ವಕ್ಫ್ ಮಂಡಳಿ ನಿಷೇಧಿಸಿ: ಸರ್ಕಾರಕ್ಕೆ ಛಲವಾದಿ ನಾರಾಯಣಸ್ವಾಮಿ ಆಗ್ರಹ

ಕಳೆದ 70 ವರ್ಷಗಳಿಂದ ವಕ್ಫ್ ಬೋರ್ಡ್‌ಗೆ ಅಧಿಕಾರ ನೀಡುವ ಮೂಲಕ ಸಮಸ್ಯೆ ಮತ್ತು ಗೊಂದಲ ಸೃಷ್ಟಿಸಲು ಕಾಂಗ್ರೆಸ್ ಪಕ್ಷವೇ ಕಾರಣವಾಗಿದೆ. ವಕ್ಫ್ ಬೋರ್ಡ್ 16,000 ಎಕರೆಯಲ್ಲಿ ಮಾಲೀಕತ್ವ ಪಡೆದಿರುವ ರೈತರಿಗೆ ನೋಟಿಸ್ ನೀಡಿದೆ.
Chalavadi Narayanaswamy
ಛಲವಾದಿ ನಾರಾಯಣಸ್ವಾಮಿ
Updated on

ಮೈಸೂರು: ವಕ್ಫ್ ಮಂಡಳಿ ರೈತರ ಜಮೀನು ಕಿತ್ತುಕೊಳ್ಳುತ್ತಿದ್ದು, ರೈತರಿಗೆ ನೋಟಿಸ್ ನೀಡಿದೆ. ಈ ಮಂಡಳಿಯನ್ನು ಕೂಡಲೇ ಸರ್ಕಾರ ನಿಷೇಧಿಸಬೇಕೆಂದು ರಾಜ್ಯ ಸರ್ಕಾರಕ್ಕೆ ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಚಲವಾದಿ ನಾರಾಯಣಸ್ವಾಮಿ ಆಗ್ರಹಿಸಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಳೆದ 70 ವರ್ಷಗಳಿಂದ ವಕ್ಫ್ ಬೋರ್ಡ್‌ಗೆ ಅಧಿಕಾರ ನೀಡುವ ಮೂಲಕ ಸಮಸ್ಯೆ ಮತ್ತು ಗೊಂದಲ ಸೃಷ್ಟಿಸಲು ಕಾಂಗ್ರೆಸ್ ಪಕ್ಷವೇ ಕಾರಣವಾಗಿದೆ. ವಕ್ಫ್ ಬೋರ್ಡ್ 16,000 ಎಕರೆಯಲ್ಲಿ ಮಾಲೀಕತ್ವ ಪಡೆದಿರುವ ರೈತರಿಗೆ ನೋಟಿಸ್ ನೀಡಿದೆ. ಈ ನೋಟಿಸ್ ವಿರೋಧಿಸಿ ದಲಿತರು, ರೈತರು ಮತ್ತು ಕೆಲವು ಮುಸ್ಲಿಮರು ಪ್ರತಿಭಟನೆ ನಡೆಸುತ್ತಿದ್ದಾರೆ ಎಂದು ಹೇಳಿದರು.

ವಕ್ಫ್ ಕುರಿತು ಸಂಸತ್ತಿನ ಸಮಿತಿಯ ಶಿಫಾರಸುಗಳನ್ನು ಸರ್ಕಾರ ಒಪ್ಪಿಕೊಳ್ಳಬೇಕು ಮತ್ತು ವಕ್ಫ್ ಮಂಡಳಿಯನ್ನು ನಿಷೇಧಿಸಬೇಕು ಎಂದು ಆಗ್ರಹಿಸಿದರು. ಇದೇ ವೇಳೆ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ನಿಯಮಿತದಲ್ಲಿ ಸರ್ಕಾರ 172 ಕೋಟಿ ಲೂಟಿ ಮಾಡಿದೆ ಎಂದು ಆರೋಪಿಸಿದರು.

Chalavadi Narayanaswamy
ವಕ್ಫ್ ಬೋರ್ಡ್ ನೋಟಿಸ್: ರೈತರ ಅಹವಾಲು ಸ್ವೀಕರಿಸಲು ಬಿಜೆಪಿ ತಂಡ ರಚನೆ

ಯೋಗೇಶ್ವರ್ ಕಾಂಗ್ರೆಸ್ ಸೇರ್ಪಡೆ ಕುರಿತು ಮಾತನಾಡಿ, ಚನ್ನಪಟ್ಟಣ ಕ್ಷೇತ್ರಕ್ಕೆ ಸೂಕ್ತ ಅಭ್ಯರ್ಥಿ ಹುಡುಕುವಲ್ಲಿ ಕಾಂಗ್ರೆಸ್ ಪಕ್ಷ ವಿಫಲವಾಗಿದೆ. ಹೀಗಾಗಿ ಯೋಗೇಶ್ವರ್ ಅವರನ್ನು ತಮ್ಮ ಪಕ್ಷಕ್ಕೆ ಸೇರ್ಪಡೆಗೊಳಿಸಿಕೊಂಡಿದೆ. ಆದರೆ, ರಾಜ್ಯದ ಎಲ್ಲಾ ಮೂರು ಕ್ಷೇತ್ರಗಳಲ್ಲೂ ಬಿಜೆಪಿ ಗೆಲ್ಲುವುದು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಈ ನಡುವೆ ಮುಡಾ ಹಗರಣ ಕುರಿತು ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ (ಮುಡಾ) 14 ನಿವೇಶನಗಳನ್ನು ಹಿಂದಿರುಗಿಸಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದ್ದು, ಮುಖ್ಯಮಂತ್ರಿಗಳ ಕುಟುಂಬದ ವಿರುದ್ಧದ ಹೋರಾಟ ಮುಂದುವರಿಸಿ, ಪ್ರಕರಣವನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯುತ್ತೇವೆ. ಸಿದ್ದರಾಮಯ್ಯ ಅವರು ಮುಡಾ ಹಗರಣದಲ್ಲಿ ನೇರವಾಗಿ ಭಾಗಿಯಾಗಿದ್ದು, ಶೀಘ್ರದಲ್ಲೇ ಅದು ಸಾಬೀತಾಗಲಿದೆ ಎಂದು ಹೇಳಿದರು.

ಮಳೆಯಿಂದ ಸಾವಿರಾರು ಎಕರೆ ಪ್ರದೇಶದ ಬೆಳೆ ಹಾನಿಯಾಗಿದ್ದು, ರಸ್ತೆಗಳು ಸಂಪೂರ್ಣ ಅಸ್ತವ್ಯಸ್ತವಾಗಿವೆ. ಆದರೆ, ಸಂತ್ರಸ್ತ ರೈತರು ಮತ್ತು ಅವರ ಕುಟುಂಬಗಳಿಗೆ ಪರಿಹಾರ ಬಿಡುಗಡೆ ಮಾಡುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ. ಯಾವುದೇ ಸಚಿವರು ಸಂತ್ರಸ್ತರ ಭೇಟಿ ನೀಡಿ ಜನರ ಅಹವಾಲು ಆಲಿಸಿಲ್ಲ ಎಂದು ಇದೇ ವೇಳೆ ಸರ್ಕಾರದ ವಿರುದ್ಧ ಕಿಡಿಕಾರಿದರು.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com