Video: ಬೆಳಗಾವಿ ಮಕ್ಕಳ ಅಪಹರಣ ಪ್ರಕರಣ ಸುಖಾಂತ್ಯ: CCTV ನೆರವಿನಿಂದ ದುಷ್ಕರ್ಮಿಗಳ ಸೆರೆ

ಅಥಣಿ ಪಟ್ಟಣದ ಹುಲಗಬಾಳ ರಸ್ತೆಯ ಸ್ವಾಮಿ ಪ್ಲಾಟದ ಬಡಾವಣೆಯ ವಿಜಯ್ ದೇಸಾಯಿ ಎಂಬುವರ ಮನೆಗೆ ಹೊಕ್ಕು ಅವರ ಇಬ್ಬರು ಮಕ್ಕಳಾದ ಸ್ವಸ್ತಿ ವಿಜಯ್ ದೇಸಾಯಿ (4) ಮತ್ತು ವಿಯೋಮ್ ವಿಜಯ ದೇಸಾಯಿ (3) ದುಷ್ಕರ್ಮಿಗಳು ಅಪಹರಿಸಿದ್ದರು.
Two children kidnapped Belagavi district
ಮಕ್ಕಳ ಅಪಹರಣ ಮಾಡಿದ್ದ ಕಳ್ಳರ ಬಂಧನ
Updated on

ಬೆಳಗಾವಿ: ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದಲ್ಲಿ ಉದ್ಯಮಿಯೊಬ್ಬರ ಇಬ್ಬರು ಮಕ್ಕಳನ್ನು ದುಷ್ಕರ್ಮಿಗಳು ಅವರ ನಿವಾಸದಿಂದಲೇ ಅಪಹರಿಸಿದ್ದ ಪ್ರಕರಣ ಇದೀಗ ಸುಖಾಂತ್ಯವಾಗಿದೆ.

ನಿನ್ನೆ ಗುರುವಾರ ದಿನದಂದು ಅಥಣಿ ಪಟ್ಟಣದ ಹುಲಗಬಾಳ ರಸ್ತೆಯ ಸ್ವಾಮಿ ಪ್ಲಾಟದ ಬಡಾವಣೆಯ ವಿಜಯ್ ದೇಸಾಯಿ ಎಂಬುವರ ಮನೆಗೆ ಹೊಕ್ಕು ಅವರ ಇಬ್ಬರು ಮಕ್ಕಳಾದ ಸ್ವಸ್ತಿ ವಿಜಯ್ ದೇಸಾಯಿ (4) ಮತ್ತು ವಿಯೋಮ್ ವಿಜಯ ದೇಸಾಯಿ (3) ದುಷ್ಕರ್ಮಿಗಳು ಅಪಹರಿಸಿದ್ದರು.

ಮಕ್ಕಳು ಅಪಹರಣಕ್ಕೊಳದ ಬಗ್ಗೆ ಪೊಲೀಸರಿಗೆ ದೂರು ನೀಡುತ್ತಿದ್ದಂತೆ ತಕ್ಷಣ ಕಾರ್ಯಪ್ರವೃತ್ತರಾದ ಅಥಣಿ ಪೊಲೀಸರು. ಮೂರು ತಂಡಗಳನ್ನು ಮಾಡಿಕೊಂಡು ಹುಡುಕಾಟ ನಡೆಸಿದ್ದರು. ಇದೀಗ ಮಕ್ಕಳ ಕಳ್ಳರ ಮೇಲೆ ಫೈರಿಂಗ್ ಮಾಡಿ ಅಥಣಿ ಪೊಲೀಸರು ಇಬ್ಬರೂ ಬಾಲಕರನ್ನು ಸುರಕ್ಷಿತವಾಗಿ ರಕ್ಷಿಸಿದ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಕೋಹಳ್ಳಿ ಗ್ರಾಮದ ಹೊರವಲಯದಲ್ಲಿ ನಡೆದಿದೆ.

CCTV ನೆರವು

ಇನ್ನು ದುಷ್ಕರ್ಮಿಗಳು ಮಕ್ಕಳನ್ನು ಅಪಹರಣ ಮಾಡಿದ ವಿಡಿಯೋ ಮನೆಗೆ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮೆರಾಗಳಲ್ಲಿ ಸೆರೆಯಾಗಿತ್ತು. ಇದರ ಜಾಡು ಹಿಡಿದು ತನಿಖೆ ನಡೆಸಿದ ಪೊಲೀಸರಿಗೆ ಮಕ್ಕಳ ಕಳ್ಳರು ಪತ್ತೆಯಾಗಿದ್ದಾರೆ. ಮಹಾರಾಷ್ಟ್ರ ಗಡಿಯಾದ ಕೋಹಳ್ಳಿ ಸಿಂಧೂರ್ ಮಾರ್ಗ ಮಧ್ಯದಲ್ಲಿ ಮಕ್ಕಳ ಕಳ್ಳರನ್ನು ಪೊಲೀಸರು ತಡೆಗಟ್ಟಿದಾಗ ದುಷ್ಕರ್ಮಿಗಳು ಪೊಲೀಸರ ಮೇಲೆ ಅಲ್ಲೆಗೆ ಮುಂದಾಗುತ್ತಿದ್ದಂತೆ ಪೊಲೀಸರು ಆತ್ಮರಕ್ಷಣೆಗೆ ದುಷ್ಕರ್ಮಿಗಳ ಮೇಲೆ ಫೈರಿಂಗ್ ಮಾಡಿದ್ದಾರೆ.

