ಖಾಲಿ ಇರುವ 2 ಲಕ್ಷ ಹುದ್ದೆಗಳು ಹಂತ ಹಂತವಾಗಿ ಭರ್ತಿ: ಸಚಿವ ಪ್ರಿಯಾಂಕ್ ಖರ್ಗೆ

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಈಗಾಗಲೇ 900 ಎಂಜಿನಿಯರ್‌ಗಳ ಹುದ್ದೆಗಳನ್ನು ಭರ್ತಿ ಮಾಡಲಾಗಿದೆ. ಕಲ್ಯಾಣ ಪಥ ಕಾರ್ಯಕ್ರಮದಡಿ ಕಲ್ಯಾಣ ಕರ್ನಾಟಕ ಪ್ರದೇಶದ ರಸ್ತೆಗಳ ಅಭಿವೃದ್ಧಿಗೆ ಸರ್ಕಾರ 1000 ಕೋಟಿ ರೂ.ಗಳನ್ನು ಕಾಯ್ದಿರಿಸಿದೆ.
Rural Development Minister Priyank Kharge speaking in the felicitation programme of Kalaburagi MP Radhakrishna Doddamani at Chittapur town on Friday.
ಶುಕ್ರವಾರ ಚಿತ್ತಾಪುರ ಪಟ್ಟಣದಲ್ಲಿ ಕಲಬುರಗಿ ಸಂಸದ ರಾಧಾಕೃಷ್ಣ ದೊಡ್ಡಮನಿ ಅವರ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿದ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ.
Updated on

ಕಲಬುರಗಿ: ರಾಜ್ಯದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಎರಡು ಲಕ್ಷ ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡಲಾಗುವುದು ಎಂದು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರೂ ಆದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರು ಶುಕ್ರವಾರ ಹೇಳಿದರು.

ಲೋಕಸಭೆ ಚುನಾವಣೆಯಲ್ಲಿ ಕಲಬುರಗಿ ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾದ ಕಲಬುರಗಿ ಸಂಸದ ರಾಧಾಕೃಷ್ಣ ದೊಡ್ಡಮನಿ ಅವರನ್ನು ಸನ್ಮಾನಿಸಲು ಚಿತ್ತಾಪುರದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿ ಪ್ರಿಯಾಂಕ್ ಖರ್ಗೆಯವರು ಮಾತನಾಡಿದರು.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಈಗಾಗಲೇ 900 ಎಂಜಿನಿಯರ್‌ಗಳ ಹುದ್ದೆಗಳನ್ನು ಭರ್ತಿ ಮಾಡಲಾಗಿದೆ. ಕಲ್ಯಾಣ ಪಥ ಕಾರ್ಯಕ್ರಮದಡಿ ಕಲ್ಯಾಣ ಕರ್ನಾಟಕ ಪ್ರದೇಶದ ರಸ್ತೆಗಳ ಅಭಿವೃದ್ಧಿಗೆ ಸರ್ಕಾರ 1000 ಕೋಟಿ ರೂ.ಗಳನ್ನು ಕಾಯ್ದಿರಿಸಿದೆ ಎಂದು ಹೇಳಿದರು.

ನನಗೆ ಒಂದು ವರ್ಷದ ಸಮಯ ಕೊಡಿ. ನನ್ನನ್ನು ಶಾಸಕನನ್ನಾಗಿ ಆಯ್ಕೆ ಮಾಡಿದ ಚಿತ್ತಾಪುರ ಕ್ಷೇತ್ರದ ಚಿತ್ರಣವನ್ನೇ ಬದಲಿಸಲು ಎಲ್ಲಾ ಪ್ರಯತ್ನಗಳನ್ನು ಮಾಡುತ್ತೇನೆ. ಎಲ್ಲಾ ಚುನಾವಣೆಗಳಲ್ಲಿ ನನ್ನನ್ನು ಬೆಂಬಲಿಸುತ್ತಿರುವ ಚಿತ್ತಾಪುರ ಕ್ಷೇತ್ರದ ಮತದಾರರಿಗೆ ನಾನು ಕೃತಜ್ಞನಾಗಿದ್ದೇನೆಂದು ತಿಳಿಸಿದರು.

ಇದೇ ವೇಳೆ ಸರ್ಕಾರದ ಖಜಾನೆ ಖಾಲಿಯಾಗಿದೆ ಎಂದು ಸುಳ್ಳು ಪ್ರಚಾರ ಮಾಡುತ್ತಿರುವ ವಿರೋಧ ಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಇತ್ತೀಚೆಗೆ ಕಲಬುರಗಿಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಕಲ್ಯಾಣ ಕರ್ನಾಟಕ ಭಾಗಕ್ಕೆ 7 ಸಾವಿರ ಕೋಟಿ ರೂ ನೀಡಲಾಗಿದೆ. ಅದರಲ್ಲೂ ರೂ.300ಕೋಟಿಯನ್ನು ಚಿತ್ತಾಪುರ ಕ್ಷೇತ್ರಕ್ಕೆ ನೀಡಲಾಗಿದೆ. ಕಲಬುರಗಿ ಜಿಲ್ಲೆಯ 30 ಗ್ರಾಮಗಳ ಸರ್ವಾಂಗೀಣ ಅಭಿವೃದ್ಧಿಗೆ ನೀಲನಕ್ಷೆ ಸಿದ್ಧಪಡಿಸಲಾಗಿದೆ. ವಾಡಿಯ ಸರ್ವಾಂಗೀಣ ಅಭಿವೃದ್ಧಿಗೆ ಅಂದಾಜು 25 ಕೋಟಿ ರೂ.ಗಳ ಯೋಜನೆಯನ್ನೂ ಸಿದ್ಧಪಡಿಸಲಾಗಿದೆ. ಚಿತ್ತಾಪುರ ಪಟ್ಟಣದಲ್ಲಿ ಮೃಗಾಲಯ ಹಾಗೂ ವಿಜ್ಞಾನ ಕೇಂದ್ರ ತೆರೆಯುವ ಯೋಜನೆಯೂ ಇದೆ ಎಂದು ಹೇಳಿದರು.

