
ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ (ಬಿಎಂಟಿಸಿ) ಬಸ್ ಚಾಲಕ ಮತ್ತು ಕಂಡಕ್ಟರ್ ಮೇಲೆ ನಡೆದಿದ್ದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನುಪ ದೇವರ ಜೀವನಹಳ್ಳಿ (ಡಿಜೆ ಹಳ್ಳಿ) ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.
ಬಂಧಿತರನ್ನು ನವೀನ್ (19) ಮತ್ತು ಕಾರ್ತಿಕ್ (27) ಎಂದು ಗುರುತಿಸಲಾಗಿದೆ. ಭಾನುವಾರ ಸಂಜೆ 5.30ರ ಸುಮಾರಿಗೆ ಮದ್ಯದ ಅಮಲಿನಲ್ಲಿದ್ದ ನವೀನ್ ಮತ್ತು ಕಾರ್ತಿಕ್ ಬಿಎಂಟಿಸಿ ಬಸ್ ಚಾಲಕ ಗಗನ್ ಮತ್ತು ಕಂಡಕ್ಟರ್ ಶಿವಕುಮಾರ್ ಮೇಲೆ ಹಲ್ಲೆ ನಡೆಸಿದ್ದರು.
ಯಲಹಂಕ ಹಾಗೂ ಶಿವಾಜಿನಗರ ಮಾರ್ಗದ ಬಸ್ ಅನ್ನು ಸಂಜೆ 5.25ರ ಸುಮಾರಿಗೆ ಟ್ಯಾನರಿ ರಸ್ತೆಯ ಕೆನರಾ ಬ್ಯಾಂಕ್ ನಿಲ್ದಾಣದಲ್ಲಿ ನಿಲುಗಡೆ ಮಾಡಲಾಗಿತ್ತು. ಈ ವೇಳೆ ಅಲ್ಲಿಗೆ ವಾಹನದಲ್ಲಿ ಬಂದಿದ್ದ ಆರೋಪಿಗಳು, ಒಳ ಪ್ರವೇಶಿಸಿ ಗಗನ್ ಅವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿದ್ದರು. ಈ ವೇಳೆ ತಡೆಯಲು ಮುಂದಾದ ಶಿವಕುಮಾರ್ ಅವರನ್ನೂ ಸಹ ಬಸ್‌ನಿಂದ ಹೊರಗಡೆ ಎಳೆದು ಹಲ್ಲೆ ಮಾಡಿದ್ದರು. ಈ ಎಲ್ಲ ದೃಶ್ಯಗಳು ಸಮೀಪದಲ್ಲಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದ ನಂತರ, ಪೊಲೀಸರು ಬುಧವಾರ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಇಬ್ಬರ ವಿರುದ್ಧ ಬಿಎನ್‌ಎಸ್‌ನ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
Advertisement