ಸೆ. 6 ಗೌರಿ ಹಬ್ಬದಂದು ಎತ್ತಿನಹೊಳೆ ಯೋಜನೆ ಏತ ಕಾಮಗಾರಿ ಉದ್ಘಾಟನೆ

ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ರಾಮನಗರ, ತುಮಕೂರು, ಹಾಸನ ಜಿಲ್ಲೆಗಳು ಈ ಯೋಜನೆಯನ್ನು ಎದುರು ನೋಡುತ್ತಿವೆ. ಅನೇಕ ನಾಯಕರು ಈ ಯೋಜನೆಗೆ ಹೋರಾಟ ಮಾಡಿದ್ದು, ಅನೇಕ ಪಕ್ಷಗಳು ಇದಕ್ಕೆ ಸಹಕಾರ ನೀಡಿವೆ.
ಡಿಸಿಎಂ ಡಿಕೆ ಶಿವಕುಮಾರ್
ಡಿಸಿಎಂ ಡಿಕೆ ಶಿವಕುಮಾರ್
Updated on

ಬೆಂಗಳೂರು: ರಾಜ್ಯದ 7 ಜಿಲ್ಲೆಗಳಿಗೆ ಕುಡಿಯುವ ನೀರು ಹಾಗೂ ಕೆರೆ ತುಂಬಿಸುವ ಮಹತ್ವಾಕಾಂಕ್ಷಿಯ ಎತ್ತಿನಹೊಳೆ ಯೋಜನೆಯ ಏತ ಕಾಮಗಾರಿಗಳನ್ನು ಮುಖ್ಯಮಂತ್ರಿಗಳು ಸೆ.6 ಗೌರಿ ಹಬ್ಬದಂದು ಉದ್ಘಾಟಿಸಲಿದ್ದಾರೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಭಾನುವಾರ ಹೇಳಿದರು.

ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಡಿಕೆ ಶಿವಕುಮಾರ್, ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ರಾಮನಗರ, ತುಮಕೂರು, ಹಾಸನ ಜಿಲ್ಲೆಗಳು ಈ ಯೋಜನೆಯನ್ನು ಎದುರು ನೋಡುತ್ತಿವೆ. ಅನೇಕ ನಾಯಕರು ಈ ಯೋಜನೆಗೆ ಹೋರಾಟ ಮಾಡಿದ್ದು, ಅನೇಕ ಪಕ್ಷಗಳು ಇದಕ್ಕೆ ಸಹಕಾರ ನೀಡಿವೆ. ಕಳೆದ ಒಂದು ವರ್ಷದಿಂದ ಈ ಯೋಜನೆಯನ್ನು ಸವಾಲಾಗಿ ಸ್ವೀಕರಿಸಿದ್ದೆ. ಮೊನ್ನೆಯಷ್ಟೇ ಯೋಜನೆಯ ಕಾಮಗಾರಿಗಳ ಪರೀಕ್ಷಾರ್ಥ ಕಾರ್ಯಾಚರಣೆ ಯಶಸ್ವಿಯಾಗಿರುವುದಾಗಿ ತಿಳಿಸಿದರು.

ಈ ಯೋಜನೆಯಲ್ಲಿ ನೀರನ್ನು ಪಂಪ್ ಮಾಡುವ ಮೂಲಕ ಕಾಲುವೆಗಳಿಗೆ ಹರಿಸುತ್ತಿದ್ದೇವೆ. ಈ ಯೋಜನೆ ಮಾರ್ಗದ ಮಧ್ಯೆ ಅರಣ್ಯ ಇಲಾಖೆಗೆ ಸಂಬಂಧಿಸಿದ ಜಾಗಗಳಲ್ಲಿ ಸ್ವಲ್ಪ ಸಮಸ್ಯೆ ಇದ್ದು, ಅವುಗಳನ್ನು ಬಗೆಹರಿಸಿದ್ದೇವೆ. ಈ ಜಾಗ ಹಸ್ತಾಂತರವಾದ ಬಳಿಕ ಪ್ರಮುಖ ಕಾಲುವೆಗಳಿಗೆ ನೀರು ಹರಿಯಲಿವೆ. ಈಗ ತಾತ್ಕಾಲಿಕವಾಗಿ ವಾಣಿ ವಿಲಾಸ ಅಣೆಕಟ್ಟಿಗೆ ನೀರು ಹರಿಸಲಾಗುತ್ತಿದೆ. ಯೋಜನೆಯ 7 ವಿಯರ್ ಗಳು ನೀರನ್ನು ಎತ್ತುತ್ತಿವೆ. ಈ ತಿಂಗಳ 6 ರಂದು ಉದ್ಘಾಟನೆಗೆ ಮುಖ್ಯಮಂತ್ರಿಗಳು ಒಪ್ಪಿದ್ದಾರೆ ಎಂದು ಹೇಳಿದರು.

