ತುಮಕೂರು: ಕೆರೆ ಕೋಡಿಯಲ್ಲಿ ಕೊಚ್ಚಿ ಹೋಗಿದ್ದ ವಿದ್ಯಾರ್ಥಿನಿ ರಕ್ಷಣೆ

ಸೆಲ್ಫಿ ತೆಗೆದುಕೊಳ್ಳಲು ಹೋದ ವಿದ್ಯಾರ್ಥಿನಿ ಕೆಳಕ್ಕೆ ಬಿದ್ದು ಪೊಟರೆಯೊಂದರಲ್ಲಿ ಸಿಲುಕಿಕೊಂಡಿದ್ದಳು. ಸೋಮವಾರ ಆಕೆಯನ್ನು ಕಾಪಾಡುವಲ್ಲಿ ರಕ್ಷಣಾ ತಂಡ ಯಶಸ್ವಿಯಾಗಿದೆ.
Student rescued in tumakuru
ಕೆರೆಕೋಡಿಯಲ್ಲಿ ಕೊಚ್ಚಿ ಹೋಗಿದ್ದ ವಿದ್ಯಾರ್ಥಿನಿ ರಕ್ಷಣೆ
Updated on

ತುಮಕೂರು: ಮಂದಾರಗಿರಿ ಬೆಟ್ಟದ ಹಿಂಭಾಗದ ಮೈದಾಳ ಕೆರೆಯ ಕೋಡಿ ನೀರಿನಲ್ಲಿ ಭಾನುವಾರ ಸಂಜೆ ಸೆಲ್ಫಿ ತೆಗೆದುಕೊಳ್ಳುವಾಗ ಕೊಚ್ಚಿ ಹೋಗಿದ್ದ ಹಂಸ (20) ಎಂಬ ವಿದ್ಯಾರ್ಥಿನಿಯನ್ನು ರಕ್ಷಣೆ ಮಾಡಲಾಗಿದೆ.

ಸೆಲ್ಫಿ ತೆಗೆದುಕೊಳ್ಳಲು ಹೋದ ವಿದ್ಯಾರ್ಥಿನಿ ಕೆಳಕ್ಕೆ ಬಿದ್ದು ಪೊಟರೆಯೊಂದರಲ್ಲಿ ಸಿಲುಕಿಕೊಂಡಿದ್ದಳು. ಸೋಮವಾರ ಆಕೆಯನ್ನು ಕಾಪಾಡುವಲ್ಲಿ ರಕ್ಷಣಾ ತಂಡ ಯಶಸ್ವಿಯಾಗಿದೆ. ಸುಮಾರು 12 ಗಂಟೆಗಳ ಕಾರ್ಯಾಚರಣೆ ಬಳಿಕ ಯುವತಿ ಬದುಕಿ ಬಂದಿದ್ದಾರೆ. ಗುಬ್ಬಿ ತಾಲೂಕು ಶಿವರಾಂಪುರದ ನಿವಾಸಿ ಸೋಮನಾಥ್‌ ಅವರ ಪುತ್ರಿ ಹಂಸ ಅವರು ನಗರದ ಎಸ್‌ಐಟಿ ಕಾಲೇಜಿನಲ್ಲಿ ಎಂಜಿನಿಯರಿಂಗ್ ವಿದ್ಯಾರ್ಥಿನಿಯಾಗಿದ್ದಾರೆ. ಮೈದಾಳ ಕೆರೆ ಕೋಡಿಯಲ್ಲಿ ಸೆಲ್ಫಿ ಕ್ಲಿಕ್ಕಿಸಿಕೊಳ್ಳುವಾಗ ಕಾಲು ಜಾರಿ ಬಿದ್ದಿದ್ದರು. ನೀರಿನಲ್ಲಿ ಜಾರಿ ಹೋಗಿ, ಕಲ್ಲಿನ ಪೊಟರೆಯಲ್ಲಿ ಸಿಲುಕಿದ್ದರು. ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಪೊಲೀಸರು ತಡ ರಾತ್ರಿವರೆಗೂ ರಕ್ಷಣಾ ಕಾರ್ಯಾಚರಣೆ ನಡೆಸಿದ್ದರು. ಆದರೆ ಆಕೆ ಸಿಲುಕಿರುವ ಜಾಗಕ್ಕೆ ಹೋಗುವುದು ಸವಾಲಿನ ಕೆಲಸವಾಗಿತ್ತು. ಹತ್ತಕ್ಕೂ ಹೆಚ್ಚು ರಕ್ಷಣಾ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು.

ಕೋಡಿ ಹರಿಯುವ ಭಾಗದಲ್ಲಿ ಸುಮಾರು ಹದಿನೈದು ಅಡಿ ಆಳದಲ್ಲಿರುವ ಕಲ್ಲಿನ ಬಂಡೆ ನಡುವೆ ಹಂಸ ಸಿಲುಕಿರಬಹುದು ಎಂದು ಶಂಕಿಸಲಾಗಿತ್ತು. ಅದೀಗ ನಿಜವಾಗಿದೆ. ಕೋಡಿ ನೀರು ರಭಸದಿಂದ ಹರಿಯುತ್ತಿರುವ ಕಾರಣ, ಆಕೆಯ ಪತ್ತೆ ಹಾಗೂ ರಕ್ಷಣೆಗೆ ತೊಡಕಾಗಿತ್ತು. ಕೆರೆ ಕೊಡಿಯ ನೀರನ್ನು ಬೇರೆಡೆಗೆ ತಿರುಗಿಸುವ ಮೂಲಕ, ಆಕೆ ಸಿಲುಕಿದ್ದ ಕಲ್ಲಿನ ಪೊಟರೆಯ ಜಾಗಕ್ಕೆ ನೀರು ಹೋಗದಂತೆ ನೋಡಿಕೊಂಡು, ಬಳಿಕ ರಕ್ಷಣಾ ಕಾರ್ಯವನ್ನು ಯಶಸ್ವಿಯಾಗಿ ನಡೆಸಲಾಯಿತು. ಭಾನುವಾರ ರಕ್ಷಣಾ ಕಾರ್ಯ ಸ್ಥಗಿತಗೊಳಿಸಿದ್ದ ಅಗ್ನಿಶಾಮಕ ಸಿಬ್ಬಂದಿ, ಸೋಮವಾರ ಘಟನೆ ನಡೆದ ಮಂದಾರಗಿರಿ ಬೆಟ್ಟದ ಬಳಿ ಮೈದಾಳ ಕೆರೆ ಕೋಡಿ ಸ್ಥಳಕ್ಕೆ ಮತ್ತೆ ತೆರಳಿದ್ದು, ಬೆಳಿಗ್ಗೆಯಿಂದ ರಕ್ಷಣಾ ಕಾರ್ಯಾಚರಣೆ ಪುನಾರಂಭಿಸಿದ್ದರು.

Student rescued in tumakuru
ಕದ್ದು ಸೆಲ್ಪಿ ತೆಗೆದಿದ್ದೇ ಕಳ್ಳತನ ಮಾಡಿದ್ದವಳು ಸಿಕ್ಕಿಬೀಳಲು ಕಾರಣವಾಯ್ತು

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com