೆ ಸೇರಿದ ಮೂವರು ಆರೋಪಿಗಳಿಗೆ ಐದು ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ.

98 ಆರೋಪಿಗಳಿಗೆ ಏಕಕಾಲಕ್ಕೆ ಜೀವಾವಧಿ ಶಿಕ್ಷೆ ವಿಧಿಸಲಾಗಿರುವುದರಿಂದ ಈ ತೀರ್ಪು ಅಪರೂಪದ ಪ್ರಕರಣವಾಗಿದೆ. ಹಲವು ಸಂತ್ರಸ್ತರ ಕುಟುಂಬ ಸದಸ್ಯರು ಕಳೆದ ಹತ್ತು ವರ್ಷಗಳಿಂದ ಈ ತೀರ್ಪಿಗಾಗಿ ಕಾಯುತ್ತಿದ್ದರು. ಸೋಮವಾರ ಒಟ್ಟು 101 ಆರೋಪಿಗಳನ್ನು ಬಂಧಿಸಲಾಗಿದ್ದು, ತೀರ್ಪನ್ನು ಅಕ್ಟೋಬರ್ 24ಕ್ಕೆ ಕಾಯ್ದಿರಿಸಲಾಗಿತ್ತು. 117 ಜನರ ವಿರುದ್ಧ ಪ್ರಕರಣ ದಾಖಲಿಸಲಾಗಿದ್ದು, 101 ಮಂದಿಗೆ ಶಿಕ್ಷೆ ವಿಧಿಸಲಾಗಿದ್ದು, 16 ಆರೋಪಿಗಳು ಮೃತಪಟ್ಟಿದ್ದಾರೆ ಎಂದು ಪಬ್ಲಿಕ್ ಪ್ರಾಸಿಕ್ಯೂಟರ್ ತಿಳಿಸಿದ್ದಾರೆ.

ಇನ್ನುಳಿದಂತೆ ಮೂವರು ಅಪರಾಧಿಗಳು ಎಸ್ಸಿ ಎಸ್ಟಿ ಸಮುದಾಯಕ್ಕೆ ಸೇರಿದ್ದರಿಂದ ಅವರಿಗೆ ಅಟ್ರಾಸಿಟಿ ಕಾಯ್ದೆ ಅನ್ವಯವಾಗಿಲ್ಲ. ಹೀಗಾಗಿ ಅವರಿಗೆ ಕೊಲೆ ಯತ್ನ, ದೊಂಬಿ ಸೇರಿದಂತೆ ಇನ್ನಿತರ ಸೆಕ್ಷನ್‌ನಲ್ಲಿ ​ಐದು ವರ್ಷ ಶಿಕ್ಷೆ ವಿಧಿಸಿದೆ. ನ್ಯಾಯಾಲಯದ ತೀರ್ಪು ಪ್ರಕಟವಾದಾಗ, 98 ಅಪರಾಧಿಗಳ ಸಂಬಂಧಿಕರು ಮತ್ತು ಕುಟುಂಬ ಸದಸ್ಯರು ದುಃಖದಲ್ಲಿ ಅಳತೊಡಗಿದರು, ಆದರೆ ಸಂತ್ರಸ್ತರ ಕುಟುಂಬ ಸದಸ್ಯರು ನೆಮ್ಮದಿಯ ನಿಟ್ಟುಸಿರು ಬಿಟ್ಟರು.

Representational image
ಕೊಪ್ಪಳ: ಮರುಕುಂಬಿ ಗ್ರಾಮದಲ್ಲಿ ದಲಿತರ ಗುಡಿಸಲು ಸುಟ್ಟ ಪ್ರಕರಣ; 101 ಆರೋಪಿಗಳಿಗೆ ಅಕ್ಟೋಬರ್ 24 ರಂದು ಶಿಕ್ಷೆ ಪ್ರಕಟ

