‘ಸುವರ್ಣ ಮಹೋತ್ಸವ’ ಪ್ರಶಸ್ತಿ ಮೊತ್ತ 1 ಲಕ್ಷಕ್ಕೆ ಏರಿಕೆ: ಸಚಿವ ಶಿವರಾಜ ತಂಗಡಗಿ

ಕರ್ನಾಟಕ ಸಂಭ್ರಮ - 50 ಸುವರ್ಣ ಮಹೋತ್ಸವ ಆಚರಣೆಯ ಅಂಗವಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು 50 ಮಹಿಳಾ ಸಾಧಕಿಯರಿಗೆ ಮತ್ತು 50 ಪುರುಷ ಸಾಧಕರಿಗೆ ಸುವರ್ಣ ಮಹೋತ್ಸವ ಪ್ರಶಸ್ತಿಯನ್ನು ಈಗಾಗಲೇ ಘೋಷಣೆ ಮಾಡಿದೆ.
ಸಚಿವ ಶಿವರಾಜ ತಂಗಡಗಿ
ಸಚಿವ ಶಿವರಾಜ ತಂಗಡಗಿ
Updated on

ಬೆಂಗಳೂರು: ಸುವರ್ಣ ಮಹೋತ್ಸವ ಪ್ರಶಸ್ತಿಯ ಮೊತ್ತವನ್ನು 50 ಸಾವಿರ ರೂಪಾಯಿಯಿಂದ 1 ಲಕ್ಷ ರೂಪಾಯಿಗೆ ಹೆಚ್ಚಿಸಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ಅವರು ಗುರುವಾರ ಘೋಷಿಸಿದ್ದಾರೆ.

ಕರ್ನಾಟಕ ಸಂಭ್ರಮ - 50 ಸುವರ್ಣ ಮಹೋತ್ಸವ ಆಚರಣೆಯ ಅಂಗವಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು 50 ಮಹಿಳಾ ಸಾಧಕಿಯರಿಗೆ ಮತ್ತು 50 ಪುರುಷ ಸಾಧಕರಿಗೆ ಸುವರ್ಣ ಮಹೋತ್ಸವ ಪ್ರಶಸ್ತಿಯನ್ನು ಈಗಾಗಲೇ ಘೋಷಣೆ ಮಾಡಿದ್ದು, ಇಂದು ಪ್ರಶಸ್ತಿ ಮೊತ್ತವನ್ನು 50,000 ರೂ.ದಿಂದ 1 ಲಕ್ಷ ರೂಪಾಯಿಗೆ ಹೆಚ್ಚಿಸಲಾಗಿದೆ.

ಇದೊಂದು ಐತಿಹಾಸಿಕ ಸಂದರ್ಭ ಆಗಿರುವುದರಿಂದ ಈ ಪ್ರಶಸ್ತಿ ಮೊತ್ತವನ್ನು 50,000 ದಿಂದ 1 ಲಕ್ಷ ರೂ.ಗೆ ಹೆಚ್ಚಿಸುವುದು ಸೂಕ್ತವೆಂದು ಸರ್ಕಾರ ಅಭಿಪ್ರಾಯ ಪಟ್ಟಿರುವುದರಿಂದ ಸುವರ್ಣ ಮಹೋತ್ಸವ ಪ್ರಶಸ್ತಿ ಮೊತ್ತವನ್ನು ಒಂದು ಲಕ್ಷ ರೂ.ಗೆ ಹೆಚ್ಚಿಸಲಾಗಿದೆ ಎಂದು ಶಿವರಾಜ ತಂಗಡಗಿ ತಿಳಿಸಿದ್ದಾರೆ.

ಸಚಿವ ಶಿವರಾಜ ತಂಗಡಗಿ
ಕರ್ನಾಟಕ ಸುವರ್ಣ ಸಂಭ್ರಮ-50 ಸಮಾರೋಪ: ಮನೆ-ಮನೆಯಲ್ಲಿ ಕನ್ನಡ ಬಾವುಟ ಹಾರಿಸುವಂತೆ ಸಿಎಂ ಮನವಿ

ಇದಕ್ಕೆ ಕಾರಣಕರ್ತರಾದ ಸಿಎಂ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದು ತಂಗಡಗಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com