ಭೂಮಿ ವಶಕ್ಕೆ ಪಡೆಯುತ್ತಿರುವ ಅರಣ್ಯ ಇಲಾಖೆ.
ಭೂಮಿ ವಶಕ್ಕೆ ಪಡೆಯುತ್ತಿರುವ ಅರಣ್ಯ ಇಲಾಖೆ.

HMT ಯಿಂದ 5 ಎಕರೆ ಭೂಮಿ ಮರು ವಶ: ಅರಣ್ಯ ಇಲಾಖೆ

ಎಚ್‍ಎಂಟಿ ವಶದಲ್ಲಿದ್ದ ಪೀಣ್ಯ-ಜಾಲಹಳ್ಳಿ ಸರ್ವೆ ನಂ. 1ರಲ್ಲಿ ಶುಕ್ರವಾರ ಜೆಸಿಬಿಯೊಂದಿಗೆ ಕಾರ್ಯಾಚರಣೆಗೆ ಇಳಿದ ಅರಣ್ಯ ಇಲಾಖೆ, ಬೆಂಗಳೂರು ನಗರ ವಲಯದ ಅಧಿಕಾರಿಗಳು 5 ಎಕರೆ ಖಾಲಿ ಜಮೀನನ್ನು ಮರುವಶಕ್ಕೆ ಪಡೆದು, ಅಲ್ಲಿ ಅರಣ್ಯ ಇಲಾಖೆ ಫಲಕವನ್ನು ನೆಟ್ಟು ತಮ್ಮ ಹಕ್ಕು ಪ್ರತಿಪಾದಿಸಿದ್ದಾರೆ.
Published on

ಬೆಂಗಳೂರು: ಪೀಣ್ಯ-ಜಾಲಹಳ್ಳಿ ಸರ್ವೆ ನಂ.1ರಲ್ಲಿ ಹಲವು ಕೋಟಿ ರೂಪಾಯಿ ಮೌಲ್ಯದ 5 ಎಕರೆ ಖಾಲಿ ಭೂಮಿಯನ್ನು ಅರಣ್ಯ ಇಲಾಖೆ ಎಚ್‌ಎಂಟಿಯಿಂದ ಮರುವಶಕ್ಕೆ ಪಡೆದಿದೆ.

ಎಚ್‍ಎಂಟಿ ವಶದಲ್ಲಿದ್ದ ಪೀಣ್ಯ-ಜಾಲಹಳ್ಳಿ ಸರ್ವೆ ನಂ. 1ರಲ್ಲಿ ಶುಕ್ರವಾರ ಜೆಸಿಬಿಯೊಂದಿಗೆ ಕಾರ್ಯಾಚರಣೆಗೆ ಇಳಿದ ಅರಣ್ಯ ಇಲಾಖೆ, ಬೆಂಗಳೂರು ನಗರ ವಲಯದ ಅಧಿಕಾರಿಗಳು 5 ಎಕರೆ ಖಾಲಿ ಜಮೀನನ್ನು ಮರುವಶಕ್ಕೆ ಪಡೆದು, ಅಲ್ಲಿ ಅರಣ್ಯ ಇಲಾಖೆ ಫಲಕವನ್ನು ನೆಟ್ಟು ತಮ್ಮ ಹಕ್ಕು ಪ್ರತಿಪಾದಿಸಿದ್ದಾರೆ.

