Waqf Dispute: ಕಾಂಗ್ರೆಸ್‌ ಸರ್ಕಾರದಿಂದ ಲ್ಯಾಂಡ್‌ ಜಿಹಾದ್‌, ಜಮೀರ್ ಆಧುನಿಕ ಟಿಪ್ಪು ಸುಲ್ತಾನ್- R.ಅಶೋಕ

ಈಗ ಲ್ಯಾಂಡ್ ಜಿಹಾದ್ ಆರಂಭವಾಗಿದೆ. ಕಳೆದ ತಿಂಗಳು ಜಿಲ್ಲೆಗೆ ಬಂದಿದ್ದ ಸಚಿವ ಜಮೀರ್ ಅಹ್ಮದ್‌, ಗೆಜೆಟ್ ಆಗಿರುವ ಆಸ್ತಿಗಳಲ್ಲಿ ವಕ್ಫ್ ಆಸ್ತಿ ಎಂದು ನಮೂದಿಸಲು ಮೌಖಿಕ ಆದೇಶ ಮಾಡಿದ್ದಾರೆ.
R Ashok
ಆರ್ ಅಶೋಕ
Updated on

ಬೆಂಗಳೂರು: ವಕ್ಫ್ ಭೂ ವಿವಾದಕ್ಕೆ ಸಂಬಂಧಿಸಿದಂತೆ ರೈತರಿಗೆ ನೋಟಿಸ್ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ ಪ್ರತಿಪಕ್ಷ ನಾಯಕ ಆರ್.ಅಶೋಕ್‌, ಇದು ರಾಜ್ಯ ಸರ್ಕಾರದ 'ಲ್ಯಾಂಡ್ ಜಿಹಾದ್' ಎಂದು ಆರೋಪಿಸಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಆರ್ ಅಶೋಕ್, 'ಕಾಂಗ್ರೆಸ್‌ ಸರ್ಕಾರ ಹಾಗೂ ವಕ್ಫ್‌ ಬೋರ್ಡ್‌ನಿಂದ ಲ್ಯಾಂಡ್ ಜಿಹಾದ್ ಆರಂಭವಾಗಿದ್ದು, ಬಡ ರೈತರ ಜಮೀನನ್ನು ಕಬಳಿಸಲು ಎಲ್ಲ ಬಗೆಯ ಪ್ರಯತ್ನ ಮಾಡಲಾಗಿದೆ. ಈ ಕುರಿತು ಸಿಎಂ ಸಿದ್ದರಾಮಯ್ಯ ಕೂಡಲೇ ಸ್ಪಷ್ಟೀಕರಣ ನೀಡಬೇಕು ಎಂದರು.

'ಕಾಂಗ್ರೆಸ್ ಸರ್ಕಾರ ಬಂದ ನಂತರ ಇಡೀ ಕರ್ನಾಟಕ ಒಂದೇ ಸಮುದಾಯಕ್ಕೆ ಸೇರಿದ್ದು ಎಂಬಂತೆ ಆಡುತ್ತಿದೆ. ಕಾಂಗ್ರೆಸ್‌ನ ತುಷ್ಟೀಕರಣದಿಂದಾಗಿ ಹಿಂದೂಗಳ ಮೇಲೆ ಹಲ್ಲೆಯಾಗಿದೆ. ಗಣೇಶ ವಿಸರ್ಜನೆ ಮಾಡಲು ಅವಕಾಶವಿಲ್ಲ. ಹಿಂದೂಗಳು ಜೈ ಶ್ರೀರಾಮ್ ಎನ್ನುವಂತಿಲ್ಲ. ಹಿಂದೂಗಳಿಗೆ ಭದ್ರತೆ ಇಲ್ಲ. ಈಗ ವಿಜಯಪುರ ಜಿಲ್ಲೆಯ ಹೊನವಾಡ ಗ್ರಾಮದಲ್ಲಿ ಸುಮಾರು 12 ಸಾವಿರ ಎಕರೆ ಹಾಗೂ ಇಡೀ ಜಿಲ್ಲೆಯಲ್ಲಿ ಒಟ್ಟಾರೆಯಾಗಿ 15 ಸಾವಿರ ಎಕರೆ ಭೂಮಿ ಕಬಳಿಸಲು ವಕ್ಫ್ ಬೋರ್ಡ್ ಯೋಜನೆ ರೂಪಿಸಿದೆ. ಇದಕ್ಕಾಗಿ ಕಂದಾಯ ಇಲಾಖೆಯಿಂದ 139 ರೈತರಿಗೆ ತಿಳಿವಳಿಕೆ ನೋಟಿಸ್ ನೀಡಲಾಗಿದೆ. ಇದು ಸ್ಪಷ್ಟವಾಗಿ ಸರ್ಕಾರದಿಂದಲೇ ನಡೆಯುತ್ತಿರುವ ಲ್ಯಾಂಡ್ ಜಿಹಾದ್' ಎಂದು ಅಶೋಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯದಲ್ಲಿ ಬಾಂಬ್ ಸ್ಪೋಟವಾಗಿದೆ. ಪಾಕಿಸ್ತಾನಕ್ಕೆ ಜೈಕಾರ ಹಾಕಲಾಗಿದೆ. ಲವ್ ಜಿಹಾದ್‌ನಿಂದ ಹಿಂದೂ ಯುವತಿಯರು ಸಾಯುತ್ತಿದ್ದಾರೆ. ಈಗ ಲ್ಯಾಂಡ್ ಜಿಹಾದ್ ಆರಂಭವಾಗಿದೆ. ಕಳೆದ ತಿಂಗಳು ಜಿಲ್ಲೆಗೆ ಬಂದಿದ್ದ ಸಚಿವ ಜಮೀರ್ ಅಹ್ಮದ್‌, ಗೆಜೆಟ್ ಆಗಿರುವ ಆಸ್ತಿಗಳಲ್ಲಿ ವಕ್ಫ್ ಆಸ್ತಿ ಎಂದು ನಮೂದಿಸಲು ಮೌಖಿಕ ಆದೇಶ ಮಾಡಿದ್ದಾರೆ. ಈ ಮೂಲಕ ಸರ್ಕಾರದಿಂದಲೇ ಅಧಿಕೃತವಾಗಿ ಒತ್ತುವರಿ ನಡೆಯುತ್ತಿದೆ. ಈ ಹಿಂದೆ ಟಿಪ್ಪು ಸುಲ್ತಾನ್, ಔರಂಗಜೇಬನಂತಹ ಕೋಮು ಮತಾಂಧರು ಹಿಂದೂಗಳ ಭೂಮಿ, ಉದ್ಯೋಗ, ಬದುಕು ಕಿತ್ತುಕೊಂಡು ಮತಾಂತರ ಮಾಡಿದ್ದರು. ಈಗ ರೈತರ ಭೂಮಿ ಕಿತ್ತುಕೊಳ್ಳಲಾಗುತ್ತಿದೆ ಎಂದು ಅಶೋಕ್ ಕಿಡಿಕಾರಿದ್ದಾರೆ.

