Sexual assault case: ಬಿಜೆಪಿ ನಾಯಕ ಅರುಣ್ ಕುಮಾರ್ ಪುತ್ತಿಲ ವಿರುದ್ಧ FIR

ಅರುಣ್ ಕುಮಾರ್ ಪುತ್ತಿಲ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪದಡಿ ದಕ್ಷಿಣ ಕನ್ನಡ ಮಹಿಳಾ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್​ ದಾಖಲಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರಿನಲ್ಲಿರುವ ದಕ್ಷಿಣ ಕನ್ನಡ ಮಹಿಳಾ ಠಾಣೆಯಲ್ಲಿ ಐಪಿಸಿ 417, 354A, 506 ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
Arun Kumar Puthila
ಅರುಣ್ ಕುಮಾರ್ ಪುತ್ತಿಲ
Updated on

ಮಂಗಳೂರು: ಬಿಜೆಪಿ ನಾಯಕ ಅರುಣ್ ಕುಮಾರ್ ಪುತ್ತಿಲ (Arun Kumar Puthila) ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪದಡಿ ಎಫ್ ಐಆರ್ ದಾಖಲಾಗಿದೆ.

ಹೌದು.. ಅರುಣ್ ಕುಮಾರ್ ಪುತ್ತಿಲ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪದಡಿ ದಕ್ಷಿಣ ಕನ್ನಡ ಮಹಿಳಾ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್​ ದಾಖಲಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರಿನಲ್ಲಿರುವ ದಕ್ಷಿಣ ಕನ್ನಡ ಮಹಿಳಾ ಠಾಣೆಯಲ್ಲಿ ಐಪಿಸಿ 417, 354A, 506 ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಪೊಲೀಸ್ ಮೂಲಗಳ ಪ್ರಕಾರ 47 ವರ್ಷದ ಮಹಿಳೆ ತಮ್ಮ ಮೇಲೆ ಅರುಣ್ ಕುಮಾರ್ ಪುತ್ತಿಲ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪ ಮಾಡಿದ್ದು, ದೂರಿನಲ್ಲಿ ಬೆಂಗಳೂರಿನ ಪೈ ವಿಸ್ತಾ ಹೋಟೆಲ್​ನಲ್ಲಿ ತಮ್ಮ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದಾರೆ.

Arun Kumar Puthila
ದಕ್ಷಿಣ ಕನ್ನಡದಲ್ಲಿ ಬಿಜೆಪಿಗೆ ಮತ್ತಷ್ಟು ಬಲ: ಪಕ್ಷ ಸೇರಿದ ಹಿಂದುತ್ವ ನಾಯಕ ಅರುಣ್ ಕುಮಾರ್ ಪುತ್ತಿಲ, ಪುತ್ತಿಲ ಪರಿವಾರ ವಿಲೀನ!

2023 ಜೂನ್​ನಲ್ಲಿ ಬೆಂಗಳೂರಿನ ಪೈ ವಿಸ್ತಾ ಹೋಟೆಲ್​ನಲ್ಲಿ ಲೈಂಗಿಕ ದೌರ್ಜನ್ಯವೆಸಗಿ ಫೋಟೊ, ಸೆಲ್ಫಿ, ವಿಡಿಯೋ ಮಾಡಿ ಬ್ಲ್ಯಾಕ್​ಮೇಲ್ ಮಾಡಿದ್ದಾರೆಂದು ಮಹಿಳೆ ಆರೋಪಿಸಿದ್ದಾರೆ.

ಅರುಣ್ ಕುಮಾರ್ ಪುತ್ತಿಲ ಪುತ್ತೂರು ವಿಧಾನಸಭಾ ಚುನಾವಣೆಗೆ ಹಿಂದುತ್ವದ ಹೆಸರಿನಲ್ಲಿ ಬಿಜೆಪಿ ವಿರುದ್ಧ ಬಂಡಾಯ ಸ್ಪರ್ಧೆ ಮಾಡಿದ್ದರು. ಪುತ್ತಿಲಗೆ ಅಭಿಮಾನಿ ಆಗಿ ಸಾಮಾಜಿಕ ಜಾಲತಾಣದಲ್ಲಿ ಫಾಲೋ ಮಾಡಿದ್ದಾಗಿ ಮಹಿಳೆ ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com