"ಈ ಯೋಜನೆಯ ಫಲಾನುಭವಿ ಜಿಲ್ಲೆಯ ಜನರು ನೀರನ್ನು ಎತ್ತುವ ದೃಶ್ಯ ಕಣ್ತುಂಬಿಕೊಳ್ಳಬಹುದು. ಅಲ್ಲಿ ಜಾಗ ಕಿರಿದಾಗಿದ್ದರು, ಪೊಲೀಸರಿಗೆ ಹೇಳಿ ವ್ಯವಸ್ಥೆ ಮಾಡಲಾಗಿದೆ. ಇನ್ನು ಉದ್ಘಾಟನಾ ಕಾರ್ಯಕ್ರಮಕ್ಕೆ ಪಕ್ಷಬೇಧ ಮರೆತು ಎಲ್ಲ ನಾಯಕರು, ರೈತರಿಗೆ ಆಹ್ವಾನಿಸಲಾಗುವುದು. ಎಲ್ಲಾ ಜಿಲ್ಲಾ ಉಸ್ತುವಾರಿ ಸಚಿವರಿಗೆ ಆಹ್ವಾನ ನೀಡುವಂತೆ ನನ್ನ ಕಚೇರಿ ಅಧಿಕಾರಿಗಳಿಗೆ ತಿಳಿಸಿದ್ದೇನೆ. ಈ ಪವಿತ್ರವಾದ ಕಾರ್ಯಕ್ಕೆ ಬಂದು ಶುಭ ಗಳಿಗೆಗೆ ಸಾಕ್ಷಿಯಾಗಬೇಕು ಎಂದು ಮನವಿ ಮಾಡುತ್ತೇನೆ" ಎಂದು ತಿಳಿಸಿದರು.

ಡಿಸಿಎಂ ಡಿಕೆ ಶಿವಕುಮಾರ್
ಮಣ್ಣಿನ ಮಕ್ಕಳು ಎನ್ನುವವರು ಎತ್ತಿನಹೊಳೆ ಯೋಜನೆ ವಿರೋಧಿಸಿದ್ದರು: ಸಿಎಂ ಸಿದ್ದರಾಮಯ್ಯ

ಇದೇ ವೇಳೆ ಸಿಎಂ ನಿವಾಸದಲ್ಲಿ ನಡೆದ ಭೋಜನ ಕೂಟದಲ್ಲಿ ಯಾವ ವಿಚಾರ ಚರ್ಚೆಯಾಯಿತು ಎಂಬ ಸುದ್ದಿಗಾರರ ಪ್ರಶ್ನೆಗ ಉತ್ತರಿಸಿದ ಡಿಕೆ ಶಿವಕುಮಾರ್,"ಮಹಾತ್ಮಾ ಗಾಂಧೀಜಿ ಅವರು ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡು ಬೆಳಗಾವಿಯಲ್ಲಿ ನಡೆದ ಎಐಸಿಸಿ ಅಧಿವೇಶನಕ್ಕೆ ನೂರು ವರ್ಷಗಳು ಪೂರ್ಣಗೊಂಡಿವೆ. ಈಗ ಆ ಸ್ಥಾನದಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರು ಕೂತಿದ್ದಾರೆ. ಗಾಂಧೀಜಿ ಅವರು ಹಾಕಿಕೊಟ್ಟಿರುವ ಮಾರ್ಗದರ್ಶನ ವಿಶ್ವವೇ ಗಮನಿಸಿದೆ. ಇದನ್ನು ಮುಂದಿನ ಪೀಳಿಗೆಗೆ ತಿಳಿಸಬೇಕಿದೆ. ಈ ಹಿನ್ನೆಲೆಯಲ್ಲಿ ಸರ್ಕಾರದ ವತಿಯಿಂದ ಯಾವ ರೀತಿ ಕಾರ್ಯಕ್ರಮ ರೂಪಿಸಬೇಕು ಎಂಬುದರ ಬಗ್ಗೆ ಚರ್ಚೆ ಮಾಡಲಾಯಿತು. ಮುಂದಿನ ಒಂದುವಾರದಲ್ಲಿ ಕಾರ್ಯಕ್ರಮದ ರೂಪುರೇಷೆಗಳ ಬಗ್ಗೆ ವರದಿ ನೀಡುವಂತೆ ಸಚಿವರಿಗೆ ತಿಳಿಸಲಾಗಿದೆ. ಪಕ್ಷದ ವತಿಯಿಂದಲೂ ಕಾರ್ಯಕ್ರಮ ಮಾಡಲಾಗುತ್ತಿದ್ದು, ಆ ಬಗ್ಗೆ ಪಕ್ಷದ ಕಚೇರಿಯಲ್ಲಿ ಚರ್ಚೆ ಮಾಡಿದ್ದೆವು" ಎಂದು ತಿಳಿಸಿದರು.

ಕಾಲೇಜು ದಿನಗಳಲ್ಲಿ ಬಳಸಿದ್ದ ಬೈಕ್ ಮರು ವಿನ್ಯಾಸ: ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಕಾಲೇಜು ದಿನಗಳಲ್ಲಿ ಬಳಸಿದ್ದ ಯಜ್ದಿ ಬೈಕ್ ಅನ್ನು ಮರು ವಿನ್ಯಾಸಗೊಳಿಸಿ ಅವರಿಗೆ ನೀಡಲಾಗಿದೆ. ಈ ಬಗ್ಗೆ ಮಾತನಾಡಿದ ಶಿವಕುಮಾರ್, "ನಾನು ಕಾಲೇಜು ದಿನಗಳಲ್ಲಿ ಈ ಬೈಕ್ ಓಡಿಸುತ್ತಿದ್ದೆ. ಕನಕಪುರದ ನಿವಾಸದಲ್ಲಿತ್ತು. ನಮ್ಮ ಸ್ನೇಹಿತರು ಈಗ ಅದಕ್ಕೆ ಹೊಸ ರೂಪ ಕೊಟ್ಟು ತಂದಿದ್ದಾರೆ ಎಂದು ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com