ಈ ವೇಳೆ ಮೂವರು ಆರೋಪಿಗಳ ಪೈಕಿ ಓರ್ವ ಆರೋಪಿಗೆ ಎಡಗಾಲಿಗೆ ಗುಂಡೇಟು ನೀಡಿದ್ದಾರೆ. ಗುಂಡೇಟು ತಿಂದ ಆರೋಪಿ ಕೊಲ್ಲಾಪುರ ಜಿಲ್ಲೆ ಹಾತ್ ಕನಗಲಾ ಗ್ರಾಮದ ಸಂಬಾಜಿ ರಾವಸಾಬ ಕಾಂಬಳೆ ಎಂದು ಗುರುತಿಸಲಾಗಿದೆ. ಗಾಯಾಳು ಆರೋಪಿಯನ್ನು ಸ್ಥಳೀಯ ಅಥಣಿ ಸಮುದಾಯ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಬೆಳಗಾವಿ ಎಸ್ ಪಿ ಭೀಮಶಂಕರ್ ಗುಳೆದ್ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

ಪ್ರಸ್ತುತ ಮಕ್ಕಳಿಬ್ಬರನ್ನೂ ರಕ್ಷಿಸಿ ಅವರ ಪೋಷಕರಿಗೆ ಹಸ್ತಾಂತರಿಸಲಾಗಿದ್ದು, ಅಪಹರಣದಲ್ಲಿ ಭಾಗಿಯಾಗಿದ್ದ ಮೂವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸರ ಪ್ರಕಾರ, ಗುರುವಾರ ಮಧ್ಯಾಹ್ನ ಇಬ್ಬರು ಮಕ್ಕಳು ಶಾಲೆಯಿಂದ ಹಿಂದಿರುಗಿದ ನಂತರ ಮತ್ತು ಮನೆಯ ಕೋಣೆಯೊಳಗೆ ಆಟವಾಡುತ್ತಿದ್ದಾಗ ಈ ಘಟನೆ ನಡೆದಿದೆ. ಆ ಸಮಯದಲ್ಲಿ ಅವರ ಅಜ್ಜಿ ಮಾತ್ರ ಮನೆಯಲ್ಲಿದ್ದರು.

ಹಣಕ್ಕಾಗಿ ಕೃತ್ಯ

ವಿಚಾರಣೆ ವೇಳೆ ಆರೋಪಿಯೊಬ್ಬ ಉದ್ಯಮಿಯ ವ್ಯಾಪಾರ ವೇದಿಕೆಯಲ್ಲಿ ಹೂಡಿಕೆ ಮಾಡಿ ಅಪಾರ ನಷ್ಟ ಅನುಭವಿಸಿದ್ದ ಎಂದು ಹೇಳಿಕೊಂಡಿದ್ದಾನೆ. ಈ ಹಿನ್ನೆಲೆಯಲ್ಲಿ ಉದ್ಯಮಿಗೆ ಒಂದು ಕೋಟಿ ರೂ.ಗೂ ಹೆಚ್ಚು ಹಣ ಕೇಳಿದಾಗ ಆತ ಹಣ ಕೊಡಲು ನಿರಾಕರಿಸಿದ್ದರಿಂದ ಮಕ್ಕಳನ್ನು ಅಪಹರಿಸಲು ನಿರ್ಧರಿಸಿದ್ದೆವು ಎಂದು ತಪ್ಪೊಪ್ಪಿಗೆ ಹೇಳಿಕೆ ನೀಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಕಾರ್ಯಾಚರಣೆಯಲ್ಲಿ ಅಥಣಿ ಪಿ ಎಸ್ ಆಯ್ ಮಹಾಲಿಂಗ ಉಪ್ಪಾರ ಇಬ್ಬರು ಪೇದಗಳಾದ ಜಮೀರ್ ಡಾಂಗೆ ಹಾಗೂ ರಮೇಶ್ ಹಾದಿಮನಿ ಗಾಯಗಳಾಗಿದ್ದು ಅಥಣಿ ಸಮುದಾಯ ಆಸ್ಪತ್ರೆಗೆ ದಾಖಲ ಮಾಡಿ ಅವರಿಗೂ ಕೂಡ ಚಿಕಿತ್ಸೆ ಮುಂದುವರೆದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com