MUDA Case: ಸಿಎಂ ಸಿದ್ದರಾಮಯ್ಯ ಪತ್ನಿಗೆ ಮತ್ತೊಂದು ಸಂಕಷ್ಟ; '1.84 ಕೋಟಿ ರೂ ಹೇಗೆ ಬಂತು?'

ಮೈಸೂರಿನ ಕೈಗಾರಿಕಾ ಪ್ರದೇಶದಲ್ಲಿ 2023ರ ನವೆಂಬರ್‌ನಲ್ಲಿ 1.84 ಕೋಟಿ ರೂ. ಹಣ ನೀಡಿ ಖರೀದಿಸಿರುವ 20 ಗುಂಟೆ ಜಮೀನಿಗೆ ಸಂಬಂಧಿಸಿದಂತೆ ಹಣದ ಮೂಲ ಪತ್ತೆ ಹಚ್ಚಿ ಎಂದು ಆರ್‌ಟಿಐ ಕಾರ್ಯಕರ್ತ ಗಂಗರಾಜು ಎಂಬುವವರು ಜಾರಿ ನಿರ್ದೇಶನಾಲಯಕ್ಕೆ ಮನವಿ ಮಾಡಿದ್ದಾರೆ.
Siddaramaiah
ಸಿದ್ದರಾಮಯ್ಯ
Updated on

ಮೈಸೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ಜಾರಿ ನಿರ್ದೇಶನಾಲಯಕ್ಕೆ ದೂರು ಸಲ್ಲಿಕೆಯಾಗಲಿದೆ ಎನ್ನಲಾಗಿದೆ.

ಮೈಸೂರಿನ ಕೈಗಾರಿಕಾ ಪ್ರದೇಶದಲ್ಲಿ 2023ರ ನವೆಂಬರ್‌ನಲ್ಲಿ 1.84 ಕೋಟಿ ರೂ. ಹಣ ನೀಡಿ ಖರೀದಿಸಿರುವ 20 ಗುಂಟೆ ಜಮೀನಿಗೆ ಸಂಬಂಧಿಸಿದಂತೆ ಹಣದ ಮೂಲ ಪತ್ತೆ ಹಚ್ಚಿ ಎಂದು ಆರ್‌ಟಿಐ ಕಾರ್ಯಕರ್ತ ಗಂಗರಾಜು ಎಂಬುವವರು ಜಾರಿ ನಿರ್ದೇಶನಾಲಯಕ್ಕೆ ಮನವಿ ಮಾಡಿದ್ದು, ಈ ಸಂಬಂಧ ದೂರು ಕೂಡ ನೀಡಲಿದ್ದಾರೆ.

ಈ ಕುರಿತು ಖಾಸಗಿ ಸುದ್ದಿವಾಹಿನಿಯೊಂದಿಗೆ ಮಾತನಾಡಿರುವ ಆರ್ ಟಿಐ ಕಾರ್ಯಕರ್ತ ಗಂಗರಾಜು, 'ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಓರ್ವ ಗೃಹಿಣಿಯಾಗಿದ್ದು, ಅವರಿಗೆ ಯಾವುದೇ ಬಾಹ್ಯ ಆದಾಯಗಳಿಲ್ಲ. ಆದಾಗ್ಯೂ ಅವರಿಗೆ ಇಷ್ಟು ಹಣ ಎಲ್ಲಿಂದ ಬಂತು.

ಹೀಗಾಗಿ, ಈ ಪ್ರಕರಣದ ಕುರಿತು ನಾನು ಇ.ಡಿ ಅಧಿಕಾರಿಗಳ ಜೊತೆ ಚರ್ಚೆ ಮಾಡುತ್ತೇನೆ. ಅಧಿಕಾರಿಗಳು ನನ್ನ ಜೊತೆ ಚರ್ಚೆಗೆ ಒಪ್ಪಿದರೆ ಮತ್ತು ಈಗ ತನಿಖೆ ನಡೆಸುತ್ತಿರುವ ಪ್ರಕರಣದ ಜೊತೆಗೆ ಇದನ್ನೂ ತೆಗೆದುಕೊಳ್ಳುತ್ತೇವೆ ಎನ್ನುವುದಾದರೆ ನಾನು ಸಂಪೂರ್ಣ ದಾಖಲಾತಿಯನ್ನು ಅವರಿಗೆ ನೀಡುತ್ತೇನೆ ಎಂದಿದ್ದಾರೆ.

ಅಂತೆಯೇ ಅಧಿಕಾರಿಗಳು ಒಂದು ವೇಳೆ ಇದು ನಮಗೆ ಸಂಬಂಧಪಟ್ಟಿದ್ದಲ್ಲ. ಬೇಕಾದರೆ ನೀವು ಪ್ರತ್ಯೇಕವಾಗಿ ದೂರು ನೀಡಿ ಎಂದರೆ ಇ.ಡಿಗೆ ದೂರು ಕೊಡುತ್ತೇನೆ ಎಂದು ಹೇಳಿದರು.

Siddaramaiah
ಮುಡಾ ಪ್ರಕರಣ: ಮನವಿ ಪತ್ರದಲ್ಲಿ ವೈಟ್ನರ್ ಹಾಕಿದ್ದನ್ನ ಒಪ್ಪಿಕೊಂಡ ಸಿಎಂ ಪತ್ನಿ ಪಾರ್ವತಿ!

ವಿಚಾರಣೆಗೆ ಕರೆದ ಇಡಿ

ಇನ್ನು ಮೈಸೂರಿನ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಇಡಿ ತನಿಖೆ ಶುರು ಮಾಡಿದ್ದು, ಇದರ ಭಾಗವಾಗಿ ಮೈಸೂರಿನ ಆರ್‌ಟಿಐ ಕಾರ್ಯಕರ್ತ ಗಂಗರಾಜ್ ಅವರನ್ನು ಸೋಮವಾರ ವಿಚಾರಣೆಗೆ ಕರೆದಿದೆ ಎನ್ನಲಾಗಿದೆ. ವಿಚಾರಣೆ ವೇಳೆ ಗಂಗರಾಜ್ ಒಟ್ಟು 1,400 ಸೈಟ್‌ಗಳ ದಾಖಲೆಗಳನ್ನು ಇ.ಡಿಗೆ ನೀಡುತ್ತಿದ್ದಾರೆ. ಸಿದ್ದರಾಮಯ್ಯರ ಪತ್ನಿಯ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಹುಮುಖ್ಯ ದಾಖಲೆಯನ್ನು ಇ.ಡಿಗೆ ನೀಡಲಿದ್ದಾರೆ ಎನ್ನಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com