Waqf Dispute: ವಿಜಯಪುರ ರೈತರಿಗೆ ನೀಡಿರುವ ನೋಟಿಸ್ ಹಿಂಪಡೆಯಲು ಸೂಚನೆ- ಕಾನೂನು ಸಚಿವ ಎಚ್‌ಕೆ ಪಾಟೀಲ್

ರೈತರ ಜಮೀನು ಕಬಳಿಕೆ ಮಾಡುವ ಉದ್ದೇಶ ಸರ್ಕಾರಕ್ಕೆ ಇಲ್ಲ. ಬಿಜೆಪಿಯವರು ಅನಾವಶ್ಯಕವಾಗಿ ರಾಜಕೀಯ ಮಾಡುತ್ತಿದ್ದಾರೆ. ಈ ವಿಚಾರದಲ್ಲಿ ರಾಜಕೀಯ ಮಾಡೋದು ಸೂಕ್ತ ಅಲ್ಲ.
Law Minister H K Patil
ಎಚ್‌ಕೆ ಪಾಟೀಲ್
Updated on

ಬೆಂಗಳೂರು: ವಿಜಯಪುರದ ರೈತರಿಗೆ ‌ವಕ್ಫ್ ಬೋರ್ಡ್ ನೀಡಿರುವ ನೋಟಿಸ್‌ ಅನ್ನು ವಾಪಸ್ ಪಡೆಯುವಂತೆ ಸೂಚಿಸಲಾಗಿದೆ ಎಂದು ಕಾನೂನು ಸಚಿವ ಹೆಚ್.ಕೆ. ಪಾಟೀಲ್ ತಿಳಿಸಿದ್ದಾರೆ.

ವಿಜಯಪುರ ಜಿಲ್ಲೆಯ ರೈತರ ಜಮೀನುಗಳನ್ನು ವಕ್ಫ್ ಆಸ್ತಿ ಎಂದು ಗುರುತಿಸಲಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕರ್ನಾಟಕ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್‌ಕೆ ಪಾಟೀಲ್ ಸೋಮವಾರ ಅವರಿಗೆ ನೀಡಿದ್ದ ನೋಟಿಸ್ ಹಿಂಪಡೆಯುವುದಾಗಿ ತಿಳಿಸಿದ್ದಾರೆ. ಅಲ್ಲದೆ "ತಪ್ಪಿನ ಬಗ್ಗೆ" ವಿಚಾರಿಸಲಾಗುತ್ತಿದೆ ಎಂದು ಹೇಳಿದರು.

ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೈತರ ಜಮೀನು ಕಬಳಿಕೆ ಮಾಡುವ ಉದ್ದೇಶ ಸರ್ಕಾರಕ್ಕೆ ಇಲ್ಲ. ಬಿಜೆಪಿಯವರು ಅನಾವಶ್ಯಕವಾಗಿ ರಾಜಕೀಯ ಮಾಡುತ್ತಿದ್ದಾರೆ. ಈ ವಿಚಾರದಲ್ಲಿ ರಾಜಕೀಯ ಮಾಡೋದು ಸೂಕ್ತ ಅಲ್ಲ. ರೈತರಿಗೆ ನೋಟಿಸ್‌ ಹೋಗಿದ್ದರೆ ಅದನ್ನು ವಾಪಸ್ ಪಡೆಯುತ್ತೇವೆ ಎಂದು ಎಂ. ಬಿ ಪಾಟೀಲ್ ಈಗಾಗಲೇ ಹೇಳಿದ್ದಾರೆ. ಸರ್ಕಾರ ನೋಟಿಸ್‌ ವಾಪಸ್ ಪಡೆಯಲಿದೆ. ಅಲ್ಲಿನ ತಹಶಿಲ್ದಾರ್ ತಪ್ಪು ಮಾಡಿದ್ದಾರೆ. ಹೀಗಾಗಿ ನೋಟಿಸ್‌ ವಾಪಸ್ ಪಡೆಯೋ ಕೆಲಸ ಮಾಡ್ತೀವಿ. ರಾಜಕೀಯವಾಗಿ ಆರೋಪ ಮಾಡೋದು ಸರಿಯಲ್ಲ ಎಂದು ಹೇಳಿದರು.

Law Minister H K Patil
ಹೊನವಾಡದ 11 ಎಕರೆ ಮಾತ್ರ ವಕ್ಫ್ ಜಾಗ, ಗೆಜೆಟ್ ನೋಟಿಫಿಕೇಷನ್‌ನಲ್ಲಿ ತಪ್ಪಾಗಿದೆ: ಸರ್ಕಾರ ಸ್ಪಷ್ಟನೆ; ಬಿಜೆಪಿ ಹೋರಾಟದ ಎಚ್ಚರಿಕೆ!

