ಕೌಶಲ್ಯ ಆಧಾರಿತ ಉದ್ಯೋಗ ಸೃಷ್ಟಿಗೆ ಪ್ರಧಾನಿ ಮೋದಿ ಒತ್ತು: ಹೆಚ್ ಡಿ ಕುಮಾರಸ್ವಾಮಿ

ಪ್ರಧಾನ ಮಂತ್ರಿಗಳ ಉದ್ಯೋಗ ಮೇಳದ (ರೋಜ್ ಗಾರ್ ಮೇಳ) ಎರಡನೇ ಹಂತದಲ್ಲಿ 25 ಯುವಕರಿಗೆ ನೇಮಕಾತಿ ಪತ್ರಗಳನ್ನು ವಿತರಿಸಿ ಮಾತನಾಡಿದರು.
Union Minister for Heavy Industries and Steel HD Kumaraswamy and Bangalore Rural MP Dr CN Manjunath distribute appointment letters to job aspirants in Bengaluru on Tuesday
ಬೆಂಗಳೂರಿನಲ್ಲಿ ಉದ್ಯೋಗಾಕಾಂಕ್ಷಿಗಳಿಗೆ ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್.ಡಿ.ಕುಮಾರಸ್ವಾಮಿ ಹಾಗೂ ಬೆಂಗಳೂರು ಗ್ರಾಮಾಂತರ ಸಂಸದ ಡಾ.ಸಿ.ಎನ್.ಮಂಜುನಾಥ್ ನೇಮಕಾತಿ ಪತ್ರ ವಿತರಿಸಿದರು.
Updated on

ಬೆಂಗಳೂರು: 2047ರ ವೇಳೆಗೆ ಅಭಿವೃದ್ಧಿ ಹೊಂದಿದ ಭಾರತ ಎಂಬ ಘೋಷವಾಕ್ಯವನ್ನು ಸಾಧಿಸುವ ಗುರಿಯೊಂದಿಗೆ ದೇಶದಲ್ಲಿ ಕೌಶಲ್ಯ ಆಧಾರಿತ ಉದ್ಯೋಗ ಸೃಷ್ಟಿಗೆ ಉತ್ತೇಜನ ನೀಡಲು ಪ್ರಧಾನಿ ನರೇಂದ್ರ ಮೋದಿ ಅವರು ಇತ್ತೀಚಿನ ಬಜೆಟ್‌ನಲ್ಲಿ 3 ಲಕ್ಷ ಕೋಟಿ ರೂಪಾಯಿಗಳ ಅನುದಾನ ನೀಡಿದ್ದಾರೆ ಎಂದು ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಪ್ರಧಾನ ಮಂತ್ರಿಗಳ ಉದ್ಯೋಗ ಮೇಳದ (ರೋಜ್ ಗಾರ್ ಮೇಳ) ಎರಡನೇ ಹಂತದಲ್ಲಿ 25 ಯುವಕರಿಗೆ ನೇಮಕಾತಿ ಪತ್ರಗಳನ್ನು ವಿತರಿಸಿ ಮಾತನಾಡಿದರು. ದೇಶದಾದ್ಯಂತ 40 ಸ್ಥಳಗಳಲ್ಲಿ ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳಲ್ಲಿ 51,000 ಆಯ್ದ ಯುವಕರಿಗೆ ನೇಮಕಾತಿ ಪತ್ರಗಳನ್ನು ವಿತರಿಸಲಾಯಿತು. ಬೆಂಗಳೂರಿನ ಜ್ಞಾನ ಜ್ಯೋತಿ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮಕ್ಕೆ ಪ್ರಧಾನಿ ಮೋದಿ ವರ್ಚುವಲ್ ಮೂಲಕ ಭಾಗವಹಿಸಿದ್ದರು.

ಕೇಂದ್ರ ಸರ್ಕಾರದ 12 ಇಲಾಖೆಗಳಲ್ಲಿ ನೇಮಕಾತಿ ನಡೆದಿದೆ. 2047 ರ ವೇಳೆಗೆ ಅಭಿವೃದ್ಧಿ ಹೊಂದಿದ ಭಾರತವನ್ನು ಸಾಧಿಸುವ ಗುರಿಯೊಂದಿಗೆ ಕೌಶಲ್ಯ ಆಧಾರಿತ ಉದ್ಯೋಗ ಸೃಷ್ಟಿಗೆ ಪ್ರಧಾನಿ ಮೋದಿ ಉತ್ತೇಜನ ನೀಡುತ್ತಿದ್ದಾರೆ. ಈ ಉದ್ದೇಶಕ್ಕಾಗಿ 3 ಲಕ್ಷ ಕೋಟಿ ರೂಪಾಯಿಗಳನ್ನು ಬಜೆಟ್‌ನಲ್ಲಿ ಮೀಸಲಿಡಲಾಗಿದೆ, ಇದನ್ನು ನೇರವಾಗಿ MSME ಗಳಿಗೆ ಬಿಡುಗಡೆ ಮಾಡಲಾಗುವುದು ಎಂದು ಅವರು ಹೇಳಿದರು.

ಮೇಕ್ ಇನ್ ಇಂಡಿಯಾ ಮತ್ತು ಆತ್ಮನಿರ್ಭರ್ ಭಾರತ್ ಉಪಕ್ರಮಗಳ ಅಡಿಯಲ್ಲಿ ಮೋದಿ ಉದ್ಯೋಗ ಸೃಷ್ಟಿಯನ್ನು ಉತ್ತೇಜಿಸುತ್ತಿದ್ದಾರೆ ಎಂದರು.