ಮರುಕುಂಬಿ ಪ್ರಕರಣದ 98 ಆರೋಪಿಗಳಿಗೆ ನ್ಯಾಯಾಲಯ ಜೀವಾವಧಿ ಶಿಕ್ಷೆ ಪ್ರಕಟಿಸಿರುವುದು ಸಂತಸ ತಂದಿದೆ ಎಂದು ಕೊಪ್ಪಳದ ಮಂಜುನಾಥ್ ಕೆ, ರಮೇಶ್ ಕೋಳೂರು ಮತ್ತಿತರ ದಲಿತ ಮುಖಂಡರು ತಿಳಿಸಿದ್ದಾರೆ. “ನಾವು ಹತ್ತು ವರ್ಷಗಳಿಂದ ಈ ತೀರ್ಪಿಗಾಗಿ ಕಾಯುತ್ತಿದ್ದೆವು. ಘಟನೆಯ ನಂತರ ಹಲವು ದಲಿತ ಮುಖಂಡರು ಕುಟುಂಬಗಳಿಗೆ ಬೆಂಬಲ ನೀಡಿದ್ದು, ಸಂತ್ರಸ್ತರ ಕುಟುಂಬದ ಸದಸ್ಯರೂ ಈತೀರ್ಪಿನಿಂದ ಸಂತಸಗೊಂಡಿದ್ದಾರೆ ಎಂದು ಅವರು ಹೇಳಿದ್ದಾರೆ.

ಆಗಸ್ಟ್ 28, 2014 ರಂದು ಗಂಗಾವತಿ ನಗರದಲ್ಲಿರುವ ಶಿವ ಚಿತ್ರಮಂದಿರದಲ್ಲಿ ಇದೇ ಮರಕುಂಬಿ ಗ್ರಾಮದ ದಲಿತ ಸಮುದಾಯದ ಮಂಜುನಾಥ ಮತ್ತು ಸ್ನೇಹಿತರು ಸಿನಿಮಾ ನೋಡಲು ಹೋಗಿದ್ದರು. ಈ ಸಮಯದಲ್ಲಿ ಟಿಕೆಟ್ ಪಡೆಯೋ ವಿಚಾರದಲ್ಲಿ ಸವರ್ಣೀಯರು ಜಗಳ ಆರಂಭಿಸಿದ್ದರು. ಅಂದು ಸಂಜೆ ಗ್ರಾಮದ ಸವರ್ಣೀಯರು ಇದೇ ವಿಚಾರದ ನೆಪದ ಮೇಲೆ ದಲಿತರ ಮನೆಗಳಿಗೆ ನುಗ್ಗಿ ಅವರ ಗುಡಿಸಲುಗಳಿಗೆ ಬೆಂಕಿ ಹಚ್ಚಿದ್ದರು. 2014ರಲ್ಲಿ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಮರುಕುಂಬಿ ಗ್ರಾಮದಲ್ಲಿ ದಲಿತರ ಗುಡಿಸಲುಗಳಿಗೆ ಇತರ ಸಮುದಾಯದ ಕೆಲವರು ಬೆಂಕಿ ಹಚ್ಚಿದ್ದರು.ಅನೇಕ ದಲಿತ ಮುಖಂಡರು ಕೊಪ್ಪಳ ಜಿಲ್ಲೆಯಿಂದ ಬೆಂಗಳೂರಿಗೆ ಪಾದಯಾತ್ರೆ ನಡೆಸಿದರು.

2014 ರಲ್ಲಿ, ಮರುಕುಂಬಿ ಗ್ರಾಮದ ದಲಿತ ನಿವಾಸಿಗಳ ಪ್ರದೇಶಕ್ಕೆ ನೂರಾರು ಜನರು ನುಗ್ಗಿ ಅವರ ಮೇಲೆ ಹಲ್ಲೆ ನಡೆಸಿದರು, ಘರ್ಷಣೆ ಭುಗಿಲೆದ್ದಿತು ಮತ್ತು ದಲಿತರಿಗೆ ಬೆಂಕಿ ಹಚ್ಚಲಾಯಿತು. ಗ್ರಾಮದ ಕ್ಷೌರಿಕ ಅಂಗಡಿ ಮತ್ತು ಹೋಟೆಲ್‌ಗಳಿಗೆ ದಲಿತರಿಗೆ ಪ್ರವೇಶ ನಿರಾಕರಿಸಿದ್ದೇ ಘರ್ಷಣೆಗೆ ಕಾರಣ ಎನ್ನಲಾಗಿದೆ. ಮೂರು ತಿಂಗಳಿನಿಂದ ಮರುಕುಂಬಿ ಗ್ರಾಮದಲ್ಲಿ ಪೊಲೀಸರು ಬಿಗಿ ಬಂದೋಬಸ್ತ್ ಏರ್ಪಡಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com