Rural Development Minister Priyank Kharge speaking in the felicitation programme of Kalaburagi MP Radhakrishna Doddamani at Chittapur town on Friday.
ಉದ್ಯೋಗ ಸೃಷ್ಟಿ ಜಾಗತಿಕ ಮಟ್ಟದಲ್ಲಿ ಹೆಚ್ಚು ಒತ್ತು ನೀಡಬೇಕಾದ ಅತ್ಯಗತ್ಯ ವಿಷಯ: ನಿರ್ಮಲಾ ಸೀತಾರಾಮನ್

ಬಳಿಕ ಕಲಬುರಗಿ ಸಂಸದ ರಾಧಾಕೃಷ್ಣ ದೊಡ್ಡಮನಿ ಮಾತನಾಡಿ, ತಮ್ಮನ್ನು ಆಯ್ಕೆ ಮಾಡಿದ ಮತದಾರರಿಗೆ ಹಾಗೂ ಇಡೀ ಕಲಬುರಗಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಸದಸ್ಯರಿಗೆ ಅದರಲ್ಲೂ ಚಿತ್ತಾಪುರ ವಿಧಾನಸಭಾ ಕ್ಷೇತ್ರದ ಮತದಾರರಿಗೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದರು.

ಪಕ್ಷದ ಕಾರ್ಯಕರ್ತರು ಮನೆ ಮನೆಗೆ ತೆರಳಿ ಪ್ರಚಾರ ನಡೆಸಿ ಮತದಾರರ ಮನವೊಲಿಸಿ ನನ್ನ ಪರವಾಗಿ ಮತಯಾಚನೆ ಮಾಡಿದರು. ಕಲಬುರಗಿ ಜಿಲ್ಲೆಯಲ್ಲಿ ಕಾಂಗ್ರೆಸ್ ನಿಂದ ಬಂದಿರುವ ಜನಪ್ರತಿನಿಧಿಗಳು ಒಗ್ಗಟ್ಟಿನಿಂದ ಜಿಲ್ಲೆಯ ಅಭಿವೃದ್ಧಿಗೆ ಶ್ರಮಿಸುವುದಾಗಿ ಜನತೆಗೆ ಹಾಗೂ ಪಕ್ಷದ ಕಾರ್ಯಕರ್ತರಿಗೆ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ ಪಾಟೀಲ್ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಅಭಿವೃದ್ಧಿ ಕಾರ್ಯಗಳಲ್ಲಿ ಕ್ರಾಂತಿಕಾರಕ ಬದಲಾವಣೆಗಳನ್ನು ಜನತೆ ಕಾಣುತ್ತಿದ್ದಾರೆ. ಶಿಕ್ಷಣ, ಆರೋಗ್ಯ ಮತ್ತು ಆರ್ಥಿಕ ಕ್ಷೇತ್ರಗಳಲ್ಲಿ ಸಾಕಷ್ಟು ಅಭಿವೃದ್ಧಿಯಾಗಿದೆ ಎಂದು ಹೇಳಿದರು.

ವಿರೋಧ ಪಕ್ಷಗಳು ವಿನಾಕಾರಣ ಕಾಂಗ್ರೆಸ್ ಮೇಲೆ ಆರೋಪ ಮಾಡುತ್ತಿವೆ. ಅವರು ಅಧಿಕಾರದಲ್ಲಿದ್ದಾಗ ಅಭಿವೃದ್ಧಿ ಯೋಜನೆಗಳನ್ನು ತರುವಲ್ಲಿ ವಿಫಲರಾಗಿದ್ದರು. ಆದರೆ ನಾವು ಅಭಿವೃದ್ಧಿ ಯೋಜನೆಗಳನ್ನು ಜಾರಿಗೆ ತರುತ್ತಿದ್ದೇವೆ ಎಂದರು.

ಇದಕ್ಕೂ ಮುನ್ನ ದೊಡ್ಡಮನಿ, ಪ್ರಿಯಾಂಕ್, ಡಾ.ಪಾಟೀಲ ಸೇರಿದಂತೆ ಮುಖಂಡರು ನಾಗಾವಿ ಯೆಲ್ಲಮ್ಮ ದೇವಸ್ಥಾನಕ್ಕೆ ಭೇಟಿ ನೀಡಿ ಚಿತ್ತಾಪುರದ ಪೀಠಾಧಿಪತಿಗಳ ಆಶೀರ್ವಾದ ಪಡೆದರು.

ಚಿತಾವಲಿ ದರ್ಗಾಕ್ಕೂ ಭೇಟಿ ನೀಡಿದರು. ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಬಸವೇಶ್ವರರ ಪ್ರತಿಮೆಗಳಿಗೆ ಮಾಲಾರ್ಪಣೆ ಮಾಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಜಗದೇವ್‌ ಗುತ್ತೇದಾರ್‌, ಎಂಎಲ್‌ಸಿ ಅಲ್ಲಮಪ್ರಭು ಪಾಟೀಲ್‌, ಎಂಎಲ್‌ಸಿ ತಿಪ್ಪಣ್ಣಪ್ಪ ಕಾಮನೋರ್‌ ಇತರರು ಇದ್ದರು

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com