ಬಾಬುಸಾಪಾಳ್ಯ ಕಟ್ಟಡ ಕುಸಿತ ಘಟನೆ ಬಳಿಕ ಎಚ್ಚೆತ್ತ BBMP: ಅನಧಿಕೃತ-ಶಿಥಿಲಾವಸ್ಥೆ ಕಟ್ಟಡಗಳ ತೆರವು ಕಾರ್ಯ ಚುರುಕು..!

ಪಾಲಿಕೆ ಅಧಿಕಾರಿಗಳು ಶುಕ್ರವಾರ ಬಾಬುಸಾಪಾಳ್ಯದಲ್ಲಿನ ಎರಡು ಹಾಗೂ ಪಶ್ಚಿಮ ವಲಯದಲ್ಲಿ ಎರಡು ಕಟ್ಟಡಗಳನ್ನು ತೆರವುಗೊಳಿಸುವ ಮೂಲಕ ಕಾರ್ಯವನ್ನು ಚುರುಕುಗೊಳಿಸಿದ್ದಾರೆ.
Officials removed two floors of a building in Kamala Nagar
ಕಮಲಾನಗರದಲ್ಲಿ ಸುಮಾರು 25 ವರ್ಷಗಳ ಹಿಂದೆ ನಿರ್ಮಿಸಲಾಗಿರುವ ಮನೆಯನ್ನು ಶುಕ್ರವಾರ ತೆರವುಗೊಳಿಸಿದ್ದಾರೆ.Express Photo: Nagaraja Gadekal
Updated on: 

ಬೆಂಗಳೂರು; ಹೆಣ್ಣೂರಿನ ಬಾಬುಸಾಪಾಳ್ಯದಲ್ಲಿ ಮಂಗಳವಾರ ಆರು ಅಂತಸ್ತಿನ ಕಟ್ಟಡ ಕುಸಿದು ಒಂಬತ್ತು ಮಂದಿ ಕಾರ್ಮಿಕರು ಸಾವನ್ನಪ್ಪಿದ ಘಟನೆ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ಬಿಬಿಎಂಪಿ, ನಗರದಲ್ಲಿರುವ ಅನಧಿಕೃತ ಹಾಗೂ ಶಿಥಿಲಾವಸ್ಥೆಯಲ್ಲಿರುವ ಕಟ್ಟಡಗಳ ತೆರವು ಕಾರ್ಯಾಚರಣೆಯನ್ನು ಚುರುಗೊಳಿಸಿದ್ದಾರೆ.

ಪಾಲಿಕೆ ಅಧಿಕಾರಿಗಳು ಶುಕ್ರವಾರ ಬಾಬುಸಾಪಾಳ್ಯದಲ್ಲಿನ ಎರಡು ಹಾಗೂ ಪಶ್ಚಿಮ ವಲಯದಲ್ಲಿ ಎರಡು ಕಟ್ಟಡಗಳನ್ನು ತೆರವುಗೊಳಿಸುವ ಮೂಲಕ ಕಾರ್ಯವನ್ನು ಚುರುಕುಗೊಳಿಸಿದ್ದಾರೆ.

ಕಮಲಾನಗರ 3ನೇ ಮುಖ್ಯರಸ್ತೆಯ ಬಳಿ ದ್ವಿತೀಯ ನೀರುಗಾಲುವೆಗೆ ಹೊಂದಿಕೊಂಡಂತಿರುವ 290 ಚದುರಡಿ ಪ್ರದೇಶದಲ್ಲಿ ಸುಮಾರು 25 ವರ್ಷಗಳ ಹಿಂದೆ ನಿರ್ಮಿಸಲಾಗಿರುವ ಮನೆಯನ್ನು ಶುಕ್ರವಾರ ತೆರವುಗೊಳಿಸಿದ್ದಾರೆ. ಕಟ್ಟಡದ ತಳಭಾಗದಲ್ಲಿ ದ್ವಿತೀಯ ನೀರು ಗಾಲುವೆಯ ಮೂಲಕ ಬರುವ ನೀರು ಮನೆಯ ತಳಪಾಯಕ್ಕೆ ಹೋಗಿರುವ ಕಾರಣ, ತಳಪಾಯದ ನೀರಿನ ಸಂಪ್ ಹಾಗೂ ಗೋಡೆ ಕುಸಿದಿದ್ದ ಹಿನ್ನೆಲೆಯಲ್ಲಿ ವಲಯ ಆಯುಕ್ತರಾದ ಅರ್ಚನಾರವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ನಂತರ ಕಟ್ಟಡ ತೆರವುಗೊಳಿಸಲು ಸೂಚನೆ ನೀಡಿದ್ದರು.

ಹೀಗಾಗಿ ಬಿಬಿಎಂಪಿ ಮಾಜಿ ಸದಸ್ಯ ಶಿವರಾಜ್ ನೇತೃತ್ವದಲ್ಲಿ ಶುಕ್ರವಾಹ ಸಿಬ್ಬಂದಿಗಳು ಕಟ್ಟಡ ತೆರವು ಕಾರ್ಯಾಚರಣೆ ನಡೆಸಿದರು.

Officials removed two floors of a building in Kamala Nagar
ನಡೆಯದ ಬಿಬಿಎಂಪಿ ಚುನಾವಣೆ: ಕೌನ್ಸಿಲರ್ ಗಳಿಲ್ಲದೆ ಮಳೆಗಾಲದಲ್ಲಿ ಸಮಸ್ಯೆ ನಿರ್ವಹಿಸುವುದೇ ದುಸ್ತರ!

