Deepavali ಪಟಾಕಿ ಸಿಡಿಸಲು 2 ಗಂಟೆ ಮಾತ್ರ ಅವಕಾಶ, ಹಸಿರು ಪಟಾಕಿ ಮಾತ್ರ ಮಾರಾಟ ಮಾಡಿ: ಸಿಎಂ ಸಿದ್ದರಾಮಯ್ಯ

ಸುಪ್ರೀಂ ಕೋರ್ಟ್ ಆದೇಶದಂತೆ ಪರಿಸರಕ್ಕೆ ಹಾನಿಯಾಗುವ ಪಟಾಕಿಗಳಿಗೆ ಅವಕಾಶ ನೀಡಬಾರದು. ಪಟಾಕಿ ದಾಸ್ತಾನು, ಮಾರಾಟ ಪ್ರಕ್ರಿಯೆಯಲ್ಲಿ ಲೋಪ ಆಗಬಾರದು. ಸುರಕ್ಷತೆ ವಿಷಯದಲ್ಲಿ ಯಾವುದೇ ಲೋಪವಾಗದಂತೆ ನೋಡಿಕೊಳ್ಳಿ, ನಿಯಮ ಮೀರಿದರೆ ಕ್ರಿಮಿನಲ್ ಪ್ರಕರಣ ದಾಖಲಿಸಿ.
Siddaramaiah
ಸಿದ್ದರಾಮಯ್ಯ
Updated on

ಬೆಂಗಳೂರು: ದೀಪಾವಳಿ ಹಬ್ಬದ ಪ್ರಯುಕ್ತ ಸಿಎಂ ಸಿದ್ದರಾಮಯ್ಯ ಹಲವು ಷರತ್ತುಗಳನ್ನು ಹಾಕಿದ್ದಾರೆ. ದೀಪಾವಳಿ ದಿನ ಹಸಿರು ಪಟಾಕಿ ಸಿಡಿಸಲು ಮಾತ್ರ ಅವಕಾಶವಿದ್ದು ರಾತ್ರಿ 8 ಗಂಟೆಯಿಂದ 10 ಗಂಟೆ ಒಳಗೆ ಮಾತ್ರ ಪಟಾಕಿ ಹೊಡೆಯಬೇಕು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್​ ಸಿಇಒಗಳ ಜತೆ ಗೃಹಕಚೇರಿ ಕೃಷ್ಣಾದಲ್ಲಿ ಇಂದು ಸಭೆ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಪ್ರತಿವರ್ಷ ಪಟಾಕಿ ಸಿಡಿಸುವ ವೇಳೆ ಅವಘಡಗಳು ಸಂಭವಿಸುತ್ತದೆ. ಈ ಬಾರಿ ಪಟಾಕಿ‌ ಅವಘಡ ಆಗದಂತೆ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಖಡಕ್​ ಸೂಚನೆ ನೀಡಿದ್ದಾರೆ.

ಸುಪ್ರೀಂ ಕೋರ್ಟ್ ಆದೇಶದಂತೆ ಪರಿಸರಕ್ಕೆ ಹಾನಿಯಾಗುವ ಪಟಾಕಿಗಳಿಗೆ ಅವಕಾಶ ನೀಡಬಾರದು. ಪಟಾಕಿ ದಾಸ್ತಾನು, ಮಾರಾಟ ಪ್ರಕ್ರಿಯೆಯಲ್ಲಿ ಲೋಪ ಆಗಬಾರದು. ಸುರಕ್ಷತೆ ವಿಷಯದಲ್ಲಿ ಯಾವುದೇ ಲೋಪವಾಗದಂತೆ ನೋಡಿಕೊಳ್ಳಿ, ನಿಯಮ ಮೀರಿದರೆ ಕ್ರಿಮಿನಲ್ ಪ್ರಕರಣ ದಾಖಲಿಸುವಂತೆ ಎಂದು ಸಭೆಯಲ್ಲಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

Siddaramaiah
ಮುಡಾ ಪ್ರಕರಣ: ಸಿಎಂ ಸಿದ್ದರಾಮಯ್ಯಗೆ ಲೋಕಾಯುಕ್ತ ನೋಟಿಸ್!

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com