ಒಳಮೀಸಲಾತಿ: ಶೀಘ್ರದಲ್ಲೇ ಏಕಸದಸ್ಯ ಆಯೋಗ ರಚನೆ, 3 ತಿಂಗಳಲ್ಲೇ ಜಾರಿಗೆ ಕ್ರಮ

ನಿನ್ನೆ ನಡೆದ ಸಚಿವ ಸಂಪುಟದಲ್ಲಿ ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ನೀಡುವ ನಿರ್ಣಯವನ್ನು ಕೈಗೊಂಡಿದ್ದೇವೆ.
Siddaramaiah
ಸಿದ್ದರಾಮಯ್ಯANI
Updated on

ಬೆಂಗಳೂರು: ಪರಿಶಿಷ್ಟ ಜಾತಿಗಳಲ್ಲಿ(ಎಸ್‌ಸಿ) ಒಳಮೀಸಲಾತಿ ಒದಗಿಸಲು ಪ್ರಾಯೋಗಿಕ ದತ್ತಾಂಶಗಳನ್ನು ಸಂಗ್ರಹಿಸಲು ಶೀಘ್ರದಲ್ಲೇ ಏಕಸದಸ್ಯ ಆಯೋಗವನ್ನು ರಚಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಹೇಳಿದ್ದಾರೆ.

ನಿನ್ನೆ ನಡೆದ ಸಚಿವ ಸಂಪುಟದಲ್ಲಿ ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ನೀಡುವ ನಿರ್ಣಯವನ್ನು ಕೈಗೊಂಡಿದ್ದೇವೆ. ಮೀಸಲಾತಿಯ ಹಂಚಿಕೆ, ಸುಪ್ರೀಂ ಕೋರ್ಟ್‌ನ ಆದೇಶ ಪಾಲನೆ ಹಾಗೂ ಇನ್ನಿತರೆ ವಿಷಯಗಳಲ್ಲಿ ಸೂಕ್ತ ನಿರ್ಣಯಗಳನ್ನು ಕೈಗೊಳ್ಳಲು ಅನುಕೂಲವಾಗಲಿ ಎಂಬ ಉದ್ದೇಶದಿಂದ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿಗಳ ನೇತೃತ್ವದ ಏಕಸದಸ್ಯ ಆಯೋಗ ರಚನೆಗೆ ತೀರ್ಮಾನಿಸಲಾಗಿದೆ ಎಂದು ಸಿಎಂ ತಿಳಿಸಿದ್ದಾರೆ.

ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಈ ಆಯೋಗಕ್ಕೆ ವರದಿ ಸಲ್ಲಿಸಲು ಮೂರು ತಿಂಗಳ ಸಮಯ ನಿಗದಿ ಪಡಿಸಲಾಗಿದ್ದು, ವರದಿ ಸಲ್ಲಿಕೆಯಾಗುವವರೆಗೆ ರಾಜ್ಯ ಸಿವಿಲ್‌ ಸೇವೆಗಳಲ್ಲಿನ ಮೀಸಲಾತಿ ಅನ್ವಯವಾಗುವ ವೃಂದಗಳ ಹುದ್ದೆಗಳಿಗೆ ನೇರ ನೇಮಕಾತಿ ಮಾಡಲು ಹೊಸದಾಗಿ ಯಾವುದೇ ಅಧಿಸೂಚನೆಯನ್ನು ಹೊರಡಿಸಬಾರದು ಎಂಬ ನಿರ್ಧಾರಕ್ಕೆ ಬರಲಾಗಿದೆ ಎಂದರು.

Siddaramaiah
ಎಸ್‌ಸಿ ಒಳ ಮೀಸಲಾತಿ ಜಾರಿಗೆ ಸಚಿವ ಸಂಪುಟ ಅಸ್ತು; ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ಆಯೋಗ ರಚನೆ

"ಯಾವುದೇ ಪ್ರಾಯೋಗಿಕ ಡೇಟಾ ಇಲ್ಲ ಎಂದು ಕೆಲವರು ಅಭಿಪ್ರಾಯಪಟ್ಟಿದ್ದಾರೆ. ಎಸ್‌ಸಿಗಳ ಒಂದು ವಿಭಾಗ, ವಿಶೇಷವಾಗಿ 'ಎಸ್‌ಸಿ ಎಡ'ಕ್ಕೆ ಸೇರಿದ ಅನೇಕ ಸಮುದಾಯಗಳು ಇನ್ನೂ ಅಂಚಿನಲ್ಲಿರುವಾಗ ಕೆಲವು ಪ್ರಭಾವಿ ಉಪ-ಜಾತಿಗಳು ಮಾತ್ರ ಬಹುಪಾಲು ಪ್ರಯೋಜನಗಳನ್ನು ಕಸಿದುಕೊಳ್ಳುತ್ತಿವೆ ಎಂದು ಆರೋಪಿಸಿ ಆಂತರಿಕ ಮೀಸಲಾತಿಗೆ ಒತ್ತಾಯಿಸುತ್ತಿದ್ದಾರೆ ಎಂದರು.

ಈ ವಿಚಾರವನ್ನು ನಿನ್ನೆಯ ಸಚಿವ ಸಂಪುಟ ಸಭೆಯ ನಂತರ ಮಾಧ್ಯಮಗಳಿಗೆ ಸಂಕ್ಷಿಪ್ತವಾಗಿ ವಿವರಿಸಲಾಗಿದೆ. ಆದಾಗ್ಯೂ, ಕೆಲವು ಪತ್ರಿಕೆಗಳಲ್ಲಿ ಪ್ರಕಟಗೊಂಡಿರುವ ಸುದ್ದಿ ಉದ್ಯೋಗಾಕಾಂಕ್ಷಿಗಳಲ್ಲಿ ಗೊಂದಲಕ್ಕೆ ಕಾರಣವಾಗಿರುವುದು ನನ್ನ ಗಮನಕ್ಕೆ ಬಂದಿರುತ್ತದೆ. ಈಗಾಗಲೇ ಪ್ರಕಟಗೊಂಡಿರುವ ನೇಮಕಾತಿ ಅಧಿಸೂಚನೆಗಳಿಗೆ ಸಂಬಂಧಿಸಿದಂತೆ ಅರ್ಜಿ ಸಲ್ಲಿಸಿ, ಪರೀಕ್ಷೆಗೆ ತಯಾರಿ ನಡೆಸುತ್ತಿರುವವರು ಯಾವುದೇ ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ. ಚಾಲ್ತಿಯಲ್ಲಿರುವ ನೇಮಕ ಪ್ರಕ್ರಿಯೆಗಳು ಮುಂದುವರಿಯಲಿದೆ. ಹೊಸ ನೇಮಕಾತಿ ಪ್ರಕ್ರಿಯೆಗಳಿಗೆ ಸಂಬಂಧಿಸಿದಂತೆ ಸೀಮಿತವಾಗಿ ಸಂಪುಟದಲ್ಲಿ ನಿರ್ಣಯ ಕೈಗೊಂಡಿದ್ದು, ಸರ್ಕಾರವು ಎಲ್ಲಾ ನೇಮಕಾತಿಗಳನ್ನು ಸ್ಥಗಿತಗೊಳಿಸಿಲ್ಲ ಎಂಬುದನ್ನು ಈ ಮೂಲಕ ಸ್ಪಷ್ಟಪಡಿಸುತ್ತಿದ್ದೇನೆ ಎಂದು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com