ಈ ಕಟ್ಟಡದಲ್ಲಿ 5 ಮನೆಗಳಿದ್ದು, ಎಲ್ಲಾ ಮನೆಗಳನ್ನು ಬಾಡಿಗೆಗೆ ನೀಡಲಾಗಿರುತ್ತದೆ. ತಳಪಾಯದ ಗೋಡೆ ಕುಸಿದಿರುವ ಪರಿಣಾಮ ಮನೆಗಳಲ್ಲಿದ್ದ ಎಲ್ಲಾ ಕುಟುಂಬಸ್ತರನ್ನು ಸ್ಥಳಾಂತರಿಸಲಾಗಿದ್ದು, ಮನೆಯಲ್ಲಿದ್ದ ಎಲ್ಲಾ ಸಾಮಾಗ್ರಿಗಳನ್ನು ಹೊರ ತೆಗೆಯಲಾಗಿದೆ. 5 ಕುಟುಂಬಗಳ ಪೈಕಿ, 3 ಕುಟುಂಬಗಳು ಸಂಬಂಧಿಕರ ಮನೆಗೆ ತೆರಳಿದ್ದು, 1 ಕುಟುಂಬ ಅಂಬೇಡ್ಕರ್ ಭವನ, ಇನ್ನೊಂದು ಕುಟುಂಬಕ್ಕೆ ಸಮೀಪದ ದೇವಸ್ಥಾನದಲ್ಲಿ ಆಶ್ರಯ ನೀಡಲಾಗಿದೆ. ಸುರಕ್ಷತೆಯ ದೃಷ್ಟಿಯಿಂದ ಎದುರು ಮನೆಯವರನ್ನು ಕೂಡಾ ಖಾಲಿ ಮಾಡಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ಮಹದೇವಪುರದ ಹೊರಮಾವಿನ ನಂಜಪ್ಪ ಗಾರ್ಡ್ನ್ನಲ್ಲಿ ಪುಟ್ಟಪ್ಪ ಎಂಬುವವರು 250 ಚದುರಡಿ ನಿವೇಶನದಲ್ಲಿ ನಿರ್ಮಿಸಿರುವ ಆರಂತಸ್ತಿನ ಕಟ್ಟಡ ತೆರವು ಮಾಡಲು ತೀರ್ಮಾನಿಸಲಾಗಿದೆ. ನಿರಂತರ ಮಳೆಯಿಂದಾಗಿ ಕಟ್ಟಡ ವಾಲಿದ ರೀತಿ ಕಂಡು ಬಂದಿರುವ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಕಟ್ಟಡ ತೆರವು ಕಾರ್ಯಚರಣೆ ನಡೆಸಲಾಗುತ್ತಿದೆ.

ಕಟ್ಟಡ ತೆರವು ಮಾಡುವಂತೆ ಬಿಬಿಎಂಪಿ ನೀಡಿದ ನೋಟೀಸ್ಗೆ ಮಾಲೀಕ ಕೂಡ ಸ್ಪಂದಿಸಿರುವ ಹಿನ್ನೆಲೆಯಲ್ಲಿ ಬಿಬಿಎಂಪಿ ಸಿಬ್ಬಂದಿಗಳು ಕಟ್ಟಡ ತೆರವು ಕಾರ್ಯಾಚರಣೆ ನಡೆಸುತ್ತಿದ್ದಾರೆ. ಕಟ್ಟಡ ತೆರವು ಮಾಡದಿದ್ದರೆ ಕ್ರಿಮಿನಲ್ ಕೇಸ್ ಹಾಕುವುದಾಗಿ ಬಿಬಿಎಂಪಿ ಅಧಿಕಾರಿಗಳೂ ಎಚ್ಚರಿಸಿದ ಹಿನ್ನೆಲೆಯಲ್ಲಿ ಪುಟ್ಟಪ್ಪ ಎಂಟು ಲಕ್ಷ ರೂ. ವೆಚ್ಚದಲ್ಲಿ ಕಟ್ಟಡ ತೆರವುಗೊಳಿಸಲು ಮುಂದಾಗಿದ್ದಾರೆ. ಸದ್ಯ ಅಕ್ಕಪಕ್ಕದ ಮನೆಗಳಿಗೆ ಹಾನಿಯಾಗದಂತೆ ತೆರವು ಕಾರ್ಯಾಚರಣೆ ನಡೆಸಲಾಗುತ್ತಿದೆ. ಇದೇ ರೀತಿ ನಗರದಲ್ಲಿರುವ ಇನ್ನಿತರ ಹಲವಾರು ಶಿಥಿಲ ಕಟ್ಟಡಗಳನ್ನು ಪತ್ತೆ ಹಚ್ಚಿ ತೆರವು ಮಾಡಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಶಾಸಕ ಕೆ.ಗೋಪಾಲಯ್ಯ ಮಾತನಾಡಿ, 1994ರಲ್ಲಿ ಮನೆ ನಿರ್ಮಿಸಲಾಗಿದ್ದು, ಸುಮಾರು 10 ವರ್ಷಗಳ ಹಿಂದೆ ಎರಡು ಮಹಡಿಗಳನ್ನು ಸೇರಿಸಲಾಗಿದೆ. ಮಾಲೀಕರು ಕಟ್ಟಡವನ್ನು ಬಾಡಿಗೆಗೆ ಪಡೆದು ಬೇರೆಡೆ ವಾಸವಿದ್ದರು. ಬಾಡಿಗೆದಾರರನ್ನು ತಾತ್ಕಾಲಿಕವಾಗಿ ಸಮುದಾಯ ಭವನಕ್ಕೆ ಸ್ಥಳಾಂತರಿಸಿ, ಅವರಿಗೆ ಊಟ ಹಾಗೂ ವಸತಿ ನೀಡಲಾಗುತ್ತಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com