Karnataka Weather: ಮುಂದಿನ 5 ದಿನ ರಾಜ್ಯಾದ್ಯಂತ ವ್ಯಾಪಕ ಮಳೆ; ಹವಾಮಾನ ವರದಿ

ಮುಂದಿನ 5 ದಿನಗಳಲ್ಲಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಭಾರಿಮಳೆಯಾಗುವ ಸಾಧ್ಯತೆ ಇದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿಗಾ ಕೇಂದ್ರ ಮಾಹಿತಿ ನೀಡಿದೆ.
Karnataka Rains
ಸಾಂಕೇತಿಕ ಚಿತ್ರ
Updated on

ಬೆಂಗಳೂರು: ಮುಂದಿನ ಐದು ದಿನಗಳ ಕಾಲ ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ವರದಿ ಉಲ್ಲೇಖಿಸಿ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿಗಾ ಕೇಂದ್ರ ಮಾಹಿತಿ ನೀಡಿದೆ.

ರಾಜಧಾನಿ ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಮಳೆಯ ಅಬ್ಬರ ಪ್ರಸ್ತುತ ತಗ್ಗಿದೆ. ಆದರೆ ಮುಂದಿನ 5 ದಿನಗಳಲ್ಲಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಭಾರಿಮಳೆಯಾಗುವ ಸಾಧ್ಯತೆ ಇದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿಗಾ ಕೇಂದ್ರ ಮಾಹಿತಿ ನೀಡಿದೆ.

Karnataka Rains
ರಾಜ್ಯದ 153 ತಾಲ್ಲೂಕುಗಳಲ್ಲಿ ಅಧಿಕ ಮಳೆ: ಅಕಾಲಿಕ ಮಳೆಯಿಂದ ನೆಲಕಚ್ಚಿದ ಬೆಳೆ, ಸಂಕಷ್ಟದಲ್ಲಿ ರೈತರು!

ರಾಜ್ಯದ ದಕ್ಷಿಣ ಒಳನಾಡು, ಕರಾವಳಿ ಜಿಲ್ಲೆಗಳಿಗೆ ಅಕ್ಟೋಬರ್ 31 ರಿಂದ ನವೆಂಬರ್ 2 ರವರೆಗೆ ಭಾರಿ ಮಳೆಯಾಗುವ ನಿರೀಕ್ಷೆಯಿದ್ದು, ಇನ್ನುಳಿದ ದಿನಗಳಲ್ಲಿ ಮಳೆ ಕಡಿಮೆ ಇರುವ ಸಾಧ್ಯತೆಯಿದೆ. ಅಂತೆಯೇ ಉತ್ತರ ಒಳನಾಡು ಜಿಲ್ಲೆಗಳಿಗೆ ನವೆಂಬರ್ 1 ಮತ್ತು ನವೆಂಬರ್ 2 ರಂದು ಭಾರಿ ಮಳೆಯಾಗುವ ನಿರೀಕ್ಷೆಯಿದೆ. ಇನ್ನುಳಿದ ದಿನಗಳಲ್ಲಿ ಮಳೆ ಕಡಿಮೆ ಇರುವ ಸಾಧ್ಯತೆಯಿದೆ ಎಂದು ನೈಸರ್ಗಿಕ ವಿಕೋಪ ನಿಗಾ ಕೇಂದ್ರ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಮಾಹಿತಿ ಹಂಚಿಕೊಂಡಿದೆ.

ಯಾವ ಜಿಲ್ಲೆಗಳಲ್ಲಿ ಮಳೆ

ನಾಳೆ ಅಂದರೆ ಅಕ್ಟೋಬರ್ 31 ಧಾರವಾಡ, ಹಾವೇರಿ, ಕಲಬುರಗಿ, ಯಾದಗಿರಿ ಜಿಲ್ಲೆಗಳಲ್ಲಿ ತುಂತುರು ಮಳೆಯಾಗಲಿದ್ದು, ನವೆಂಬರ್‌ 1 ಮತ್ತು 2ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ, ಮೈಸೂರು, ಮಂಡ್ಯ, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ.

ಅಲ್ಲದೆ ಬೆಂಗಳೂರು, ಚಿತ್ರದುರ್ಗ, ದಾವಣಗೆರೆ, ಕೋಲಾರ, ರಾಮನಗರ, ವಿಜಯನಗರ, ಧಾರವಾಡ, ಬೀದರ್, ಬೆಳಗಾವಿ, ಯಾದಗಿರಿ, ಕಲಬುರಗಿ ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಮಳೆಯೊಂದಿಗೆ ಬೆಳಿಗ್ಗೆ ಮತ್ತು ಸಂಜೆ ಸಮಯದಲ್ಲಿ ಚಳಿಯೂ ಇರಲಿದೆ ಎಂದು ಇಲಾಖೆ ತಿಳಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com