1896ರ ಮೇ 29ರ ಸರಕಾರದ ಅಧಿಸೂಚನೆ ಸಂಖ್ಯೆ 10407, ಎಫ್.ಟಿ.ಎಫ್. 153-95 ಮತ್ತು 1901ರ ಜನವರಿ 7ರ ಅಧಿಸೂಚನೆ ಸಂಖ್ಯೆ 422-ಎಫ್.ಟಿ.ಎಫ್.-15-1900ರ ರೀತ್ಯ ಪೀಣ್ಯ, ಜಾಲಹಳ್ಳಿ ಪ್ಲಾಂಟೇಷನ್ ನಲ್ಲಿರುವ 599 ಎಕರೆ ಜಮೀನು ಅರಣ್ಯವಾಗಿರುತ್ತದೆ. ಅರಣ್ಯೇತರ ಉದ್ದೇಶಕ್ಕೆ ಭೂಪರಿವರ್ತನೆ ಆಗದ ಈ ಜಮೀನು once a forest is always a forest ಎಂಬ ಸುಪ್ರೀಂಕೋರ್ಟ್ ಅಭಿಪ್ರಾಯದಂತೆ ಅರಣ್ಯವೇ ಆಗಿದೆ ಎಂದು ಈಶ್ವರ ಖಂಡ್ರೆ ಪ್ರತಿಪಾದಿಸಿದ್ದರು.

ಭೂಮಿ ವಶಕ್ಕೆ ಪಡೆಯುತ್ತಿರುವ ಅರಣ್ಯ ಇಲಾಖೆ.
ಭೂಮಿ ಹಿಂದಿರುಗಿಸಿ; 1,349 ಕೋಟಿ ರೂ ಬಾಕಿ ಪಾವತಿಸಿ: KIOCLಗೆ ಅರಣ್ಯ ಇಲಾಖೆ ಸೂಚನೆ

ಸದರಿ ಜಮೀನು ಅರಣ್ಯ ಸ್ವರೂಪ ಕಳೆದುಕೊಂಡಿದೆ ಎಂದು ಡಿನೋಟಿಫಿಕೇಷನ್‍ಗೆ ಅನುಮತಿ ಕೋರಿ ಅರಣ್ಯಾಧಿಕಾರಿಗಳು ನಿಯಮಬಾಹಿರವಾಗಿ ಸಲ್ಲಿಸಿದ್ದ ಇಂಟರ್ ಲೊಕೇಟರಿ ಅಪ್ಲಿಕೇಶನ್ (ಐಎ) ಹಿಂಪಡೆಯಲೂ ಸೂಚನೆ ನೀಡಿದ್ದರು. ಈ ಮಧ್ಯೆ ಎಚ್‍ಎಂಟಿ ತನ್ನ ವಶದಲ್ಲಿದ್ದ ಅರಣ್ಯ ಭೂಮಿಯ ಪೈಕಿ 165ಕ್ಕೂ ಹೆಚ್ಚು ಎಕರೆ ಜಮೀನನ್ನು ಕೇವಲ 300 ಕೋಟಿ ರೂ.ಗೆ ಖಾಸಗಿ ಮತ್ತು ಸರಕಾರದ ವಿವಿಧ ಸಂಸ್ಥೆಗಳಿಗೆ ಮಾರಾಟ ಮಾಡಿತ್ತು.

ಈ ಭೂಮಿಯನ್ನು ವಶಕ್ಕೆ ಪಡೆದು ಲಾಲ್‍ಬಾಗ್, ಕಬ್ಬನ್ ಪಾರ್ಕ್‍ನಂತಹ ಬೃಹತ್ ಉದ್ಯಾನ ಇಲ್ಲದ ಉತ್ತರ ಬೆಂಗಳೂರಿನಲ್ಲಿ ವೃಕ್ಷೋದ್ಯಾನ ನಿರ್ಮಿಸಿ ಆ ಭಾಗದ ಬೆಂಗಳೂರಿಗರಿಗೆ ಅತ್ಯುತ್ತಮ ಶ್ವಾಸತಾಣ ಮಾಡುವ ಆಶಯವನ್ನು ಈಶ್ವರ ಖಂಡ್ರೆ ಅವರು ವ್ಯಕ್ತಪಡಿಸಿದ್ದರು.. ಈ ನಿಟ್ಟಿನಲ್ಲಿ ಅಧಿಕಾರಿಗಳು ಶುಕ್ರವಾರ ಪ್ರಥಮ ಹೆಜ್ಜೆ ಇಟ್ಟಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X
Google Preferred source

Advertisement

X
Kannada Prabha
www.kannadaprabha.com