R Ashok
Waqf Dispute: ವಿಜಯಪುರ ರೈತರಿಗೆ ನೀಡಿರುವ ನೋಟಿಸ್ ಹಿಂಪಡೆಯಲು ಸೂಚನೆ- ಕಾನೂನು ಸಚಿವ ಎಚ್‌ಕೆ ಪಾಟೀಲ್

ಜಮೀರ್ ಆಧುನಿಕ ಟಿಪ್ಪು ಸುಲ್ತಾನ್

ಲ್ಯಾಂಡ್ ಜಿಹಾದ್ ಮೂಲಕ ಸಚಿವ ಜಮೀರ್ ಅಹ್ಮದ್‌, ಆಧುನಿಕ ಟಿಪ್ಪು ಸುಲ್ತಾನ್ ಆಗಲು ಹೊರಟಿದ್ದಾರೆ. ಈ ರೀತಿಯಾದರೂ ಭೂಮಿ ಕಸಿದು, ಸಿಎಂ‌ ಆಗುವ ಯೋಜನೆ ರೂಪಿಸಲಾಗಿದೆ. ಒಂದು ಕಡೆ ಸಿಎಂ ಸಿದ್ದರಾಮಯ್ಯ ಮುಡಾ ನಿವೇಶನ ಲೂಟಿ ಮಾಡುತ್ತಾರೆ. ಮತ್ತೊಂದು ಕಡೆ ಮಲ್ಲಿಕಾರ್ಜುನ ಖರ್ಗೆ ಕುಟುಂಬ ಸಿಎ ನಿವೇಶನ ಲೂಟಿ ಮಾಡುತ್ತದೆ. ಈಗ ಜಮೀರ್ ಅಹಮದ್ ಕೂಡ ಈ ಪಟ್ಟಿಗೆ ಸೇರಿ ಭೂಮಿ ಕೊಳ್ಳೆ ಹೊಡೆದು ವಕ್ಫ್‌ಗೆ ಸೇರಿಸಲು ತಂತ್ರ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ಅಲ್ಲದೆ ವಕ್ಫ್ ಆಸ್ತಿ ಹೆಸರಿನಲ್ಲಿ ಲ್ಯಾಂಡ್ ಜಿಹಾದ್ ಮಾಡಲು ಹೊರಟಿರುವ ಕಾಂಗ್ರೆಸ್‌ ಸರ್ಕಾರದ ದೌರ್ಜನ್ಯ ವಿರೋಧಿಸಿ ವಿಜಯಪುರದ ರೈತರು ಈ ವರ್ಷ ದೀಪಾವಳಿ ಆಚರಿಸದಿರಲು ನಿರ್ಧರಿಸಿದ್ದಾರೆ. ಅನ್ನ ನೀಡುವ ರೈತರ ಭೂಮಿಗೆ ಕನ್ನ ಹಾಕಿ, ರೈತರ ಮನೆ ದೀಪ ಕಸಿದುಕೊಂಡ ಕಾಂಗ್ರೆಸ್ ಸರ್ಕಾರಕ್ಕೆ ಅನ್ನದಾತರ ಶಾಪ ತಟ್ಟದೇ ಇರದು ಎಂದು ಅಶೋಕ್ ಕಿಡಿಕಾರಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com