ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ಧರೆಗುರುಳಿದ ಬೃಹತ್ ಗಾತ್ರದ ಮರ: 3 ಕಾರುಗಳು ಜಖಂ, ಇಬ್ಬರಿಗೆ ಗಾಯ

ಭಾನುವಾರ ಸಂಜೆ ಬೃಹತ್ ಮರವೊಂದು ನಡುರಸ್ತೆಯಲ್ಲಿ ಉರುಳಿ ಬಿದ್ದಿದ್ದು, ಈ ವೇಳೆ ರಸ್ತೆಯಲ್ಲಿ ಚಲಿಸುತ್ತಿದ್ದ ಮೂರು ಕಾರುಗಳು ಅಡಿಗೆ ಸಿಲುಕಿವೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ಬೆಂಗಳೂರು: ಒಣಗಿದ್ದ ಬೃಹತ್ ಗಾತ್ರದ ಮರವೊಂದು ಧರೆಗುರುಳಿ ಬಿದ್ದ ಪರಿಣಾಮ 3 ಕಾರುಗಳು ಜಖಂಗೊಂಡು, ಇಬ್ಬರಿಗೆ ಗಾಯವಾಗಿರುವ ಘಟನೆ ನಗರದ ಎಂ.ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಭಾನುವಾರ ನಡೆದಿದೆ.

ನಿನ್ನೆ (ಸೆ.1) ಸಂಜೆ ಬೃಹತ್ ಮರವೊಂದು ನಡುರಸ್ತೆಯಲ್ಲಿ ಉರುಳಿ ಬಿದ್ದಿದ್ದು, ಈ ವೇಳೆ ರಸ್ತೆಯಲ್ಲಿ ಚಲಿಸುತ್ತಿದ್ದ ಮೂರು ಕಾರುಗಳು ಅಡಿಗೆ ಸಿಲುಕಿವೆ. ಪರಿಣಾಮ ಇಬ್ಬರು ಗಾಯಗೊಂಡಿದ್ದಾರೆಂದು ತಿಳಿದುಬಂದಿದೆ.

ಸಂಗ್ರಹ ಚಿತ್ರ
ಬೆಂಗಳೂರು ಮಳೆ: ಧರೆಗುರುಳಿದ ಮರ, ಆಟೋ ರಿಕ್ಷಾ ಚಾಲಕನ ಬಲಿ!

ಗಾಯಾಳುಗಳನ್ನು ಕೂಡಲೇ ಸ್ಥಳೀಯರು ರಕ್ಷಣೆ ಮಾಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸದ್ಯ ಬಿಬಿಎಂಪಿ ಅರಣ್ಯ ಸಿಬ್ಬಂದಿಗಳು ಮರವನ್ನು ತೆರವುಗೊಳಿಸಿದ್ದು, ಸ್ಥಳಕ್ಕೆ ಕಬ್ಬನ್ ಪಾರ್ಕ್ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com