ತಪ್ಪು‌ ಮಾಡಿರೋದು ತಹಶಿಲ್ದಾರ್, ಜಮೀರ್ ಯಾಕೆ ರಾಜೀನಾಮೆ ಕೊಡಬೇಕು?

ಇದೇ ವೇಳೆ ಸಚಿವ ಜಮೀರ್ ಅಹ್ಮದ್ ಖಾನ್ ರಾಜಿನಾಮೆಗೆ ಬಿಜೆಪಿ ಪಟ್ಟು ಹಿಡಿದಿರುವ ಕುರಿತು ಪ್ರತಿಕ್ರಿಯಿಸಿದ ಅವರು, 'ಜಮೀರ್ ಯಾಕೆ ರಾಜೀನಾಮೆ ಕೊಡಬೇಕು? ತಹಶಿಲ್ದಾರ್ ತಪ್ಪು‌ ಮಾಡಿರೋದು. ತಹಶಿಲ್ದಾರ್ ನೊಟೀಸ್ ಕೊಟ್ಟಿದ್ರೆ ಅದನ್ನು ಡಿಸಿ ನೋಡ್ತಾರೆ. ಅದಕ್ಕೂ ಮೇಲೆ ಸರ್ಕಾರ ಇದೆ. ಹೀಗಿರುವಾಗ ಜಮೀರ್ ಯಾಕೆ ರಾಜೀನಾಮೆ ನೀಡಬೇಕು? ಎಂ.ಬಿ ‌ಪಾಟೀಲ್ ಎಲ್ಲಾ ಗೊಂದಲಗಳನ್ನ ನಿವಾರಣೆ ಮಾಡಿದ್ದಾರೆ. ಈಗ ಯಾವುದೇ ಗೊಂದಲ‌ ಇಲ್ಲ. ರೈತರ ಭೂಮಿಯನ್ನು ವಕ್ಫ್ ಆಸ್ತಿಯನ್ನಾಗಿ ಪರಿವರ್ತಿಸುವ ಉದ್ದೇಶ ಸರ್ಕಾರಕ್ಕೆ ಇಲ್ಲ. ತಪ್ಪಿದಲ್ಲಿ ಅದನ್ನು ಸರಿಪಡಿಸಿ, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದರು.

Law Minister H K Patil
ವಕ್ಫ್ ಮಂಡಳಿ ನಿಷೇಧಿಸಿ: ಸರ್ಕಾರಕ್ಕೆ ಛಲವಾದಿ ನಾರಾಯಣಸ್ವಾಮಿ ಆಗ್ರಹ

ತಪ್ಪು ಸರಿಪಡಿಸುತ್ತೇವೆ

ಈಗ ಆಗಿರುವ ತಪ್ಪನ್ನು ಗಮನಿಸಿ, ನೀಡಿರುವ ನೋಟಿಸ್‌ಗಳನ್ನು ಹಿಂಪಡೆಯಲಾಗುವುದು. ಯಾವ ಕಾರಣಕ್ಕೆ ತಪ್ಪಾಗಿದೆ ಎಂಬ ಬಗ್ಗೆ ವಿಚಾರಣೆ ನಡೆಸಿ ನಂತರ ನಿರ್ಧರಿಸಲಾಗುವುದು. ಜಿಲ್ಲಾಧಿಕಾರಿಗಳು ಈ ಬಗ್ಗೆ ವಿಚಾರಣೆ ನಡೆಸಲಿದ್ದು, ನೀಡಿರುವ ನೋಟಿಸ್ ಹಿಂಪಡೆಯಲು ಕ್ರಮ ಕೈಗೊಳ್ಳಲು ಒಂದೆರಡು ದಿನ ಬೇಕು. ವಿಷಯವು ಸೂಕ್ಷ್ಮವಾಗಿದೆ, ನಾನು ಸಂಕ್ಷಿಪ್ತವಾಗಿ ಹೇಳಬಲ್ಲೆ. ರೈತರ ಭೂಮಿಯನ್ನು ವಕ್ಫ್ ಆಸ್ತಿಯನ್ನಾಗಿ ಪರಿವರ್ತಿಸಲಾಗುತ್ತಿದೆ ಎಂಬ ಆರೋಪ ಸರಿಯಲ್ಲ. ಸರ್ಕಾರಕ್ಕೆ ಅಂತಹ ಉದ್ದೇಶವಿಲ್ಲ. ಯಾರಾದರೂ ಅಂತಹ ತಪ್ಪು ಮಾಡಿದ್ದರೆ, ಅದನ್ನು ಸರಿಪಡಿಸಲಾಗುವುದು ಮತ್ತು ಹೊಣೆಗಾರರಿಗೆ ಶಿಕ್ಷೆಯಾಗಲಿದೆ. ಭೂಮಿ ಯಾರಿಗೆ ಸೇರಬೇಕೋ ಅವರಿಗೆ ಸೇರಿದ್ದು ಎಂದು ಅವರು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com