ಪ್ರೊಡಕ್ಷನ್ ಲಿಂಕ್ಡ್ ಇನ್ಸೆಂಟಿವ್ (PLI) ಯೋಜನೆಯು ಉದ್ಯೋಗ ವಲಯದಲ್ಲಿ ಗಣನೀಯ ಪ್ರಗತಿಯನ್ನು ಸಾಧಿಸುತ್ತಿದೆ. ಭಾರತವನ್ನು ಮೂರನೇ ಅತಿದೊಡ್ಡ ಆರ್ಥಿಕ ಶಕ್ತಿಯಾಗಿ ಪರಿವರ್ತಿಸಲು ಸಹಾಯ ಮಾಡುತ್ತದೆ ಎಂದು ಅವರು ಹೇಳಿದರು.

ಬೆಂಗಳೂರು ಗ್ರಾಮಾಂತರ ಸಂಸದ ಡಾ.ಸಿ.ಎನ್.ಮಂಜುನಾಥ್ ಮತ್ತು ಕರ್ನಾಟಕದ ಮುಖ್ಯ ಪೋಸ್ಟ್ ಮಾಸ್ಟರ್ ಜನರಲ್ ರಾಜೇಂದ್ರ ಕುಮಾರ್ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Union Minister for Heavy Industries and Steel HD Kumaraswamy and Bangalore Rural MP Dr CN Manjunath distribute appointment letters to job aspirants in Bengaluru on Tuesday
ಇದು ಪರಿವರ್ತಕ ಉಪಕ್ರಮ: PM ಗತಿಶಕ್ತಿ ಕೇಂದ್ರಕ್ಕೆ ಪ್ರಧಾನಿ ಮೋದಿ ದಿಢೀರ್ ಭೇಟಿ!

‘ಜಾತಿ ಗಣತಿ ವರದಿ ಎಲ್ಲಿದೆ?’

ಕಾರ್ಯಕ್ರಮ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಹೆಚ್ ಡಿ ಕುಮಾರಸ್ವಾಮಿ, ಜಾತಿ ಗಣತಿ ವರದಿಯನ್ನು ಇನ್ನೂ ಏಕೆ ರಾಜ್ಯ ಸರ್ಕಾರ ಬಿಡುಗಡೆ ಮಾಡಿಲ್ಲ ಎಂದು ಪ್ರಶ್ನಿಸಿದರು. ಮುಖ್ಯಮಂತ್ರಿ ಕಾಂತರಾಜು ವರದಿಯನ್ನು ಮತ್ತು ಜಯಪ್ರಕಾಶ್ ಹೆಗ್ಡೆಯವರ ವರದಿಯನ್ನು ಒಪ್ಪಿಕೊಂಡು ಎಷ್ಟು ದಿನವಾಯಿತು, ಇನ್ನೂ ಏಕೆ ಅದನ್ನು ಬಿಡುಗಡೆ ಮಾಡಿಲ್ಲ, ಸಿದ್ದರಾಮಯ್ಯ ನನ್ನ ವಿರುದ್ಧ ಆರೋಪ ಮಾಡುತ್ತಿದ್ದಾರೆ, ಆದರೆ ಎರಡೂ ವರದಿಗಳನ್ನು ಇಟ್ಟುಕೊಂಡು ಕುಳಿತಿದ್ದಾರೆ. ಸಂಪುಟದ ಮುಂದೆ ತರುತ್ತೇವೆ ಎಂದು ಹೇಳುತ್ತಲೇ ಇದ್ದಾರೆ. ಉಪ ಸಮಿತಿಗಳು ಮತ್ತು ಆಯೋಗಗಳ ಬಗ್ಗೆ ಚರ್ಚೆಗಳು ನಡೆಯುತ್ತಿವೆ ಎಂದು ಆರೋಪಿಸಿದರು.

ಫಲಿತಾಂಶ ನಂತರ ಪ್ರತಿಕ್ರಿಯಿಸುವೆ

ಚುನಾವಣಾ ಪ್ರಚಾರದ ವೇಳೆ ಕಾಂಗ್ರೆಸ್ ನಾಯಕರು ತಮ್ಮ ಕುಟುಂಬದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡುತ್ತಿದ್ದಾರೆ. ಹೆಚ್.ಡಿ.ದೇವೇಗೌಡರು ವೀಲ್ ಚೇರ್ ಹಾಗೂ ಆಂಬ್ಯುಲೆನ್ಸ್ ನಲ್ಲಿ ಪ್ರಚಾರ ಮಾಡುತ್ತಾರೆ ಎಂದು ಹೇಳಿಕೆ ನೀಡಿದ್ದಾರೆ. ಕಾಂಗ್ರೆಸ್ ನವರು ಅವರ ಸಾವನ್ನು ಬಯಸುತ್ತಿದ್ದಾರೆ. ನಾನು ಈಗ ಈ ಬಗ್ಗೆ ಮಾತನಾಡುವುದಿಲ್ಲ. ಅವರ ಎಲ್ಲಾ ಹೇಳಿಕೆಗಳನ್ನು ಗಮನಿಸಿದ್ದೇನೆ. ಚನ್ನಪಟ್ಟಣ ಉಪ ಚುನಾವಣೆ ಫಲಿತಾಂಶ ನಂತರ ಪ್ರತಿಕ್ರಿಯಿಸುತ್ತೇನೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com