ಶಕ್ತಿಯೋಜನೆ ಪರಿಷ್ಕರಣೆ ಮಾಡುವ ವಿಚಾರ ಸರ್ಕಾರದ ಮುಂದಿಲ್ಲ: ಸಿಎಂ ಸಿದ್ದರಾಮಯ್ಯ

ಶಕ್ತಿ ಯೋಜನೆ ಪರಿಷ್ಕರಣೆ ಮಾಡುವ ವಿಚಾರ ಸರ್ಕಾರದ ಮುಂದೆ ಇಲ್ಲ. ನಿನ್ನೆಯ ಕಾರ್ಯಕ್ರದಲ್ಲಿ ನಾನು ಇರಲಿಲ್ಲ. ನಾನು ಮಂತ್ರಿಗಳ ಜೊತೆ ಮಾತಾಡುತ್ತೇನೆ. ಪರಿಷ್ಕರಣೆಯ ಯಾವುದೇ ಉದ್ದೇಶವಿಲ್ಲ.
Representational image
ಸಾಂದರ್ಭಿಕ ಚಿತ್ರ
Updated on

ಬೆಂಗಳೂರು: ರಾಜ್ಯದಲ್ಲಿ ಮಹಿಳೆಯರ ಉಚಿತ ಪ್ರಯಾಣಕ್ಕೆ ಅನುಕೂಲ ಮಾಡಿಕೊಟ್ಟಿರುವ ರಾಜ್ಯ ಸರ್ಕಾರದ ಶಕ್ತಿ ಯೋಜನೆ ಸ್ಥಗಿತವಾಗುತ್ತದೆಯೇ ಎಂಬ ಸುದ್ದಿಗಳು ಹರಿದಾಡುತ್ತಿವೆ, ಇದರ ಬೆನ್ನಲ್ಲಿಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಕ್ತಿ ಯೋಜನೆ ಬಗ್ಗೆ ಬಿಗ್ ಅಪ್ಡೇಟ್ ನೀಡಿದ್ದಾರೆ.

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಶಕ್ತಿ ಯೋಜನೆ ಪರಿಷ್ಕರಣೆ ಮಾಡುವ ವಿಚಾರ ಸರ್ಕಾರದ ಮುಂದೆ ಇಲ್ಲ ಎಂದು ಡಿಸಿಎಂ ಹೇಳಿಕೆ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ಶಕ್ತಿ ಯೋಜನೆ ಪರಿಷ್ಕರಣೆ ಮಾಡುವ ವಿಚಾರ ಸರ್ಕಾರದ ಮುಂದೆ ಇಲ್ಲ. ನಿನ್ನೆಯ ಕಾರ್ಯಕ್ರದಲ್ಲಿ ನಾನು ಇರಲಿಲ್ಲ. ನಾನು ಮಂತ್ರಿಗಳ ಜೊತೆ ಮಾತಾಡುತ್ತೇನೆ. ಪರಿಷ್ಕರಣೆಯ ಯಾವುದೇ ಉದ್ದೇಶವಿಲ್ಲ. ಆ ರೀತಿ ಪ್ರಸ್ತಾಪವೂ ಸರ್ಕಾರದ ಮುಂದೆ ಇಲ್ಲ ಎಂದು ಪ್ರತಿಕ್ರಿಯಿಸಿದರು. ರಾಜ್ಯದಲ್ಲಿ ಜಾರಿಯಲ್ಲಿರುವ ಮಹಿಳೆಯರ ಶಕ್ತಿ ಯೋಜನೆ ಪರಿಷ್ಕರಣೆ ಉದ್ದೇಶ ಇಲ್ಲ. ಸದ್ಯದಲ್ಲಿ ಅಂತಹ ಯಾವುದೇ ಸರ್ಕಾರದ ಹಂತದಲ್ಲಿ ಇಲ್ಲ. ಕೆಲ‌ ಮಹಿಳೆಯರು ಹಾಗೇ (ಯೋಜನೆ ಸವಲತ್ತುಗಳು ಬೇಡ) ಹೇಳಿದ್ದಾರೆ ಅಂತ ಹೇಳಿಕೆ ನೀಡಿದ್ದಾರೆ. ನಾನು ಇರಲಿಲ್ಲ‌ ಆವಾಗ. ಆದ್ದರಿಂದ ರಾಜ್ಯದಲ್ಲಿ ಶಕ್ತಿ ಯೋಜನೆ ಪರಿಷ್ಕರಣೆ ಪ್ರಸ್ತಾಪ ಇಲ್ಲ ಎಂದು ಸ್ಪಷ್ಟನೆಯನ್ನು ನೀಡಿದ್ದಾರೆ.

ವಕ್ಫ್ ಆಸ್ತಿ ಗೊಂದಲವನ್ನು ಮುಂದಿಟ್ಟುಕೊಂಡು ನ.4ರಂದು ಬಿಜೆಪಿ ಪ್ರತಿಭಟನೆ ಮಾಡುತ್ತಿರುವ ವಿಚಾರದ ಬಗ್ಗೆ ಮಾತನಾಡಿ, ಬಿಜೆಪಿಯವರು ರಾಜಕೀಯಕ್ಕಾಗಿ ಪ್ರತುಭಟನೆ ಮಾಡುತ್ತಿದ್ದಾರೆ. ಅವರ ಕಾಲದಲ್ಲೂ ನೋಟೀಸ್ ಕೊಟ್ಟಿದ್ದರು ಅದಕ್ಕೆ ಏನು ಹೇಳ್ತಾರೆ.? ಅವರ ಕಾಲದಲ್ಲಿ 200ಕ್ಕೂ ಹೆಚ್ಚು ನೋಟೀಸ್ ಕೊಟ್ಟಿದ್ದರು. ಈ ಇಬ್ಬಂದಿ ರಾಜಕೀಯ ಮಾಡಬಾರದು. ಅವರ ಕಾಲದಲ್ಲಿ ನೋಟೀಸ್ ಕೊಟ್ಟು ಪ್ರಾರಂಭ ಮಾಡಿದ್ದರು. ಆದರೆ, ಈಗ ನಾನು ಹೇಳಿದ್ದೇನೆ ನೋಟೀಸ್ ವಾಪಸ್ ತಗೋತೀವಿ ಅಂತ. ಹಾಗಿದ್ದಾಗ ಸಮಸ್ಯೆ ಎಲ್ಲಿದೆ ಹೇಳಿ. ಒಂದು ವೇಳೆ ನೋಟೀಸ್ ಕೊಟ್ಟಿದ್ದರೂ ವಾಪಸ್ ತೆಗೆದುಕೊಳ್ಳುತ್ತೇವೆ. ರಾಜ್ಯದಲ್ಲಿ ಯಾರನ್ನೂ ಒಕ್ಕಲೆಬ್ಬಿಸಲ್ಲ ಅಂತ ಹೇಳಿದ್ದೇವೆ ಎಂದು ಹೇಳಿದರು.

Representational image
ರಾಜ್ಯದ ಮಹಿಳೆಯರು ಡಿಕೆಶಿ ಕನಸಲ್ಲಿ ಬಂದು ಶಕ್ತಿ ಯೋಜನೆ ನಿಲ್ಲಿಸೋಕೆ ಹೇಳಿದ್ರಾ? ಕುಮಾರಸ್ವಾಮಿ ವ್ಯಂಗ್ಯ

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com