ಬೆಂಗಳೂರು: ಬೆಂಗಳೂರು ಮೆಟ್ರೊ ರೈಲು ನಿಗಮ ಹಸಿರು ಮಾರ್ಗದಿಂದ ನೇರಳೆ ಮಾರ್ಗಕ್ಕೆ ಪ್ರಯಾಣ ಬದಲಿಸುವ ಪ್ರಯಾಣಿಕರಿಗಾಗಿ ನಾಡಪ್ರಭು ಕೆಂಪೇಗೌಡ ಮೆಜೆಸ್ಟಿಕ್ ನಿಲ್ದಾಣದಲ್ಲಿ ಹೆಚ್ಚುವರಿ ಪ್ರವೇಶದ್ವಾರವನ್ನು ತೆರೆದಿದೆ. ಪ್ರಯಾಣಿಕರು ಈ ಸೌಲಭ್ಯವನ್ನು ಬಳಸಿಕೊಳ್ಳಬಹುದು ಎಂದು ನಿಗಮ ತಿಳಿಸಿದೆ.
ಬರೋಬ್ಬರಿ 73ಕಿಲೋ ಮೀಟರ್ ಪ್ರಯಾಣ ಜಾಲ ಹೊಂದಿರುವ ಬೆಂಗಳೂರಿನ ನಮ್ಮ ಮೆಟ್ರೋ ದೇಶದ ಎರಡನೇ ಅತೀ ದೊಡ್ಡ ಮೆಟ್ರೋ ಸಂಪರ್ಕ ಜಾಲ ಹೊಂದಿರುವ ನಗರದ ಸಾಲಿಗೆ ಸೇರಿದೆ. ದಿನೇ ದಿನೆ ಹೆಚ್ಚಾಗುತ್ತಿರುವ ಪ್ರಯಾಣಿಕರ ದಟ್ಟಣೆಗೆ ಅನುಗುಣವಾಗಿ ಮೆಜೆಸ್ಟಿಕ್ ಇಂಟರ್‌ಚೇಂಜ್ ನಿಲ್ದಾಣದಲ್ಲಿ ಹೊಸ ಸೌಲಭ್ಯವೊಂದನ್ನು ಕಲ್ಪಿಸಿದೆ.
ನಾಡಪ್ರಭು ಕೆಂಪೇಗೌಡ ನಿಲ್ದಾಣ ಮೆಜೆಸ್ಟಿಕ್ ನಲ್ಲಿ ಹಸಿರು ಮಾರ್ಗದಿಂದ ನೇರಳೆ ಮಾರ್ಗಕ್ಕೆ ಬದಲಾಯಿಸುವ ಮತ್ತೊಂದು ಪ್ರವೇಶ ದ್ವಾರವನ್ನು ತೆರೆಯಲಾಗಿದೆ. ಈ ಸೌಲಭ್ಯವನ್ನು ಬಳಸಿಕೊಳ್ಳುವಂತೆ ತಿಳಿಸಿದೆ. ಇದೇ ವರ್ಷ ಮೇ 21ರಂದು ಮೆಜೆಸ್ಟಿಕ್ ನಿಲ್ದಾಣದಲ್ಲಿ ಪ್ರವೇಶ ದ್ವಾರ ತೆರೆಯಲಾಗಿತ್ತು. ಇದೀಗ ಮತ್ತೊಂದು ಪ್ರವೇಶ ದ್ವಾರ ತೆರೆಯುವ ಮೂಲಕ ನಿಲ್ದಾಣದಲ್ಲಿ ದಟ್ಟಣೆ ತಡೆಯಲು ಈ ಕ್ರಮ ಕೈಗೊಳ್ಳಲಾಗಿದೆ.
Advertisement